ಬೆಂಗಳೂರು: ಹಿಂದೆ ಬಿಜೆಪಿ ಅವಧಿಯಲ್ಲಿ ರಾಜ್ಯವಾಳುತ್ತಿದ್ದಿದ್ದು ಬಸವರಾಜ್ ಬೊಮ್ಮಾಯಿಯೂ ಅಲ್ಲ, ಬಿಜೆಪಿಯೂ ಅಲ್ಲ. ಕರ್ನಾಟಕವನ್ನು ಆಳುತ್ತಿದ್ದಿದ್ದು ಕೇಶವಕೃಪ ಎನ್ನುವುದು ಹಲವು ಬಾರಿ ಸಾಬೀತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘RSS ಸಿದ್ಧಾಂತವನ್ನು ಪಠ್ಯಪುಸ್ತಕಗಳಲ್ಲಿ, ಸರ್ಕಾರದಲ್ಲಿ, ಸಮಾಜದಲ್ಲಿ ಮಾತ್ರವಲ್ಲ, ನ್ಯಾಯಾಂಗದಲ್ಲೂ ವ್ಯವಸ್ಥಿತವಾಗಿ ತೂರಿಸುವ ಪ್ರಯತ್ನ ಮಾಡಲಾಗಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಹಿಂದೆ ಬಿಜೆಪಿ ಅವಧಿಯಲ್ಲಿ ರಾಜ್ಯವಾಳುತ್ತಿದ್ದಿದ್ದು ಬೊಮ್ಮಾಯಿಯೂ ಅಲ್ಲ, ಬಿಜೆಪಿಯೂ ಅಲ್ಲ.
ಕರ್ನಾಟಕವನ್ನು ಆಳುತ್ತಿದ್ದಿದ್ದು ಕೇಶವಕೃಪ ಎನ್ನುವುದು ಹಲವು ಬಾರಿ ಸಾಬೀತಾಗಿದೆ.RSS ಸಿದ್ಧಾಂತವನ್ನು ಪಠ್ಯಪುಸ್ತಕಗಳಲ್ಲಿ, ಸರ್ಕಾರದಲ್ಲಿ, ಸಮಾಜದಲ್ಲಿ ಮಾತ್ರವಲ್ಲ, ನ್ಯಾಯಾಂಗದಲ್ಲೂ ವ್ಯವಸ್ಥಿತವಾಗಿ ತೂರಿಸುವ ಪ್ರಯತ್ನ ಮಾಡಲಾಗಿತ್ತು ಎಂಬ…
— Karnataka Congress (@INCKarnataka) July 13, 2023
ಇದನ್ನೂ ಓದಿ: ಕಾಳಿಂಗ ಸರ್ಪವನ್ನು ನಿಯಂತ್ರಿಸುತ್ತಿರುವ ಪುಟ್ಟ ಬಾಲಕನ ವಿಡಿಯೋ
‘ಅಭಿಯೋಜನೆ ಇಲಾಖೆಯ ವಕೀಲರ ನೇಮಕಾತಿಯಲ್ಲಿ, ಕಾನೂನು ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ಸಂಘಪರಿವಾರದವರಿಗೆ ಮಣೆ ಹಾಕಿರುವುದರ ವಿರುದ್ಧ ಅಭಿಯೋಜನಾ ಇಲಾಖೆಯ ನೌಕರರೇ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. ನಮ್ಮ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಿದೆ. ವ್ಯವಸ್ಥೆಯ 'ಸಂಘಿ'ಕರಣಕ್ಕೆ ನಾವು ಎಂದಿಗೂ ಬಿಡುವುದಿಲ್ಲ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಚುನಾವಣೆ ಫಲಿತಾಂಶ ಬಂದು 2 ತಿಂಗಳಾಯ್ತು, ಅಧಿವೇಶನವೂ ಪ್ರಾರಂಭ ಆಯ್ತು, ಆದರೆ ಬಿಜೆಪಿಯ ವಿರೋಧ ಪಕ್ಷದ ನಾಯಕನೆಲ್ಲಿ?
ನಾವಿಕನಿಲ್ಲದ ನೌಕೆ, ನಾಯಕನಿಲ್ಲದ ಬಿಜೆಪಿ ಎರಡೂ ಮುಳುಗುವುದು ನಿಶ್ಚಿತ!
ಹಿಂದೆ @BSYBJP ಅವರು ಸಂಪುಟ ರಚನೆಗೆ ತಿಂಗಳುಗಟ್ಟಲೆ ಹೈಕಮಾಂಡ್ ಬಾಗಿಲು ಕಾದಿದ್ದರು,
ನಂತರ @BSBommai ಅವರು ಸಂಪುಟ ವಿಸ್ತರಣೆಗೆ 15ಕ್ಕೂ… pic.twitter.com/OHkjkA45NQ
— Karnataka Congress (@INCKarnataka) July 13, 2023
‘ಚುನಾವಣೆ ಫಲಿತಾಂಶ ಬಂದು 2 ತಿಂಗಳಾಯ್ತು, ಅಧಿವೇಶನವೂ ಪ್ರಾರಂಭ ಆಯ್ತು, ಆದರೆ ಬಿಜೆಪಿಯ ವಿರೋಧ ಪಕ್ಷದ ನಾಯಕನೆಲ್ಲಿ? ನಾವಿಕನಿಲ್ಲದ ನೌಕೆ, ನಾಯಕನಿಲ್ಲದ ಬಿಜೆಪಿ ಎರಡೂ ಮುಳುಗುವುದು ನಿಶ್ಚಿತ! ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪುಟ ರಚನೆಗೆ ತಿಂಗಳುಗಟ್ಟಲೇ ಹೈಕಮಾಂಡ್ ಬಾಗಿಲು ಕಾದಿದ್ದರು. ನಂತರ ಬಸವರಾಜ್ ಬೊಮ್ಮಾಯಿಯವರು ಸಂಪುಟ ವಿಸ್ತರಣೆಗೆ 15ಕ್ಕೂ ಹೆಚ್ಚು ಬಾರಿ ದೆಹಲಿ ದಂಡಯಾತ್ರೆ ಮಾಡಿದ್ದರು, ಆದರೂ ಸಂಪುಟ ವಿಸ್ತರಣೆಯಾಗಲಿಲ್ಲ. ಈಗ ವಿಪಕ್ಷ ನಾಯಕನ ಆಯ್ಕೆಗೆ ಸತಾಯಿಸುತ್ತಿದ್ದಾರೆ. ಬಿಜೆಪಿ ಹೈಕಮಾಂಡಿಗೆ ಕರ್ನಾಟಕವನ್ನಷ್ಟೇ ಅಲ್ಲ, ಕರ್ನಾಟಕದ ಬಿಜೆಪಿಯನ್ನು ಕಂಡರೂ ತಾತ್ಸಾರವೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ: ರಾಜ್ಯದಲ್ಲಿ 2000 ಕೋಟಿ ಹೂಡಿಕೆಗೆ ಟಾಟಾ ಟೆಕ್ನಾಲಜೀಸ್ ಪ್ರಸ್ತಾವ: ಎಂ.ಬಿ ಪಾಟೀಲ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.