ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

 ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪಿಎಲ್‍ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Jul 14, 2023, 11:47 PM IST
  • ಸ್ವ ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (Para Legal Volunteers) ಅಂತ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುತ್ತದೆ.
  • ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬಳ್ಳಾರಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪಿಎಲ್‍ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಚಿಕ್ಕೋಡಿ ನಂದಿ ಪರ್ವತಕ್ಕೆ ಸಚಿವರ ಸತೀಶ್‌ ಜಾರಕಿಹೊಳಿ ಭೇಟಿ

ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಹಾಗೂ ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (Para Legal Volunteers) ಅಂತ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುತ್ತದೆ.

ಇದನ್ನೂ ಓದಿ: ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ರಾಯಚೂರು ಹಾಸ್ಟೆಲ್‌ ವಿದ್ಯಾರ್ಥಿಗಳ ಪ್ರತಿಭಟನೆ

ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದುಕೊಂಡು ಭರ್ತಿಮಾಡಿ ಜುಲೈ 21 ಸಂಜೆ 5.30 ರೊಳಗಾಗಿ ಖುದ್ದಾಗಿ ಇದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

Trending News