ಬೆಂಗಳೂರು: ಕೆಎಎಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ. ಕರ್ನಾಟಕ ಲೋಕಸೇವಾ ಆಯೋಗವು ಶೀಘ್ರವೇ 540ಕ್ಕೂ ಹೆಚ್ಚು ಕೆಎಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಿದೆ.
ಈ ಬಗ್ಗೆ ಶೀಘ್ರದಲ್ಲೇ ಕೆಎಎಸ್/ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ. 42 ಅಸಿಸ್ಟಂಟ್ ಕಮಿಷನರ್ (ಕಂದಾಯ) ಮತ್ತು 110 ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳು ಸೇರಿದಂತೆ 540ಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ.
ಇದನ್ನೂ ಓದಿ: ಕುಸಿದು ಬಿದ್ದು ಆಸ್ಪತ್ರೆಗೆ ದಾಖಲು: ಯತ್ನಾಳ್ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ!
2023-24ನೇ ಸಾಲಿನಲ್ಲಿ 20 ಎಸಿ ಮತ್ತು 59 ಇಒ ಹುದ್ದೆಗಳು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆಯಂತೆ. ಶೀಘ್ರದಲ್ಲೇ ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಿದೆ.
ಪರೀಕ್ಷಾ ಮಾದರಿಯಲ್ಲಿ ಬದಲಾವಣೆ
ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ನಿಯಮಗಳು-2020ರ ಪ್ರಕಾರ ಕೆಪಿಎಸ್ಸಿ ಕೆಎಎಸ್ ಪರೀಕ್ಷೆಯ ಮಾದರಿ ಬದಲಾವಣೆ ಆಗಿದೆ. ಅಭ್ಯರ್ಥಿಗಳು ಕೆಎಎಸ್ ಪರೀಕ್ಷೆಗೆ ತಯಾರಿ ಆರಂಭಿಸುವ ಮೊದಲು ಕೆಎಎಸ್ ಪರೀಕ್ಷೆಯ ಹೊಸ ಮಾದರಿ ಹೇಗಿರುತ್ತದೆ, ಎಷ್ಟು ಅಂಕಗಳಿಗೆ ವೈಯಕ್ತಿಕ ಸಂದರ್ಶನ ಅನ್ನೋದರ ಮಾಹಿತಿಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು. ಆಗ ಮಾತ್ರ ಸೂಕ್ತ ತಯಾರಿ ಸಾಧ್ಯವಾಗುತ್ತದೆ. ಇದಲ್ಲದೇ ಅಭ್ಯರ್ಥಿಗಳು ಸೂಕ್ತ ವೇಳಾಪಟ್ಟಿಯನ್ನು ಹಾಕಿಕೊಳ್ಳಲು ಸಹ ಇದರಿಂದ ಅನುಕೂಲವಾಗಲಿದೆ.
ಇದನ್ನೂ ಓದಿ: ಸ್ಪೀಕರ್ ಸ್ಥಾನಕ್ಕೇ ಗೌರವ ನೀಡದವರು ಜನಸಾಮಾನ್ಯರನ್ನು ಗೌರವಿಸುವರೇ?: ಕಾಂಗ್ರೆಸ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.