ಬೆಂಗಳೂರು: ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಬಿಜೆಪಿ ನಾಯಕರು ಕಂಗೆಟ್ಟಿದ್ದಾರೆ. ಇದರಿಂದ ಬಿಜೆಪಿಯಲ್ಲಿ ಆಂತರಿಕ ಕಲಹ ಜೋರಾಗಿದ್ದು, ನಾಯಕರು ಪರಸ್ಪರ ಟೀಕಾಪ್ರಹಾರ ನಡೆಸುತ್ತಿದ್ದಾರೆ. ಇದೇ ವಿಚಾರವಾಗಿ ಗುರುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದೆ.
#BJPvsBJP ಹ್ಯಾಶ್ಟ್ಯಾಗ್ ಬಳಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಇತಿಹಾಸದಲ್ಲಿ ಮೊದಲ ಬಾರಿಗೆ RSSನವರ ಲಾಠಿ ಉಪಯೋಗಕ್ಕೆ ಬರಲಿದೆ, ಸದ್ಯದ ಸ್ಥಿತಿಯಲ್ಲಿ ಬಿಜೆಪಿಗರ ಕೈಗೆ ಕೊಟ್ಟರೆ ಬಡಿದಾಡಿಕೊಳ್ಳಲು ಬಳಸುತ್ತಾರೆ. ಆ ನಂತರ ಬದುಕುಳಿದವರಿಗೆ ಅಧ್ಯಕ್ಷ, ವಿಪಕ್ಷ ನಾಯಕನ ಸ್ಥಾನ ಕೊಟ್ಟು ಕೂರಿಸಬಹುದು. RSS ನಾಯಕರಿಗೆ ಬಿಜೆಪಿಯ ಗೊಂದಲ ಬಗೆಹರಿಸಲು ಉತ್ತಮ ಐಡಿಯಾವನ್ನು ಕಾಂಗ್ರೆಸ್ ಕಡೆಯಿಂದ ಫ್ರಿಯಾಗಿ ನೀಡುತ್ತಿದ್ದೇವೆ!’ ಎಂದು ಕುಟುಕಿದೆ.
ಇದನ್ನೂ ಓದಿ: ಒಂದೆರಡು ದಿನಗಳಲ್ಲಿ ವಿಪಕ್ಷ ಸ್ಥಾನ ಘೋಷಣೆ: ಯಾವ ಬಣಕ್ಕೆ ಮಣೆ!
ಇತಿಹಾಸದಲ್ಲಿ ಮೊದಲ ಬಾರಿಗೆ ಆರ್ಎಸ್ಎಸ್ ನವರ ಲಾಠಿ ಉಪಯೋಗಕ್ಕೆ ಬರಲಿದೆ,
ಸದ್ಯದ ಸ್ಥಿತಿಯಲ್ಲಿ ಬಿಜೆಪಿಗರ ಕೈಗೆ ಕೊಟ್ಟರೆ ಬಡಿದಾಡಿಕೊಳ್ಳಲು ಬಳಸುತ್ತಾರೆ.
ಆ ನಂತರ ಬದುಕುಳಿದವರಿಗೆ ಅಧ್ಯಕ್ಷ, ವಿಪಕ್ಷ ನಾಯಕನ ಸ್ಥಾನ ಕೊಟ್ಟು ಕೂರಿಸಬಹುದು,
ಆರ್ಎಸ್ಎಸ್ ನಾಯಕರಿಗೆ ಬಿಜೆಪಿಯ ಗೊಂದಲ ಬಗೆಹರಿಸಲು ಉತ್ತಮ ಐಡಿಯಾವನ್ನು ಕಾಂಗ್ರೆಸ್ ಕಡೆಯಿಂದ…
— Karnataka Congress (@INCKarnataka) June 29, 2023
‘ಬಿಜೆಪಿಯ ಸೋಲಿನ ಆತ್ಮವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ರೀತಿಯ ಅವಲೋಕನ, ಅಧ್ಯಕ್ಷರಿಂದ ಸೋಲಾಯ್ತು, ವಲಸಿಗರಿಂದ ಸೋಲಾಯ್ತು, ಅಡ್ಜಸ್ಟ್ಮೆಂಟ್ನಿಂದ ಸೋಲಾಯ್ತು, ಬಡವರ ಅಕ್ಕಿ ಕಿತ್ತುಕೊಂಡು ಸೋಲಾಯ್ತು, ಪ್ರಧಾನಿ ಮೋದಿ ಬೀದಿ ಸುತ್ತಿದ್ದಕ್ಕೆ ಸೋಲಾಯ್ತು, ಗುಜರಾತ್ ಮಾಡೆಲ್ನಿಂದ ಸೋಲಾಯ್ತು ಮತ್ತು ಪಕ್ಷದ್ರೋಹಿಗಳಿಂದ ಸೋಲಾಯ್ತು ಹೀಗೆ ಸೋಲಿನ ಕಾರಣ ಹಲವಾರಿದೆ. ಅಕಸ್ಮಾತ್ ಗೆಲುವಾಗಿದ್ದಿದ್ದರೆ ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಪ್ರಧಾನಿ ಮೋದಿಯಿಂದ ಗೆಲುವಾಯ್ತು, ಜೋಶಿ, ಸಂತೋಷರಿಂದ ಗೆಲುವಾಯ್ತು! ಅಂತೂ ಇಂತೂ ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ!’ ಅಂತಾ ಕಾಂಗ್ರೆಸ್ ಟೀಕಿಸಿದೆ.
‘ರಾಜ್ಯಧ್ಯಕ್ಷರಿಂದಲೇ ಬಿಜೆಪಿಗೆ ಸೋಲಾಗಿದ್ದು ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರು ಈ ಆರೋಪ ಕೇಳಿಯೂ ಸುಮ್ಮನಿರುವುದೇಕೆ? ನನ್ನದೇನೂ ತಪ್ಪಿಲ್ಲ, ಶಾಡೋ ಅಧ್ಯಕ್ಷರಾದ ಜೋಶಿ, ಸಂತೋಷ್ ಅವರೇ ಸೋಲಿಗೆ ಹೊಣೆ ಎಂದು ಘೋಷಿಸಿಬಿಡಲಿ! ಸೋಲಿಗೆ ಸರದಾರರಾದ ಜೋಶಿ, ಸಂತೋಷ್ ಅವರುಗಳ ಹೆಸರೆತ್ತಲು ಬಿಜೆಪಿಗರು ಭಯಪಾಡುತ್ತಿರುವುದೇಕೆ?’ ಅಂತಾ ಕಾಂಗ್ರೆಸ್ ಪ್ರಶ್ನಿಸಿದೆ.
ಬಿಜೆಪಿಯ ಸೋಲಿನ ಆತ್ಮವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ!
ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ,
>ಅಧ್ಯಕ್ಷರಿಂದ ಸೋಲಾಯ್ತು
>ವಲಸಿಗರಿಂದ ಸೋಲಾಯ್ತು
>ಅಡ್ಜಸ್ಟ್ಮೆಂಟ್ ನಿಂದ ಸೋಲಾಯ್ತು
>ಬಡವರ ಅಕ್ಕಿ ಕಿತ್ತುಕೊಂಡು ಸೋಲಾಯ್ತು
>ಮೋದಿ ಬೀದಿ ಸುತ್ತಿದ್ದಕ್ಕೆ ಸೋಲಾಯ್ತು
>ಗುಜರಾತ್ ಮಾಡೆಲ್ ನಿಂದ ಸೋಲಾಯ್ತು
>ಪಕ್ಷದ್ರೋಹಿಗಳಿಂದ ಸೋಲಾಯ್ತು…— Karnataka Congress (@INCKarnataka) June 29, 2023
ಇದನ್ನೂ ಓದಿ: ಮುಂದುವರೆದ ರೇಣುಕಾಚಾರ್ಯ ವಾಗ್ದಾಳಿ; ಸುಧಾಕರ್, ಕಟೀಲ್, ಅಣ್ಣಾಮಲೈ ವಿರುದ್ಧ ಅಸಮಾಧಾನ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.