ಶಿವಣ್ಣನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಕ್ತು ಭರ್ಜರಿ ಸರ್ಪ್ರೈಸ್

Shivarajkumar Birthday: ಈ ಹಿಂದೆ ತಮಿಳಿನಲ್ಲಿ ವಿಕ್ರಮ್ ಪ್ರಭು ಅಭಿನಯದ ‘ಪಾಯುಮ್ ಒಳಿ ನೀ ಎನಕ್ಕು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 

Written by - Yashaswini V | Last Updated : Jul 12, 2023, 12:15 PM IST
  • ಸ್ಯಾಂಡಲ್‍ವುಡ್‍ನ ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್
  • ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್ ಗೆ ಹುಟ್ಟುಹಬ್ಬದ ಸಂಭ್ರಮ
ಶಿವಣ್ಣನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಕ್ತು ಭರ್ಜರಿ ಸರ್ಪ್ರೈಸ್  title=

Dr Shivarajkumar Birthday: ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜಕುಮಾರ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊಸದೊಂದು ಚಿತ್ರವನ್ನು ಅವರು ಒಪ್ಪಿಕೊಂಡಿದ್ದು, ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಈ ಚಿತ್ರದಲ್ಲಿನ ಅವರ ಪಾತ್ರದ ಕಾನ್ಸೆಪ್ಟ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ತಮಿಳಿನಲ್ಲಿ ವಿಕ್ರಮ್ ಪ್ರಭು ಅಭಿನಯದ ‘ಪಾಯುಮ್ ಒಳಿ ನೀ ಎನಕ್ಕು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸುಧೀರ್ ಚಂದ್ರ ಫಿಲಂ ಕಂಪನಿ ಮೂಲಕ ಸುಧೀರ್ ಚಂದ್ರ ಪದಿರಿ ನಿರ್ಮಿಸುತ್ತಿದ್ದಾರೆ. ಇದು ಅವರು ಕನ್ನಡದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರವಾಗಿದೆ. 

ಇದನ್ನೂ ಓದಿ- Shivarajkumar Birthday: ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್ ಗೆ ಹುಟ್ಟುಹಬ್ಬದ ಸಂಭ್ರಮ

‘ವಿಕ್ರಮ್ ವೇದ’ ಮತ್ತು ‘ಕೈದಿ’ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಸ್ಯಾಮ್ ಸಿ.ಎಸ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದೊಂದು ಆಕ್ಷನ್ ಚಿತ್ರವಾಗಿದ್ದು, ದಕ್ಷಿಣ ಭಾರತದ ಜನಪ್ರಿಯ ನಟ-ನಟಿಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. 

ಇದನ್ನೂ ಓದಿ- ಯುವ ನಟನೊಂದಿಗೆ ನಟ ಧನುಷ್‌ ಮಾಜಿ ಪತ್ನಿ ಐಶ್ವರ್ಯ ರಜಿನಿಕಾಂತ್‌ ಮದುವೆ..!

ಇನ್ನು ಈ ಚಿತ್ರವು ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಸದ್ಯದಲ್ಲೇ ಈ ಚಿತ್ರದ ಹೆಚ್ಚಿನ ವಿವರಗಳು ಹೊರಬೀಳಲಿವೆ ಎಂದು ನಿರೀಕ್ಷಿಸಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News