ಚಿತ್ರದುರ್ಗ: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ.
ಇದನ್ನೂ ಓದಿ: ತ್ರಿಶತಕ ಬಾರಿಸಿದ ಈ ಸ್ಫೋಟಕ ಬ್ಯಾಟ್ಸ್’ಮನ್’ಗೆ ನಿವೃತ್ತಿ ನೀಡಲು ಒತ್ತಾಯಿಸುತ್ತಿದೆ ಆಯ್ಕೆ ಸಮಿತಿ!?
ಶ್ರೀಸಿದ್ದರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠದ ಪೀಠಾಧ್ಯಕ್ಷ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳನ್ನು ಮಂಗಳವಾರ ಸಚಿವರು ಭೇಟಿಯಾದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.
“ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ರಾಜ್ಯದಲ್ಲಿ ನಾಲ್ಕು ವರ್ಷಗಳ ಬಿಜೆಪಿ ದುರಾಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿಯವರು ನಾಲ್ಕು ವರ್ಷ ಜನತೆಗೆ ಚಿಪ್ಪು ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಜನ ಆ ಪಕ್ಷಕ್ಕೆ ಚಿಪ್ಪು ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ಜನ ಚಿಪ್ಪು ನೀಡುವುದು ಗ್ಯಾರಂಟಿ” ಎಂದು ಛೇಡಿಸಿದರು.
“9 ವರ್ಷದ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸವನ್ನು ಮಾಡಿಲ್ಲ. ವಿದೇಶದಿಂದ ಕಪ್ಪು ಹಣ ತರುತ್ತೇವೆ. ಉದ್ಯೋಗ ಸೃಷ್ಟಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಸುಳ್ಳು ಆಶ್ವಾಸನೆ ನೀಡುತ್ತಾ ಜನತೆಗೆ ಮೋಸ ಮಾಡಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. 9 ವರ್ಷದಲ್ಲಿ ದೇಶ ಹಾಳು ಮಾಡಲು ಬೇಕಾದ ಕೆಲಸವನ್ನು ಬಿಜೆಪಿ ಮಾಡಿದೆ” ಎಂದು ವಾಗ್ದಾಳಿ ನಡೆಸಿದರು.
ವಿಪಕ್ಷದವರಿಗೆ ಬಾಯಿ ಚಪಲ:
“ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದೆ. ಈಗಾಗಲೇ ಮೂರು ಗ್ಯಾರಂಟಿಗಳು ಜಾರಿಗೆ ಬಂದಿವೆ. ಮುಂದಿನ ತಿಂಗಳು ಪ್ರತಿ ಮಹಿಳೆಗೆ 2 ಸಾವಿರ ಹಣ ನೀಡುವ ಗೃಹ ಲಕ್ಷ್ಮೀ ಗ್ಯಾರಂಟಿ ಜಾರಿಗೆ ಬರಲಿದೆ. ಇದನ್ನು ಸಹಿಸಲು ಆಗದ ವಿಪಕ್ಷಗಳ ನಾಯಕರು ಬಾಯಿ ಚಪಲಕ್ಕೆ ಆರೋಪ ಮಾಡುತ್ತಿದ್ದಾರೆ”.
“ರಾಜ್ಯ ವಿಪಕ್ಷ ನಾಯಕರಿಗೆ ಆರೋಪ ಮಾಡುವುದು ಚಾಳಿಯಾಗಿದೆ. ರೈತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಏನೆಲ್ಲಾ ಕಾರ್ಯಕ್ರಮ ರೂಪಿಸಿದ್ದಾರೆ ಎಂಬುದು ಜನತೆಗೆ ಗೊತ್ತಿದೆ. ಯಾವುದೇ ವಿಚಾರ ಇಲ್ಲದ ಕಾರಣಕ್ಕಾಗಿ ಸುಖಸುಮ್ಮನೆ ಆರೋಪ ಮಾಡುತ್ತಿದ್ದಾರೆ” ಎಂದು ತಿಳಿಸಿದರು.
ಇದನ್ನೂ ಓದಿ: IND vs WI: ಅಂತಿಮ ಟೆಸ್ಟ್’ಗೆ ತಂಡ ಪ್ರಕಟ: ಈ ಸ್ಟಾರ್ ಆಫ್-ಸ್ಪಿನ್ನರ್’ಗೆ ಅವಕಾಶ ಕೊಟ್ಟ ಸಮಿತಿ
“ಈ ದೇಶದಲ್ಲಿ ರೈತರ ಕಲ್ಯಾಣ, ಬಡವ, ದಲಿತ, ಅಲ್ಪಸಂಖ್ಯಾತ, ಮಹಿಳೆಯ ಸಬಲೀಕರಣವಾಗಿದ್ದರೆ ಅದು ಕಾಂಗ್ರೆಸ್ ನಿಂದ ಮಾತ್ರ. ಬಿಜೆಪಿ ಮತ್ತು ಜೆಡಿಎಸ್ ನವರು ರೈತರು, ದಲಿತರಿಗೆ ಏನು ಮಾಡಿದ್ದಾರೆ ಎಂದು ಹೇಳಲಿ” ಎಂದು ಸಚಿವರು ಮಾರ್ಮಿಕವಾಗಿ ಪ್ರಶ್ನಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.