Sachin Tendulkar Records: ಕ್ರಿಕೆಟ್ ತಜ್ಞರು ಟೀಂ ಇಂಡಿಯಾದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿಯನ್ನು ಸಚಿನ್ ತೆಂಡೂಲ್ಕರ್ ಅವರ ಶತಕಗಳ ದಾಖಲೆಯನ್ನು ಮುರಿಯಲು ಸ್ಪರ್ಧಿ ಎಂದು ಕರೆಯುತ್ತಾರೆ. ಆದರೆ ಸಚಿನ್ ತೆಂಡೂಲ್ಕರ್ ಅವರ ಈ ವಿಶ್ವ ದಾಖಲೆಯನ್ನು ಮುರಿಯುವ ಸಾಮಾರ್ಥ್ಯ ಇರುವುದು ಬೇರೊಬ್ಬ ಬ್ಯಾಟ್ಸ್ಮನ್ ಗೆ ಎಂದು ಹೇಳಲಾಗುತ್ತದೆ.
ಇದನ್ನೂ ಓದಿ: 21 ವರ್ಷದಿಂದ ಟೆಸ್ಟ್ ಸರಣಿಯಲ್ಲಿ Team Indiaವನ್ನು ಸೋಲಿಸಲು ಹವಣಿಸುತ್ತಿದೆ ಈ ತಂಡ! ಆದ್ರೆ ಸೋತಿದ್ದು ಅವರೇ…
ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ದೇವರು ಎಂದು ಕರೆಯಲಾಗುತ್ತದೆ. ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದಲ್ಲಿ ಏಕದಿನದಲ್ಲಿ 18,426 ರನ್ ಮತ್ತು ಟೆಸ್ಟ್ನಲ್ಲಿ 15,921 ರನ್ ಗಳಿಸಿದ್ದಾರೆ. ಏಕದಿನದಲ್ಲಿ 49 ಶತಕ ಮತ್ತು ಟೆಸ್ಟ್ನಲ್ಲಿ 51 ಶತಕಗಳನ್ನು ಗಳಿಸಿದ ವಿಶ್ವದಾಖಲೆ ಹೊಂದಿದ್ದಾರೆ. ಕ್ರಿಕೆಟ್ ನ ಎಲ್ಲಾ ಸ್ವರೂಪಗಳನ್ನು ಒಳಗೊಂಡಂತೆ, ಸಚಿನ್ ತೆಂಡೂಲ್ಕರ್ 100 ಅಂತರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ.
ವಿರಾಟ್ ಕೊಹ್ಲಿ ಹೊರತಾಗಿ ವಿಶ್ವ ಕ್ರಿಕೆಟ್’ನಲ್ಲಿ ಭಯಾನಕ ಬ್ಯಾಟ್ಸ್ಮನ್ ಒಬ್ಬರಿದ್ದಾರೆ. ಆ ಕ್ರಿಕೆಟಿಗ ಟೆಸ್ಟ್ ಕ್ರಿಕೆಟ್ ನಲ್ಲಿ ಸಚಿನ್ ತೆಂಡೂಲ್ಕರ್ ಅವರ 51 ಶತಕಗಳ ವಿಶ್ವ ದಾಖಲೆಯನ್ನು ಮುರಿಯುವ ಸಾಮಾರ್ಥ್ಯ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ವಿಶ್ವದೆಲ್ಲೆಡೆಯ ಬೌಲರ್ ಗಳು ಈ ಬ್ಯಾಟ್ಸ್ಮನ್ ಬ್ಯಾಟಿಂಗ್ ಸ್ಟೈಲ್’ಗೆ ಬೆರಗಾಗಿದ್ದಾರೆ. ಈ ಅಪಾಯಕಾರಿ ಕ್ರಿಕೆಟಿಗ ಬೇರಾರೂ ಅಲ್ಲ, ಟೆಸ್ಟ್ ಕ್ರಿಕೆಟ್ ನ ಅತ್ಯಂತ ಅಪಾಯಕಾರಿ ಬ್ಯಾಟ್ಸ್ಮನ್ ಗಳಲ್ಲಿ ಒಬ್ಬರಾದ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್.
ಆಸ್ಟ್ರೇಲಿಯಾದ ಡ್ಯಾಶಿಂಗ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್ ನಲ್ಲಿ ಸಚಿನ್ ತೆಂಡೂಲ್ಕರ್ ಅವರ 51 ಶತಕಗಳ ವಿಶ್ವ ದಾಖಲೆಯನ್ನು ಮುರಿಯಲು ಅತಿದೊಡ್ಡ ಸ್ಪರ್ಧಿಯಾಗಿದ್ದಾರೆ. ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಪ್ರಸ್ತುತ ಟೆಸ್ಟ್ ಕ್ರಿಕೆಟ್ ನಲ್ಲಿ 32 ಶತಕಗಳನ್ನು ಹೊಂದಿದ್ದು, ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯಲು 20 ಶತಕಗಳ ದೂರದಲ್ಲಿದ್ದಾರೆ. ಸ್ಟೀವ್ ಸ್ಮಿತ್ ಇದುವರೆಗೆ 100 ಟೆಸ್ಟ್ ಪಂದ್ಯಗಳಲ್ಲಿ 58.95 ರ ಸರಾಸರಿಯಲ್ಲಿ 9137 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಸ್ಟೀವ್ ಸ್ಮಿತ್ 32 ಶತಕ ಮತ್ತು 37 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಸ್ಟೀವ್ ಸ್ಮಿತ್ 32 ಶತಕಗಳೊಂದಿಗೆ ಪ್ರಸ್ತುತ ಕ್ರಿಕೆಟ್ ನಲ್ಲಿ ಮುಂಚೂಣಿಯಲ್ಲಿದ್ದಾರೆ. ಸ್ಟೀವ್ ಸ್ಮಿತ್ ನಂತರ, ಇಂಗ್ಲೆಂಡ್ ಅನುಭವಿ ಜೋ ರೂಟ್ 30 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನದಲ್ಲಿ ಭಾರತದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲೆಂಡ್ನ ಸ್ಟಾರ್ ಬ್ಯಾಟ್ಸ್ಮನ್ ಕೇನ್ ವಿಲಿಯಮ್ಸನ್ 28-28 ಶತಕಗಳೊಂದಿಗೆ ಇದ್ದಾರೆ.
ಇದನ್ನೂ ಓದಿ: “ವಿಶ್ವಕಪ್ ಸೆಮಿಫೈನಲ್’ಗೆ ಈ 4 ತಂಡಗಳು ಎಂಟ್ರಿಯಾಗಲಿವೆ…”: ಭವಿಷ್ಯ ನುಡಿದ ಸೌರವ್ ಗಂಗೂಲಿ
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ 177 ಟೆಸ್ಟ್ ಇನ್ನಿಂಗ್ಸ್ ಗಳಲ್ಲಿ 32 ಶತಕಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಸ್ಟೀವ್ ಸ್ಮಿತ್ ಅವರಿಗೆ ಈಗ ಕೇವಲ 34 ವರ್ಷ, ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ಶತಕದ ಮೇಲೆ ಶತಕ ಬಾರಿಸುತ್ತಿರುವ ವೇಗವನ್ನು ನೋಡಿದರೆ, ಈ ಕಾಂಗರೂ ಬ್ಯಾಟ್ಸ್ಮನ್ ಮುಂದಿನ 5 ವರ್ಷಗಳಲ್ಲಿ ಸಚಿನ್ ತೆಂಡೂಲ್ಕರ್ ಅವರ 51 ಶತಕಗಳ ದಾಖಲೆಯನ್ನು ಮುರಿಯಬಹುದು. ಸ್ಟೀವ್ ಸ್ಮಿತ್ 2010 ರಲ್ಲಿ ಪಾಕಿಸ್ತಾನದ ವಿರುದ್ಧ ಲೆಗ್-ಸ್ಪಿನ್ನರ್ ಆಗಿ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದರು, ಇದೀಗ ವಿಶ್ವದ ಶ್ರೇಷ್ಠ ಬ್ಯಾಟ್ಸ್ಮನ್ ಗಳ ಪಟ್ಟಿಗೆ ಸೇರ್ಪಡೆಗೊಂಡಿರುವ ಸ್ಟೀವ್ ಸ್ಮಿತ್ 13 ವರ್ಷಗಳ ಹಿಂದೆ ಲೆಗ್ ಸ್ಪಿನ್ನರ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದವರು. ಸ್ಮಿತ್ 2015ರ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಸದಸ್ಯರಾಗಿದ್ದರು. ಇದಕ್ಕೂ ಮೊದಲು, ಐಸಿಸಿ ಆಯ್ಕೆ ಸಮಿತಿಯಿಂದ ಆಯ್ಕೆಯಾದ ವರ್ಷದ ಐಸಿಸಿ ಟೆಸ್ಟ್ ಮತ್ತು ಏಕದಿನ ತಂಡದಲ್ಲಿಯೂ ಅವರನ್ನು ಸೇರಿಸಲಾಗಿತ್ತು. ಮಾರ್ಚ್ 2018 ರಲ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಬಾಲ್ ಟ್ಯಾಂಪರಿಂಗ್ ಕಾರಣ ಸ್ಮಿತ್ ಅವರನ್ನು ಒಂದು ವರ್ಷ ನಿಷೇಧಿಸಲಾಯಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ