ನಾವು ಕೊಟ್ಟಂತ ಭಾಷೆಯನ್ನು ಉಳಿಸಿಕೊಳ್ಳುತ್ತಿದ್ದೇವೆ"- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಜುಲೈ 14ರಿಂದ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಕೆ ಶುರು ಬಗ್ಗೆ ಮಾತನಾಡಿಕೊಂಡಿದ್ದೇವೆ.ಜುಲೈ 3 ಅಥವಾ 4ನೇ ತಾರೀಖಿನಂದು ಈ ಬಗ್ಗೆ ಘೋಷಣೆ ಮಾಡ್ತೀವಿ ಎಂದು ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.

Written by - Manjunath N | Last Updated : Jul 2, 2023, 08:23 PM IST
  • ಬಹಳ ನಿರೀಕ್ಷೆ ಇಟ್ಟುಕೊಂಡು ರಾಜ್ಯದ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ.
  • ಕೆಲಸ ಮಾಡಲು ನಮಗೆ ಸಮಯಾವಕಾಶ ನೀಡಿ ಅಂತಾ ಕೇಳುತ್ತಿದ್ದೇನೆ.
  • ಯಾವುದೇ ಗ್ಯಾರಂಟಿ ಆಗಲಿ, ನಮಗೆ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ.ಆದರೂ ನಾವು ದುಡ್ಡು ಕೊಟ್ಟು ನಮ್ಮ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ
ನಾವು ಕೊಟ್ಟಂತ ಭಾಷೆಯನ್ನು ಉಳಿಸಿಕೊಳ್ಳುತ್ತಿದ್ದೇವೆ"- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ title=
file photo

ಬೆಂಗಳೂರು: ಜುಲೈ 14ರಿಂದ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಕೆ ಶುರು ಬಗ್ಗೆ ಮಾತನಾಡಿಕೊಂಡಿದ್ದೇವೆ.ಜುಲೈ 3 ಅಥವಾ 4ನೇ ತಾರೀಖಿನಂದು ಈ ಬಗ್ಗೆ ಘೋಷಣೆ ಮಾಡ್ತೀವಿ ಎಂದು ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರೇಣುಕಾಚಾರ್ಯ-ಯಡಿಯೂರಪ್ಪ ಸುದೀರ್ಘ ಮಾತುಕತೆ: ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಸೂಚನೆ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವೈಎಸ್‌ಟಿ ಸಂಗ್ರಹ ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತ್ರಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳಕರ್ ಅವರು ಕೂಡ ಸರ್ಕಾರ ನಡೆಸಿದಂತ ಅನುಭವ ಇದ್ದವರು.ಕುಮಾರಸ್ವಾಮಿ ಅಣ್ಣ ಹಿರಿಯರು, ರಾಜಕೀಯ ಮುತ್ಸದ್ಧಿಗಳು.ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ.ಸರ್ಕಾರ ರಚನೆ ಆಗಿ ಈಗ ಒಂದು ತಿಂಗಳು, ಐದು ದಿನ ಆಗಿದೆ.ಸರ್ಕಾರಕ್ಕೆ ಕೆಲಸ ಮಾಡಲು ಬಿಡಿ.ಜನರು ಬಹಳಷ್ಟು ಆಶಾಭಾವನೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ.ಈಗಲೇ ನೀವು ಈ ರೀತಿ ಮಾತನಾಡಲು ಶುರು ಮಾಡಿದ್ರೆ ಅದು ತಪ್ಪಾಗುತ್ತೆ.ಸ್ವಲ್ಪ ಟೈಮ್ ಕೊಡಿ, ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಅವರನ್ನೇ ಕೇಳಿ ಎಂದು ಅವರು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಕೆಸಿಎನ್ ಮೋಹನ್ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಶೋಕ..!

ವಿಪಕ್ಷದವರು ಹತಾಶರಾಗಿದ್ದಾರಾ? ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು "ನಾನು ಹತಾಶರಾಗಿದ್ದಾರೆ ಏನೂ ಅಂತಾ ಹೇಳಲು ಬಯಸಲ್ಲ.ಬಹಳ ನಿರೀಕ್ಷೆ ಇಟ್ಟುಕೊಂಡು ರಾಜ್ಯದ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ.ಕೆಲಸ ಮಾಡಲು ನಮಗೆ ಸಮಯಾವಕಾಶ ನೀಡಿ ಅಂತಾ ಕೇಳುತ್ತಿದ್ದೇನೆ.ಯಾವುದೇ ಗ್ಯಾರಂಟಿ ಆಗಲಿ, ನಮಗೆ ಕೇಂದ್ರ ಸರ್ಕಾರ ಅಕ್ಕಿ  ಕೊಡಲಿಲ್ಲ.ಆದರೂ ನಾವು ದುಡ್ಡು ಕೊಟ್ಟು ನಮ್ಮ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ಈ ತಿಂಗಳಿಂದ ಗೃಹಜ್ಯೋತಿ, ಅನ್ನಭಾಗ್ಯ ಲಾಭ ಎಲ್ಲರಿಗೂ ಸಿಗುತ್ತೆ.ಮುಂದಿನ ಆಗಸ್ಟ್‌ನಿಂದ ಗೃಹಲಕ್ಷ್ಮೀ ಯೋಜನೆ ಮನೆಯ ಯಜಮಾನಿಗೆ ಸಿಗುತ್ತೆ.ಕೊಟ್ಟಂತ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ.ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ.ಮುಂದಿನ ದಿನಗಳಲ್ಲಿ ರಾಜ್ಯದ ಜನರ ನಿರೀಕ್ಷೆ ತಕ್ಕ ಹಾಗೇ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News