Payal Ghosh : "ದೇಹ ಹಂಚಿಕೊಂಡಿದ್ದರೆ ಇಷ್ಟೊತ್ತಿಗಾಗಲೇ 30 ಸಿನಿಮಾಗಳಲ್ಲಿ ನಟಿಸಿರುತ್ತಿದ್ದೆ"

Payal Ghosh Viral Post : ಬಾಲಿವುಡ್‌ ನಟಿ ಪಾಯಲ್‌ ಘೋಷ್‌ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಸೋಷಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ವೊಂದನ್ನು ಹೊಂಚಿಕೊಂಡಿದ್ದು, ಕರೆದವರೊಡನೆ ದೇಹ ಹಂಚಿಕೊಂಡಿದ್ದರೆ ನಾನು ಇಷ್ಟೊತ್ತಿಗಾಗಲೇ 30 ಸಿನಿಮಾಗಳಲ್ಲಿ ನಟಿಸುತ್ತಿದ್ದೆ ಎಂದಿದ್ದಾರೆ.   

Written by - Savita M B | Last Updated : Jul 6, 2023, 06:38 PM IST
  • ನಟಿ ಪಾಯಲ್‌ ಘೋಷ್‌ ಸೋಷಿಯಲ್‌ ಮಿಡಿಯಾದಲ್ಲಿ ಸಕ್ರಿಯವಾಗಿರುವ ನಟಿ.
  • ನಟಿ ಸಾಮಾಜಿಕ ಜಾಲತಾಣದಲ್ಲಿ ಸದಾ ಒಂದಿಲ್ಲೊಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ.
  • ಪಾಯಲ್‌ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಅನುಭವದ ಮಾತೊಂದನ್ನು ಮನಸ್ಸು ಬಿಚ್ಚಿ ಹೇಳಿಕೊಂಡಿದ್ದಾರೆ.
Payal Ghosh : "ದೇಹ ಹಂಚಿಕೊಂಡಿದ್ದರೆ ಇಷ್ಟೊತ್ತಿಗಾಗಲೇ 30 ಸಿನಿಮಾಗಳಲ್ಲಿ ನಟಿಸಿರುತ್ತಿದ್ದೆ"  title=

Payal Ghosh Controversial Statement : ನಟಿ ಪಾಯಲ್‌ ಘೋಷ್‌ ಸೋಷಿಯಲ್‌ ಮಿಡಿಯಾದಲ್ಲಿ ಸಕ್ರಿಯವಾಗಿರುವ ನಟಿ. ಇವರು ತಮ್ಮ ಬೋಲ್ಡ್‌ ಲುಕ್‌ ಮೂಕಲವೇ ಎಲ್ಲರ ಗಮನ ಸೆಳೆಯುತ್ತಾರೆ. ಈ ನಟಿ ಸಾಮಾಜಿಕ ಜಾಲತಾಣದಲ್ಲಿ ಸದಾ ಒಂದಿಲ್ಲೊಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಕೆಲವು ದಿನಗಳ ಹಿಂದೆ ನಟಿ ಮೀಟೂ ಆರೋಪದ ವಿಚಾರವಾಗಿಯೂ ಸುದ್ದಿಯಲಿದ್ದರು. ಇದೀಗ ಅಂತದ್ದೇ ಮತ್ತೊಂದು ಹೇಳಿಕೆ ನೀಡಿದ್ದಾರೆ.

ಬಾಲಿವುಡ್‌ನಲ್ಲಿ ಹೆಚ್ಚು ಜನಪ್ರಿಯವಿಲ್ಲವಾದರೂ ಈ ನಟಿಗೆ ಸಿನಿಮಾ ಅವಕಾಶಗಳು ಕಡಿಮೆಯಾಗಿಲ್ಲ. ಇದೂವರೆಗೂ 11 ಸಿನಿಮಾಗಳಲ್ಲಿ ನಟಿಸಿರುವ ಈ ನಟಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಅನುಭವದ ಮಾತೊಂದನ್ನು ಮನಸ್ಸು ಬಿಚ್ಚಿ ಹೇಳಿಕೊಂಡಿದ್ದಾರೆ. ಇದೀಗ ಆ ಪೋಸ್ಟ್‌ ವೈರಲ್‌ ಆಗುತ್ತಿದ್ದು, ಹಲವರ ಕಣ್ಣು ದೊಡ್ಡದಾಗುವಂತೆ ಮಾಡಿದ್ದು, ಈ ಮೂಲಕ ವಿವಾದಕ್ಕೆ ತುಪ್ಪ ಸುರಿದಿದ್ದಾರೆ.  

 
 
 
 

 
 
 
 
 
 
 
 
 
 
 

A post shared by Payal Ghosh (@iampayalghosh)

ಇದನ್ನೂ ಓದಿ-ವಿಭಿನ್ನ ಪಾತ್ರಗಳ ಮೂಲಕ ಸಿನಿಪ್ರಿಯರ ಮನಗೆದ್ದ ಸ್ಯಾಂಡಲ್‌ವುಡ್‌ ಸ್ಟಾರ್‌ ನಟರಿವರು..!

ತಮ್ಮ 11ನೇ ಸಿನಿಮಾವನ್ನು ಒಪ್ಪಿಕೊಂಡ ಹಿನ್ನಲೆಯಲ್ಲಿ ನಟಿ "ನಾನು ಎಲ್ಲವನ್ನು ಒಪ್ಪಿಕೊಂಡು ಇತತರೊಡನೆ ನನ್ನ ದೇಹವನ್ನು ಹಂಚಿಕೊಂಡಿದ್ದರೆ, ಇಷ್ಟೊತ್ತಿಗಾಗಲೇ ನಾನು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುತ್ತಿದ್ದೆ ಎಂಬ ಹೇಳಿಕೆ ಮೂಲಕ ಬಿಟೌನ್‌ನ ಮತ್ತೊಂದು ಮುಖವನ್ನು ಬಹಿರಂಗಪಡಿಸಿದ್ದಾರೆ. ದೊಡ್ಡ ದೊಡ್ಡ ಸಿನಿಮಾ ಆಫರ್‌ಗಳು ಸಿಗಬೇಕೆಂದರೆ ನೀನು ಇತರರೊಂದಿಗೆ ಮಲಗಬೇಕು ಇಲ್ಲವಾದರೇ ಇದು ಅಸಾಧ್ಯ" ಎಂದಿದ್ದಾರೆ.

ಈ ಹಿಂದೆ ನಟಿ ಪಾಯಲ್‌ ಘೋಷ್‌ ಬಾಲಿವುಡ್‌ನ ಖ್ಯಾತ ನಿರ್ದೇಶಕಅನುರಾಗ್‌ ಕಶ್ಯಪ್‌ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಬಗ್ಗೆ ಮುಚ್ಚುಮರೆಯಿಲ್ಲದೆ ಹೆಳಿಕೊಂಡಿದ್ದ ನಟಿ, ಅನುರಾಗ್‌ ಕಶ್ಯಪ್‌ ತನ್ನ ಜಿಪ್‌ ತೆಗೆದು ನನ್ನ ಮೇಲೆ ಬಲವಂತವಾಗಿ ಒತ್ತಾಯಿಸುತ್ತಿದ್ದ ಎಂದು ಆರೋಪಿಸಿದ್ದರು. ಈ ಹೇಳಿಕೆಯಿಂದ ಬಾಲಿವುಡ್‌ನಲ್ಲಿ ದೊಡ್ಡ ಸಂಚಲನವೇ ಸೃಷ್ಟಿಯಾಗಿತ್ತು.  

ಇದೀಗ ನಟಿ ಪಾಯಲ್‌ ಘೋಷ್‌ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಪೈರ್‌ ಆಫ್‌ ಲವ್‌ ಸಿನಿಮಾ ರಿಲೀಸ್‌ ಆಗಲಿದೆ. ಇನ್ನು ನಟಿ ಸಿನಿಮಾ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಚಾರಕ್ಕಾಗಿ ಈ ರೀತಿಯ ಪೋಸ್ಟ್‌ ಹಾಕಿದ್ದಾರೆ ಎಂದು ಕೆಲವು ದೂರಿದರೆ, ಇನ್ನೂ ಕೆಲವರು ನಿಮಗೆ ಗೊತ್ತಿರುವ ಇನ್ನುಳಿದ ನಟಿಯರನ್ನು ಹೆಸರಿಸಿ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. 

ಇದನ್ನೂ ಓದಿ-ಭಾರಿ ಸದ್ದು ಮಾಡುತ್ತಿದೆ ʼರಾನಿʼ ಟೀಸರ್..ಅಭಿಮಾನಿಗಳಿಗೆ ಚಿರಋಣಿ ಎಂದ ಕಿರಣ್‌ ರಾಜ್..!‌

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News