ಗುರುಪೂರ್ಣಿಮೆ ಹಿನ್ನೆಲೆ ಸಾಯಿಬಾಬಾಗೆ ವಿಶೇಷ ಅಲಂಕಾರ

ಬಾಬಾರನ್ನು ಬಗೆ ಬಗೆಯ ಹೂವುಗಳು, ಹಣ್ಣುಗಳು, ಬಾದಾಮಿ, ಖರ್ಜೂರ, ಒಣಹಣ್ಣುಗಳು, ಬೆಲ್ಲದಿಂದ ಸಿಂಗರಿಸುತ್ತಿದ್ದು, ಕೆಂದು ಬಣ್ಣದ ಎಳನೀರಿನಿಂದ ವಿಶೇಷ ಅಲಂಕಾರ ಮಾಡಲಾಗುತ್ತಿದೆ

Written by - Manjunath Hosahalli | Edited by - Yashaswini V | Last Updated : Jun 29, 2023, 04:41 PM IST
  • ಗುರು ಪೂರ್ಣಿಮೆಯಂದು ಶಿರಡಿ ಸಾಯಿ ಬಾಬಾ ಅವರಿಗೆ ಅಭಿಷೇಕ, ಹೋಮ, ಪ್ರಸಾದ ಸೇವೆ, ಅಲಂಕಾರ ಸೇವೆ, ಸರ್ವ ಸೇವೆ ಒಳಗೊಂಡಂತೆ ಎಲ್ಲಾ ರೀತಿಯ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿದೆ.
  • ಸೋಮವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಭಕ್ತರಿಗೆ ನಿರಂತರವಾಗಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ ಎಂದು ದೇವಸ್ಥಾನದ ಟ್ರಸ್ಟ್ ನ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಗುರುಪೂರ್ಣಿಮೆ ಹಿನ್ನೆಲೆ ಸಾಯಿಬಾಬಾಗೆ ವಿಶೇಷ ಅಲಂಕಾರ title=
Shirdi Sai Baba

ಬೆಂಗಳೂರು: ಜೆ.ಪಿ. ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ಜುಲೈ 3ರಂದು ವಿಶೇಷ ಗುರುಪೂರ್ಣಿಮೆ ಆಚರಿಸಲಾಗುತ್ತಿದೆ. ಶಿರಡಿ ಸಾಯಿ ಬಾಬಾರಿಗೆ ವಿಶೇಷ ಅಲಂಕಾರ, ವೈಭವದ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿದೆ.

ಬಾಬಾರನ್ನು ಬಗೆ ಬಗೆಯ ಹೂವುಗಳು, ಹಣ್ಣುಗಳು, ಬಾದಾಮಿ, ಖರ್ಜೂರ, ಒಣಹಣ್ಣುಗಳು, ಬೆಲ್ಲದಿಂದ ಸಿಂಗರಿಸುತ್ತಿದ್ದು, ಕೆಂದು ಬಣ್ಣದ ಎಳನೀರಿನಿಂದ ವಿಶೇಷ ಅಲಂಕಾರ ಮಾಡಲಾಗುತ್ತಿದೆ ಎಂದು ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ಅಧ್ಯಕ್ಷ ಲೋಕರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮ

ಗುರು ಪೂರ್ಣಿಮೆಯಂದು ಶಿರಡಿ ಸಾಯಿ ಬಾಬಾ ಅವರಿಗೆ ಅಭಿಷೇಕ, ಹೋಮ, ಪ್ರಸಾದ ಸೇವೆ, ಅಲಂಕಾರ ಸೇವೆ, ಸರ್ವ ಸೇವೆ ಒಳಗೊಂಡಂತೆ ಎಲ್ಲಾ ರೀತಿಯ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿದೆ. ಸೋಮವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಭಕ್ತರಿಗೆ ನಿರಂತರವಾಗಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ ಎಂದು ದೇವಸ್ಥಾನದ ಟ್ರಸ್ಟ್ ನ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಇದನ್ನೂ ಓದಿ- ಈ ವರ್ಷ ತುಳಸಿ ವಿವಾಹದಂದು ಅದ್ಭುತ ಶುಭ ಯೋಗ

ಪ್ರತಿವರ್ಷ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ಅದ್ದೂರಿಯಾಗಿ ಗುರು ಪೂರ್ಣಿಮೆ ಆಚರಿಸುತ್ತಿದ್ದು, ಈ ಬಾರಿ ಮತ್ತಷ್ಟು ಸಂಭ್ರಮ ಮತ್ತು ವಿಶೇಷತೆಗಳೊಂದಿಗೆ ಸಾಯಿ ಬಾಬಾರ ಸ್ಮರಣೆಗೆ ವ್ಯವಸ್ಥೆ ಮಾಡಲಾಗಿದೆ. ಬಾಬಾರ "ಸಬ್ ಕಾ ಮಾಲೀಕ್ ಏಕ್ ಹೇ" ಎಂಬ ಪರಿಕಲ್ಪನೆಯಡಿ ಬಡವ, ಬಲ್ಲಿದ ಬೇಧ-ಭಾವವಿಲ್ಲದೇ ಎಲ್ಲಾ ಸಮುದಾಯದವರಿಗೆ ಮುಕ್ತ ಸ್ವಾಗತ ಕೋರುತ್ತಿರುವುದಾಗಿ ಟ್ರಸ್ಟ್ ಅಧ್ಯಕ್ಷ ಲೋಕರಾಜ್‌ ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News