ಜಯದೇವ ಆಸ್ಪತ್ರೆ, ನಿತಿನ್ ಕಾಮತ್, ಅದಿತಿ ಅಶೋಕ್ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತರು

 Kempegowda International Award : ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ, ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದರು.

Written by - Prashobh Devanahalli | Edited by - Savita M B | Last Updated : Jun 27, 2023, 10:29 AM IST
  • ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ
  • ಬೆಂಗಳೂರಿನ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಕೂಡ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
  • ನಿತಿನ್ ಕಾಮತ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ
ಜಯದೇವ ಆಸ್ಪತ್ರೆ, ನಿತಿನ್ ಕಾಮತ್, ಅದಿತಿ ಅಶೋಕ್ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತರು title=

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಕುರಿತು ಮಾಧ್ಯಮಗೋಷ್ಠಿ ನಡೆಸಿದ ಇವರು,ಈ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಬಿ.ಎಲ್ ಶಂಕರ್ ಅವರ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಚರ್ಚೆ ಮಾಡಿ ಮೂವರು ಸಾಧಕರ ಆಯ್ಕೆ ಮಾಡಿದೆ.ಈ ಪ್ರಶಸ್ತಿ ಜೊತೆಗೆ 5 ಲಕ್ಷ ನೀಡುವ ಪದ್ಧತಿ ನಡೆದುಕೊಂಡು ಬಂದಿದೆ, ಎಂದರು.

ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಡಾ. ಮಂಜುನಾಥ್ ಅವರಿಂದ ಕಸಗುಡಿಸುವ ಕೆಲಸಗಾರರವರೆಗೂ ಎಲ್ಲರೂ ಸೇವೆ ಸಲ್ಲಿಸಿದ್ದು, ಹೀಗಾಗಿ ಈ ಸಂಸ್ಥೆಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. 1600 ಬೆಡ್ ಸೌಲಭ್ಯ ಹೊಂದಿರುವ ಆಸ್ಪತ್ರೆಯು ಬಹಳ ಕಡಿಮೆ ದರದಲ್ಲಿ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಸೇವೆ ನೀಡುತ್ತಾ ಬಂದಿದೆ. 

ಇನ್ನು ಕಿರಿಯ ವಯಸ್ಸಿನಲ್ಲೇ ಜೇರೋಧ ಎಂಬ ನವೋದ್ಯಮ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಬೆಳೆದಿರುವ ನಿತಿನ್ ಕಾಮತ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ನವೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಈ ಸಂಸ್ಥೆಯಿಂದ ಬರುವ 25% ರಷ್ಟು ದುಡಿಮೆ ಹಣವನ್ನು ಸಾಮಾಜಿಕ ಸೇವೆಗೆ ಮುಡಿಪಿಟ್ಟಿದ್ದಾರೆ. 

ಇದನ್ನೂ ಓದಿ-10 ಕೆಜಿ ಅಲ್ಲ 6 ಕೆಜಿ ಅಕ್ಕಿ ವಿತರಣೆಗೂ ಸರ್ವರ್ ಡೌನ್ ಡೌನ್ !

ಇನ್ನು ಬೆಂಗಳೂರಿನ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಕೂಡ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅದಿತಿ ಅಶೋಕ್ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನ ಪಡೆದು ದೇಶಕ್ಕೆ ಕೀರ್ತಿ ತಂದಿದ್ದರು. ವಿಶ್ವ ಗಾಲ್ಫ್ ಕ್ರೀಡೆಯಲ್ಲಿ ಎತ್ತರದ ಸಾಧನೆ ಮಾಡಿರುವ ಆಟಗಾರ್ತಿ ಅದಿತಿ ಅಶೋಕ್ ಆಗಿದ್ದಾರೆ. 

ಈ ಬಾರಿ ಆರೋಗ್ಯ, ಉದ್ದಿಮೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಈ ಮೂವರು ವ್ಯಕ್ತಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಸಾಧಕರಿಗೆ ನಾಳೆ ವಿಧಾನಸೌಧದಲ್ಲಿ ನಡೆಯಲಿರುವ 514ನೇ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಳೆದ ಸರ್ಕಾರ ಹಾಸನದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿತ್ತು ಅದನ್ನು ಅಡ್ಡಿಪಡಿಸಲು ನಾವು ಇಚ್ಛಿಸುವುದಿಲ್ಲ. ಬೆಂಗಳೂರಿನ ಕಾರ್ಯಕ್ರಮ ಮುಗಿಸಿ ನಂತರ ಹಾಸನ ಕಾರ್ಯಕ್ರಮಕ್ಕೆ ತೆರಳುತ್ತೇನೆ, ಎಂದರು.

ಇದನ್ನೂ ಓದಿ-Nag Panchami 2023: ನಾಗಪಂಚಮಿಯ ದಿನಾಂಕ ಮತ್ತು ಪೂಜೆಯ ಮುಹೂರ್ತ ತಿಳಿಯಿರಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 

 

Trending News