ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಸಾರಿಗೆ ನಿಗಮಗಳಲ್ಲಿ ಖಾಲಿ ಇರುವ 13,415 ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು’ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: Rain Alert: ರಾಜ್ಯದ ಈ ಭಾಗಗಳಲ್ಲಿ ಮುಂದಿನ 9 ದಿನ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ: ಇಲಾಖೆ ಮುನ್ಸೂಚನೆ
‘ನಿವೃತ್ತಿ, ಮರಣ ಸೇರಿ ವಿವಿಧ ಕಾರಣಗಳಿಂದ ಕಳೆದ ಹಲವಾರು ವರ್ಷಗಳಿಂದ ಚಾಲಕರು, ನಿರ್ವಾಹಕರು, ತಾಂತ್ರಿಕ ವಿಭಾಗ ಸೇರಿ ಇತರೆ ವಿಭಾಗಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಇದರಿಂದ ಉತ್ತಮ ಸೇವೆ ನೀಡಲು ಸಮಸ್ಯೆಯಾಗುತ್ತಿದೆ. ಇದನ್ನು ನಿವಾರಿಸಲು 4 ನಿಗಮಗಳಲ್ಲಿ ಖಾಲಿ ಇರುವ 13,415 ಹುದ್ದೆಗಳ ಭರ್ತಿಗೆ ನಿರ್ಧರಿಸಲಾಗಿದೆ’ ಎಂದು ರಾಮಲಿಂಗಾರೆಡ್ಡಿ ಹೇಳಿದರು.
KSRTCಯಲ್ಲಿ 3,745 ಚಾಲನಾ ಸಿಬ್ಬಂದಿ, 726 ತಾಂತ್ರಿಕ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆದಿದೆ. ಹೊಸದಾಗಿ 1,433 ಚಾಲನಾ ಸಿಬ್ಬಂದಿ, 2,738 ತಾಂತ್ರಿಕ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುವುದು. KSRTCಯಲ್ಲಿ 1,773 ನಿರ್ವಾಹಕರ ನೇಮಕಾತಿ ಮಾಡಿಕೊಳ್ಳಲಾಗುವುದು. BMTCಯಲ್ಲಿ 2000 ನಿರ್ವಾಹಕರು, 1 ಸಾವಿರ ಚಾಲಕ ಕಂ ನಿರ್ವಾಹಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.
ಇದನ್ನೂ ಓದಿ: ಉತ್ತರಾಖಂಡದಲ್ಲಿ ಶೀಘ್ರವೇ ಏಕರೂಪ ನಾಗರಿಕ ಸಂಹಿತೆ ಜಾರಿ: ಸಿಎಂ ಧಾಮಿ
ಆದಾಯ ಹೆಚ್ಚಳಕ್ಕೆ ಪೆಟ್ರೋಲ್ ಬಂಕ್!
KSRTC ಆದಾಯ ಹೆಚ್ಚಳ ಉದ್ದೇಶದಿಂದ ಸಂಸ್ಥೆಯ ಖಾಲಿ ನಿವೇಶನಗಳಲ್ಲಿ ಭಾರತ್ ಪೆಟ್ರೋಲಿಯಂ ಹಾಗೂ ಹಿಂದುಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳ ಔಟ್ಲೆಟ್ ತೆರೆಯಲು 10 ಕಡೆ ಜಾಗ ನೀಡಲಾಗುವುದು. 36 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್ ತೆರೆಯಲು ಜಾಗ ನೀಡಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.