ʻಟಗರು ಪಲ್ಯʼದ ʻ7 ಸ್ಟಾರ್​ ಸುಲ್ತಾನ್ʼನ ಕುರುಬಾನಿ ಕ್ಯಾನ್ಸಲ್.. ಚಿತ್ರತಂಡ, ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಮಾಲೀಕ

7 Star Sultan acted in Tagaru Palya: ಯಾವುದೇ ಕಾರಣಕ್ಕೂ 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡಬಾರದು ಎಂಬ ದೊಡ್ಡ ಅಭಿಯಾನವೇ ಶುರುವಾಗಿತ್ತು. ಈ ಬಗ್ಗೆ ಟಗರು ಪಲ್ಯ ಚಿತ್ರತಂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿತ್ತು. 

Written by - YASHODHA POOJARI | Edited by - Chetana Devarmani | Last Updated : Jun 27, 2023, 01:42 PM IST
  • ಡಾಲಿ ಧನಂಜಯ್ ನಿರ್ಮಾಣದ ʻಟಗರು ಪಲ್ಯʼ
  • ʻಟಗರು ಪಲ್ಯʼದ ʻ7 ಸ್ಟಾರ್​ ಸುಲ್ತಾನ್ʼನ ಕುರುಬಾನಿ ಕ್ಯಾನ್ಸಲ್
  • ಚಿತ್ರತಂಡ, ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಮಾಲೀಕ
ʻಟಗರು ಪಲ್ಯʼದ ʻ7 ಸ್ಟಾರ್​ ಸುಲ್ತಾನ್ʼನ ಕುರುಬಾನಿ ಕ್ಯಾನ್ಸಲ್.. ಚಿತ್ರತಂಡ, ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಮಾಲೀಕ  title=
Tagaru Palya

Tagaru Palya: ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ. ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಅನೇಕ ಟಗರು ಕಾಳಗದಲ್ಲಿ ಗೆದ್ದಿ ಬೀಗಿರುವ 7 ಸ್ಟಾರ್ ಸುಲ್ತಾನ ಹೆಸರಿನ ಟಗರನ್ನು ಬಕ್ರೀದ್ ಹಬ್ಬಕ್ಕೆ ಕುರುಬಾನಿ ಕೊಡಲು ಮಾಲೀಕ ತೀರ್ಮಾನ ನಡೆಸಿದ್ದರು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಯಾವುದೇ ಕಾರಣಕ್ಕೂ 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡಬಾರದು ಎಂಬ ದೊಡ್ಡ ಅಭಿಯಾನವೇ ಶುರುವಾಗಿತ್ತು. ಈ ಬಗ್ಗೆ ಟಗರು ಪಲ್ಯ ಚಿತ್ರತಂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿತ್ತು. ಅಭಿಮಾನಿಗಳು ಹಾಗೂ ಚಿತ್ರತಂಡದ ಮನವಿಗೆ ಪ್ರತಿಫಲ ಸಿಕ್ಕಿದ್ದು, 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡದಿರಲು ಮಾಲೀಕರು ತೀರ್ಮಾನ ನಡೆಸಿದ್ದಾರೆ. 

ಇದನ್ನೂ ಓದಿ: ಸಾವಿನ ನೆಪದಲ್ಲಿ ದೂರವಾದರು..ಸಾವಿರ ನೆನಪುಗಳಲ್ಲಿ ಜೀವಿಸುತ್ತಿರುವ ಅಪ್ಪು..ಅಪರೂಪದ ಚಿತ್ರಕ್ಕೆ ಇರಲಿ ಅಂತರಾಳದಿಂದ ಮೆಚ್ಚುಗೆ

ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದ‌ ಮಾಲೀಕ ಯುನೀಸ್ ಗಡೇದ್ ಬಕ್ರೀದ್ ಹಬ್ಬಕ್ಕೆ ಕುರ್ಬಾನಿ ಕೊಡಲೆಂದೇ ಎರಡೂವರೆ ವರ್ಷದ ಹಿಂದೆ 7 ಸ್ಟಾರ್ ಸುಲ್ತಾನ್ ಟಗರನ್ನು 1 ಲಕ್ಷ 88 ಸಾವಿರದ ಐನೂರು ರೂ ಗೆ ಖರೀದಿಸಿದ್ದರು. ಆದ್ರೆ ಕುರ್ಬಾನಿಗೂ ಮುನ್ನ ಟಗರನ್ನು ಕಾಳಗಕ್ಕೆ ಇಳಿಸಲಾಗಿದ್ದು ಟಗರು ಅನೇಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ಇಲ್ಲಿಯ ವರೆಗೆ 34 ಕಣಗಳಲ್ಲಿ ಪ್ರಥಮ ಬಹುಮಾನ ಗಳಿಸಿದ್ದು ಸುಮಾರು 20 ಲಕ್ಷದಷ್ಟು ಹಣ, ಬೆಳ್ಳಿ, ಬಂಗಾರ, ಬೈಕ್ಗಳನ್ನ ಗೆದ್ದು ಬೀಗಿದೆ. ಹೀಗಾಗಿ ಮಾಲೀಕ ಯುನೀಸ್ ಈ ಟಗರಿಗೆ 7 ಸ್ಟಾರ್ ಸುಲ್ತಾನ್ ಎಂದು ಹೆಸರಿಟ್ಟರು. ಆದ್ರೆ ಅಂದುಕೊಂಡಂತೆ ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಈ ಟಗರನ್ನ ಕುರ್ಬಾನಿ ನೀಡಲು ನಿರ್ಧರಿಸಿದ್ದರು. ಸಾಧಕ ಟಗರನ್ನು ಕುರ್ಬಾನಿ‌ ಮಾಡದಂತೆ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿತ್ತು. ಹೀಗಾಗಿ ಅಭಿಮಾನಿಗಳ ಒತ್ತಾಸೆಗೆ‌ ಮಣಿದು 7 ಸ್ಟಾರ್ ಸುಲ್ತಾನನ ಕುರ್ಬಾನಿ ಕೊಡದಿರಲು ಯುನೀಸ್ ನಿರ್ಧರಿಸಿದ್ದಾರೆ. 

ಯಾವಾಗ ರಿಲೀಸ್ ‘ಟಗರು ಪಲ್ಯ’?

ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಚಿತ್ರ ನಿರ್ಮಿಸಲು ಧನಂಜಯ್ ಪ್ರಾರಂಭಿಸುವ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ‌ ಮೂರನೇ ಕೊಡುಗೆ ಟಗರು ಪಲ್ಯ. ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡತಾರಾಬಳಗವಿರುವ ಟಗರು ಪಲ್ಯ ಸಿನಿಮಾಗೆ ವಾಸುಕಿ ವೈಭವ್ ಟ್ಯೂನ್ ಹಾಕಿದ್ದು, ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರ‌ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

ಇದನ್ನೂ ಓದಿ: Guntur Kaaram: ಮಹೇಶ್ ಬಾಬು ಸಿನಿಮಾದಿಂದ ಪೂಜಾ ಹೆಗ್ಡೆ ಔಟ್, ಮತ್ತೊಬ್ಬ ಸ್ಟಾರ್ ನಟಿ ಎಂಟ್ರಿ!?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News