ಬೆಂಗಳೂರು : ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೈನ ಮುನಿಗಳ ಹತ್ಯೆಯಿಂದ ಹಿಡಿದು ರಾಜ್ಯದಲ್ಲಿ ನಿರಂತರ ಕೊಲೆ ನಡೆಯುತ್ತಿವೆ. ಬರಗಾಲ ಬಿದ್ದಿದೆ. ಮೂರುವರೆ ಸಾವಿರ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ. ಇದರ ಬಗ್ಗೆ ಸದನದಲ್ಲಿ ಚೆರ್ಚೆಗೆ ಅವಕಾಶ ಕೊಡಲಿಲ್ಲ. ರಾಜಕೀಯ ಪಕ್ಷದ ಕಾರ್ಯಕ್ರಮಕ್ಕೆ ಬೇರೆ ರಾಜ್ಯಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಳಗನ್ನು ಕಳುಹಿಸಿದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಪಕ್ಷದ ಹತ್ತು ಜನ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇಂತ ಕೆಟ್ಟ ನಿರ್ಧಾರ ಇತಿಹಾಸದಲ್ಲಿ ಆಗಿಲ್ಲ. ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಸ್ಪೀಕರ್ ಹುದ್ದೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿದರು.
#WATCH | Bengaluru: "He (Governor) has assured us that he will call for the report and that he will talk to Chief Secretary, and Legislative Secretary. The Speaker has come and given his version, and we have also given our version, the true version...We have asked him to admonish… pic.twitter.com/PmuPLwTy2L
— ANI (@ANI) July 20, 2023
ಇದನ್ನೂ ಓದಿ: ಕೆರೆಗಳ ಮೇಲೆ ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಸಲು ಚಿಂತನೆ : ಸಚಿವ ಎನ್.ಎಸ್ ಭೋಸರಾಜ್
ಸದ್ಯ ಸ್ಪೀಕರ್ ಹುದ್ದೆ ದುರುಪಯೋಗ ಆಗುತ್ತಿದೆ. ಸ್ಪೀಕರ್ ಅವರು ನಮ್ಮನ್ನು ಕರೆದು ಮಾತನಾಡಿಸಿ ಸಮಸ್ಯೆ ಬಗೆ ಹರಿಸಬಹುದಿತ್ತು. ಈ ರೀತಿಯ ಪ್ರಕರಣಗಳು ಹಿಂದೆಯೂ ನಡೆದಿವೆ. ಈ ರೀತಿಯ ತೀರ್ಮಾನ ಯಾರೂ ಮಾಡಿರಲಿಲ್ಲ. ಸ್ಪೀಕರ್ ಆದವರು ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಹಾಜರಾಗಬಾರದು ಅಂತ ಪಾಲಿಸಿಕೊಂಡು ಬರಲಾಗಿದೆ. ಇವರು ಕಾಂಗ್ರೆಸ್ ಪಕ್ಷದ ಔತಣಕೂಟಕ್ಕೆ ಹಾಜರಾಗಿ ಊಟ ಮಾಡಿ ಬಂದಿದ್ದಾರೆ. ಅವರ ಮೇಲೆ ವಿಶ್ವಾಸ ಇಲ್ಲ ಅಂತ ನಾವು ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ. ಈ ಸರ್ಕಾರ ತನ್ಬ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದೆ. ಜನರು ಅವರಿಗೆ ಅಧಿಕಾರ ನೀಡಿದ್ದರೆ ಜನರ ಪರವಾಗಿ ಧ್ವನಿ ಎತ್ತಲು ನಮಗೂ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಟೆರೆರಿಸ್ಟ್ ಚಟುವಟಿಕೆಗಳು ನಡೆಯುತ್ತಿವೆ. ಅವರ ಬಳಿ ಸಿಕ್ಕಿರುವ ದಾಖಲೆ ನೋಡಿದರೆ ಅವರಿಗೆ ಅಂತಾರಾಷ್ಟ್ರೀಯ ಸಂಪರ್ಕ ಇದೆ. ಹೀಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಅಂತ ನಾವು ಆಗ್ರಹಿಸಿದ್ದೇವೆ. ಈ ಎಲ್ಲ ಮಾಹಿತಿಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಅವರು ಕೇಂದ್ರ ಸರ್ಕಾರಕ್ಕೆ ವರದಿ ಕೊಡುವುದಾಗಿ ಹೇಳಿದ್ದಾರೆ ಎಂದರು. ಅಲ್ಲದೆ, ನಮ್ಮ ಸದಸ್ಯರನ್ನು ಅಮಾನತು ಮಾಡಿರುವುದರಿಂದ ನಾವು ಸದನವನ್ನು ಬಹಿಷ್ಕರಿಸುತ್ತೇವೆ. ಈ ಪ್ರಕರಣವನ್ನು ಜಿಲ್ಲಾ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.