ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ನೇರ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಈ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಜನಾಂಗಕ್ಕೆ ಸೇರಿದ ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಮತ್ತು ಭಾರತದ IIT’S IIM’S, ISC, ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪದವಿ/ಸ್ನಾತಕೋತ್ತರ ಕೋರ್ಸ್ಗಳಿಗೆ ವಿದ್ಯಾಭ್ಯಾಸ ಮಾಡಲು ಸಂಪೂರ್ಣ ಕೋರ್ಸ್ಗೆ ೨೦ ಲಕ್ಷ ರೂ. ಗಳವರೆಗೆ ಸಾಲ ನೀಡಲಾಗುತ್ತದೆ.
ಇದನ್ನೂ ಓದಿ: ಗೃಹಜ್ಯೋತಿ ಯೋಜನೆಗೆ ಹೆಚ್ಚು ಹಣ ವಸೂಲಿ ಮಾಡಿದರೆ ಕಠಿಣ ಕ್ರಮ
ಅಭ್ಯರ್ಥಿಗಳ ವಯೋಮಿತಿ ೩೮ ವರ್ಷ ಮೀರರಬಾರದು. ನಿಗಮಕ್ಕೆ ಆಸ್ತಿಯ (ಕಟ್ಟಡ/ಭೂಮಿ) ಅಡಮಾನ ಮೇಲೆ ಮಾತ್ರ ಸಾಲ ಒದಗಿಸಲಾಗುತ್ತದೆ. ಇಂತಹ ಕೋರ್ಸ್ಗಳಿಗೆ ಆಯ್ಕೆಯಾದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು http//kmdconline.karnataka.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಈಗಾಗಲೇ ೨೦೨೩ರ ಜೂನ್ ೧೩ ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.ಅರ್ಜಿಯ ಜೊತೆಗೆ ಆನ್ಲೈನ್ನಲ್ಲಿ ನೊಂದಾಯಿಸಿರುವ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ಕಲಬುರಗಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.