ಧಾರಾಕಾರ ಮಳೆಗೆ ತುಂಗಾ-ಭದ್ರಾ ನದಿಗೆ ಮತ್ತೆ ಜೀವಕಳೆ

ಕಾಫಿನಾಡ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ರಾಜ್ಯದ ಉದ್ದಗಲಕ್ಕೂ ಹರಿಯೋ ತುಂಗಾ-ಭದ್ರಾ-ಹೇಮಾವತಿ ನದಿ ಒಡಲಲ್ಲಿ ನೀರಿನ ಹರಿವಿನ ಪ್ರಮಾಣ ಕೂಡ ಹೆಚ್ಚುತ್ತಿದೆ. ಕಾಫಿನಾಡ ಮಳೆಯಿಂದ ಒಂದೆಡೆ ಖುಷಿ, ಮತ್ತೊಂದೆಡೆ ನೋವು...   

Written by - Yashaswini V | Last Updated : Jul 6, 2023, 10:30 AM IST
  • ಕಾಫಿನಾಡ ಘಟ್ಟಪ್ರದೇಶದಲ್ಲಿ ಭಾರೀ ಮಳೆ
  • ಮೈದುಂಬಿ ಹರಿಯುತ್ತಿವೆ ತುಂಗಾ-ಭದ್ರಾ, ಹೇಮಾವತಿ ನದಿಗಳು
  • ಸಪ್ತ ನದಿಗಳ ನಾಡಿನಲ್ಲಿ ಭಾರೀ ಮಳೆ: ಒಂದೆಡೆ ಖುಷಿ, ಮತ್ತೊಂದೆಡೆ ನೋವು
ಧಾರಾಕಾರ ಮಳೆಗೆ ತುಂಗಾ-ಭದ್ರಾ ನದಿಗೆ ಮತ್ತೆ ಜೀವಕಳೆ title=

Rain: ಇಡೀ ರಾಜ್ಯಕ್ಕೆ ನೀರುಣಿಸುತ್ತಿದ್ದ ಸಪ್ತ ನದಿಗಳ ನಾಡು ಕಾಫಿನಾಡಿನಲ್ಲಿ ಮಳೆ ಬಾರದ ಕಾರಣ ನದಿಗಳ ಒಡಲು ಬರಿದಾಗಿತ್ತು. ಮಳೆ ಬಾರದೇ  ಕಂಗೆಟ್ಟಿದ್ದ ಮಲೆನಾಡು ಸೇರಿದಂತೆ ಇಡೀ ರಾಜ್ಯದ ಜನತೆ ಮಳೆಗಾಗಿ ಮುಗಿಲಿನತ್ತ ಮುಖ ಮಾಡಿದ್ದರು. ಆಡರೀಗ, ಕಾಫಿನಾಡಿನಲ್ಲಿ ಮಳೆರಾಯ ಚುರುಕು ಪಡೆದುಕೊಳ್ಳುತ್ತಿದ್ದು ನದಿಗಳ ಒಡಲು  ಕ್ರಮೇಣ ಭರ್ತಿಯಾಗುತ್ತಿದ್ದು  ಮೈದುಂಬಿ ಹರಿಯುತ್ತಿವೆ. ಕಾಫಿನಾಡ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ರಾಜ್ಯದ ಉದ್ದಗಲಕ್ಕೂ ಹರಿಯೋ ತುಂಗಾ-ಭದ್ರಾ-ಹೇಮಾವತಿ ನದಿ ಒಡಲಲ್ಲಿ ನೀರಿನ ಹರಿವಿನ ಪ್ರಮಾಣ ಕೂಡ ಹೆಚ್ಚುತ್ತಿದೆ. ಕಾಫಿನಾಡ ಮಳೆಯಿಂದ ಒಂದೆಡೆ ಖುಷಿ, ಮತ್ತೊಂದೆಡೆ ನೋವು... ಅದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ... 

ಹೌದು, ಕಳೆದ ಒಂದು  ವಾರದಿಂದೀಚೇಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಭಾಗಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಆದರೆ, ಮಳೆಯ ತವರು ಎಂಬ ಖ್ಯಾತಿಗೆ ಪಾತ್ರವಾಗಿರುವ ಮಲೆನಾಡಿನಲ್ಲಿ ಮಳೆ ಬಾರದೇ ಜನ ಕಂಗಾಲಾಗಿದ್ದರು.  ಮಲೆನಾಡಿಗರು ಮಳೆಗಾಗಿ ಆಕಾಶ ನೋಡುತ್ತಿದ್ದರು. ಭಾರೀ ಗಾಳಿ ಜೊತೆ ಸಾಧಾರಣ ಮಳೆ ಸುರಿಯುತ್ತಿದ್ದರು ನದಿಗಳ ಒಡಲಲ್ಲಿ ನೀರಿನ ಮಟ್ಟ ಏರುತ್ತಿರಲಿಲ್ಲ.‌ ಆದರೆ, ನಿನ್ನೆ ಮೊನ್ನೆಯಿಂದ ಮಲೆನಾಡಲ್ಲಿ ಮಳೆರಾಯ ಚುರುಕು ಪಡೆದುಕೊಂಡಿದ್ದು ನಾಡಿಗೆ ನೀರಿನ ಸೌಲಭ್ಯ ಕಲ್ಪಿಸುವ ತುಂಗಾಭದ್ರ ಹಾಗೂ ಹೇಮಾವತಿ ಒಡಲಲ್ಲಿ ನಾಲ್ಕೈದು ಅಡಿಯಷ್ಟು ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. 

ಇದನ್ನೂ ಓದಿ- ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಡಿಸಿಎಂ ಮಾಸ್ಟರ್ ಪ್ಲಾನ್

ಇನ್ನೂ, ಹಾಸನದ ಗೊರೂರು ಡ್ಯಾಂ ತಲುಪಿ, ಅಲ್ಲಿಂದ ಕೆ.ಆರ್.ಎಸ್. ಮೂಲಕವಾಗಿ ರಾಜ್ಯ ರಾಜಧಾನಿ ಬೆಂಗಳೂರು ತಲುಪುವ ಹೇಮಾವತಿ ನದಿಯಲ್ಲಿ ಮೂರು ಅಡಿಯಷ್ಟು ನೀರಿನ ಪ್ರಮಾಣ ಹೆಚ್ಚಾಗಿದೆ. ಇನ್ನು ಬಳ್ಳಾರಿಯ ಹೊಸಪೇಟೆ ತಲುಪುವ ತುಂಗಾ-ಭದ್ರಾ ನದಿಯ ಒಳಹರಿವಿನಲ್ಲೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇದಲ್ಲದೆ, ಕಳಸ ತಾಲೂಕಿನ ಕುದುರೆಮುಖ ಘಟ್ಟ ಪ್ರದೇಶ, ಶೃಂಗೇರಿ ತಾಲೂಕಿನ ಕೆರೆಕಟ್ಟೆ ಘಟ್ಟ ಪ್ರದೇಶದಲ್ಲಿನ ಧಾರಾಕಾರ ಮಳೆಗೆ ತುಂಗಾ-ಭದ್ರಾ ನದಿಗೆ ಜೀವಕಳೆ ಬಂದಿದ್ದು, ಈ ಭಾಗದ ಜನರ ಮುಖದಲ್ಲಿ ಮಂದಹಾಸ ಮೂಡಿದೆ. 

ನದಿ ಒಡಲು ತುಂಬುತ್ತಿರೋದು ಒಂದೆಡೆಯಾದ್ರೆ ಗಾಳಿ-ಮಳೆಯಿಂದಾಗ್ತಿರೋ ಅನಾಹುತಗಳಿಗೇನು ಕೊರತೆ ಇಲ್ಲ. ಕಳಸ ತಾಲೂಕಿನ ಹೊರನಾಡಿನಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು ನಡೆಯಬೇಕಿದ್ದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕಳಸದಲ್ಲಿ ಬೀಸುತ್ತಿರುವ ರಣಗಾಳಿಗೆ ಹಿರೇಬೈಲ್ ಸಮೀಪದ ಇಡಕಣಿ‌ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಮನೆಯೊಡತಿ ನಾಗರತ್ನಮ್ಮ ಅಪಾಯದಿಂದ ಪಾರಾಗಿದ್ದಾರೆ. ಆದಾಗ್ಯೂ, ಮನೆಯಲ್ಲಿದ್ದ ವಸ್ತುಗಳು ನಾಶವಾಗಿವೆ.  ಮೂಡಿಗೆರೆಯಲ್ಲಿ ಗಾಳಿ ಅಬ್ಬರಕ್ಕೆ ವಿದ್ಯುತ್ ಕಂಬಗಳು ಮುರಿದು ಬೀಳುತ್ತಿದ್ದು, ಮೆಸ್ಕಾಂ ಸಿಬ್ಬಂದಿಗಳು ಸುರಿಯೋ ಮಳೆಯಲ್ಲೇ ವಿದ್ಯುತ್ ಕಂಬಗಳನ್ನ ದುರಸ್ಥಿ ಮಾಡುತ್ತಿದ್ದಾರೆ.‌ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ತರುವೆ, ಬಣಕಲ್, ಬಾಳೂರು, ದೇವರಮನೆ, ಗುತ್ತಿ, ಕುಂದೂರು, ಮತ್ತಿಕಟ್ಟೆ, ಜಾಣಿಗೆ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. 

ಇದನ್ನೂ ಓದಿ- ಹವಾಮಾನ ವೈಪರಿತ್ಯ ಸರ್ಕಾರಿ ಆಸ್ಪತ್ರೆಗೆ ರೋಗಿಗಳ ದಂಡು

ಒಟ್ಟಾರೆ, ಮಲೆನಾಡಲ್ಲಿ ಧಾರಾಕಾರ, ಭಾರೀ ಮಳೆಯಾಗದಿದ್ದರು ಸುರಿಯುತ್ತಿರೋ ಸಾಧಾರಣ ಮಳೆಯಿಂದ ನದಿಗಳ ಒಡಲು ತುಂಬುತ್ತಿದೆ.‌ ಆದರೆ, ಮಲೆನಾಡಿಗರು ಧಾರಾಕಾರ ಸುರಿದ್ರೆ ನೀರು ಹರಿದು ಹೋಗುತ್ತೆ. ಭೂಮಿ ನೀರು ಕುಡಿಯಬೇಕು ಅಂದ್ರೆ ಮಳೆ ಹೀಗೆ ಬರಬೇಕು. ಹೀಗೆ ಬರಲಿ ಎಂದು ಬಯಸುತ್ತಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News