Lukewarm Water Health : ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಸ್ಥೂಲಕಾಯತೆಯಿಂದ ಬಳಲುತ್ತಿದ್ದಾರೆ. ಅಧಿಕ ತೂಕವು ಗಂಭೀರ ಕಾಯಿಲೆಗಳಿಗೆ ಕಾರಣವಾಗುತ್ತದೆ. ತೂಕ ಹೆಚ್ಚಾಗಲು ಜೀವನಶೈಲಿ ಕಾರಣವಾಗಿದೆ. ಜನರು ಆಹಾರ ಮತ್ತು ಪಾನೀಯದ ವಿಷಯದಲ್ಲಿ ಸ್ವಲ್ಪ ಅಜಾಗರೂಕತೆಯನ್ನು ಹೊಂದಿರುತ್ತಾರೆ, ಇದರಿಂದಾಗಿ ತೂಕವು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಅಂತಹ ಒಂದು ಕೆಟ್ಟ ಅಭ್ಯಾಸವೆಂದರೆ ತಣ್ಣೀರು ಕುಡಿಯುವುದು. ತಣ್ಣೀರು ಕುಡಿಯುವುದರಿಂದ ದೇಹದ ತೂಕ ವೇಗವಾಗಿ ಹೆಚ್ಚುತ್ತದೆ.
ಅನೇಕ ಜನರು ತೂಕ ಇಳಿಸಿಕೊಳ್ಳಲು ಡಯೇಟ್ ಮಾಡುತ್ತಾರೆ. ಕೆಲವರು ಜಿಮ್ಗೆ ಹೋಗಿ ವ್ಯಾಯಾಮ ಮಾಡುತ್ತಾರೆ. ಆದ್ರೂ ಕೊಬ್ಬು ಕರಗೊದಿಲ್ಲ. ಇದಕ್ಕೆ ಮುಖ್ಯ ಕಾರಣ ಆಹಾರ ಮತ್ತು ಕುಡಿಯುವ ಅಭ್ಯಾಸ. ಹೌದು.. ಅದರಲ್ಲೂ ತಣ್ಣೀರು ಜಾಸ್ತಿ ಕುಡಿಯುವವರಿಗೆ ಬೇಗ ತೂಕ ಇಳಿಯುವುದಿಲ್ಲ. ಒಂದು ವರದಿಯ ಪ್ರಕಾರ, ತೂಕವನ್ನು ವೇಗವಾಗಿ ಕಳೆದುಕೊಳ್ಳಲು ಬಯಸುವ ಜನರು ಉಗುರು ಬೆಚ್ಚಗಿನ ನೀರನ್ನು ಕುಡಿಯುವುದು ಒಳ್ಳಯದು.
ಇದನ್ನೂ ಓದಿ: ಉತ್ತಮ ಆರೋಗ್ಯಕ್ಕೆ ಪ್ರತಿನಿತ್ಯ ಎಷ್ಟು ಲೀಟರ್ ನೀರು ಸೇವನೆ ಅಗತ್ಯ..?
ನೀವು ಬೇಗನೆ ತೂಕ ಇಳಿಸಿಕೊಳ್ಳಲು ಬಯಸಿದರೆ, ಮೊದಲು ಫ್ರಿಜ್ ನೀರನ್ನು ಕುಡಿಯುವುದನ್ನು ನಿಲ್ಲಿಸಬೇಕು. ತಣ್ಣನೆಯ ನೀರು ಕುಡಿಯುವುದರಿಂದ ಜೀರ್ಣಕ್ರಿಯೆಯ ಮೇಲೂ ಪರಿಣಾಮ ಬೀರುತ್ತದೆ. ಆಹಾರದ ಸಂರಕ್ಷಣೆಗೆ ಅಡ್ಡಿಯಾಗುತ್ತದೆ, ಚಯಾಪಚಯ ಕ್ರಿಯೆ ನಿಧಾನವಾಗುತ್ತದೆ. ಇದರಿಂದ ಆಹಾರ ಜೀರ್ಣವಾಗದೆ ದೇಹದಲ್ಲಿ ಕೊಬ್ಬು ಹೆಚ್ಚುತ್ತದೆ.
ಬೆಳಗ್ಗೆ ಬೆಚ್ಚಗಿನ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಹೆಚ್ಚುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದು ಉತ್ತಮ ಜೀರ್ಣಕಾರಿ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ದೇಹದಲ್ಲಿ ಕೊಬ್ಬು ಬೆಳೆಯುವುದನ್ನು ನಿಲ್ಲಿಸುತ್ತದೆ. ಅದ್ದರಿಂದ ದಿನಪೂರ್ತಿ ನೀವು ಬೆಚ್ಚಗಿನ ನೀರನ್ನು ಕುಡಿಯದಿದ್ದರೂ ಸಹ ಬೆಳ್ಳಿಗ್ಗೆ ಕುಡಿಯಲು ಮರೆಯಬೇಡಿ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.