ಮೋದಿ ತಮ್ಮ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ಇದ್ದ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ, ಈ ಸಾಲವನ್ನು ಒಂಬತ್ತು ವರ್ಷಗಳಲ್ಲಿ 170 ಲಕ್ಷ ಕೋಟಿಗೆ ಏರಿಸಿದ್ದೇ ಮೋದಿಯವರ ಸಾಧನೆ- ಮುಖ್ಯಮಂತ್ರಿ ಸಿದ್ದರಾಮಯ್ಯ 

Written by - Yashaswini V | Last Updated : Jul 21, 2023, 01:27 PM IST
  • ಶ್ರಮಿಕರ ,ಬಡವರ ಹಣ ಕಿತ್ತು ಶ್ರೀಮಂತ ಕಾರ್ಪೋರೇಟ್ ಗಳಿಗೆ ಕೊಡುವುದು ಬಿಜೆಪಿಯ ಆರ್ಥಿಕತೆ.
  • ಈ ಕಾರಣಕ್ಕೇ ಹಾಲು, ಮೊಸರು, ಮಂಡಕ್ಕಿ ಮೇಲೂ ತೆರಿಗೆ ಹಾಕಿದ್ದಾರೆ.
  • ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ.
ಮೋದಿ ತಮ್ಮ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ   title=

ಬೆಂಗಳೂರು: ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ಆಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಸಾಲದ ಪ್ರಮಾಣವನ್ನು ಬಿಚ್ಚಿಟ್ಟರು. 

ವಿಧಾನ ಪರಿಷತ್ ನಲ್ಲಿ 2023-24 ನೇ ಆಯವ್ಯಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ಇದ್ದ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ, ಈ ಸಾಲವನ್ನು ಒಂಬತ್ತು ವರ್ಷಗಳಲ್ಲಿ 170 ಲಕ್ಷ ಕೋಟಿಗೆ ಏರಿಸಿದ್ದೇ ಮೋದಿಯವರ ಸಾಧನೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. 

ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುತ್ತಾರೆ.  ಕಚ್ಚಾತೈಲದ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್-ಡೀಸೆಲ್ ಬೆಲೆ ಈ ಮಟ್ಟಕ್ಕೆ ಏರಿಸಿದರೆ, ಹಾಲು-ಮೊಸರು-ಮಜ್ಜಿಗೆ- ಮಂಡಕ್ಕಿ ಮೇಲೂ ಜಿಎಸ್ ಟಿ ಹಾಕಿದರೆ ಬಡವರು, ಮಧ್ಯಮವರ್ಗದವರ ಗತಿ ಏನು ಎಂದು ಪ್ರಶ್ನಿಸಿದರು. 

ಇದನ್ನೂ ಓದಿ- ರೈತರಿಗೆ 'ಕನ್ಯಾಭಾಗ್ಯ' ನೀಡುವಂತೆ ಸಿಎಂಗೆ ಪತ್ರ...!

ಟೆಕ್ನಿಕಲಿ ಅಲ್ಲಿದ್ದಾರೆ ಅಷ್ಟೆ!
ಮುಖ್ಯಮಂತ್ರಿಗಳು ಉತ್ತರ ನೀಡುವಾಗ ಎದುರು ಸಾಲಿನಲ್ಲಿ ಜೆಡಿಎಸ್ ನ ಮರಿತಿಬ್ಬೇಗೌಡ ಮತ್ತು ಬಿಜೆಪಿಯ ಹೆಚ್.ವಿಶ್ವನಾಥ್ ಮಾತ್ರ ಕುಳಿತು ಉಳಿದವರೆಲ್ಲಾ ಬಹಿಷ್ಕರಿಸಿದ್ದರು. ಇದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಮರಿತಿಬ್ಬೇಗೌಡರು ಟೆಕ್ನಿಕಲಿ ಜೆಡಿಎಸ್ ನಲ್ಲಿದ್ದಾರೆ.  ಆದರೆ ವಾಸ್ತವವಾಗಿ ಅವರಿಗೆ ವಿರುದ್ಧವಿದ್ದಾರೆ. ಹೆಚ್.ವಿಶ್ವನಾಥ್ ಕೂಡ ಟೆಕ್ನಿಕಲಿ ಬಿಜೆಪಿಯಲ್ಲಿದ್ದಾರೆ. ಆದರೆ ವಾಸ್ತವವಾಗಿ ಬಿಜೆಪಿಗೆ ವಿರುದ್ಧವಿದ್ದಾರೆ ಎಂದು ಟೀಕಿಸಿದರು. 

ಇದನ್ನೂ ಓದಿ- ಗೃಹಲಕ್ಷ್ಮೀ ಯೋಜನೆಯಡಿ ತಿಂಗಳು 2 ಸಾವಿರ ಹಣ ಜಮೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣದ ಹೈಲೈಟ್ಸ್: 
* ಮಹಾತ್ನಗಾಂಧಿ ಜೀವನ ಸಂದೇಶವೇ ಸತ್ಯ-ಅಹಿಂಸೆ ಆಗಿತ್ತು. ಸದಾ ಸುಳ್ಳು ಹೇಳುವ ಬಿಜೆಪಿಯವರು ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಕುಳಿತಿದ್ದಾರೆ*

* 1949 ನವೆಂಬರ್ 25 ರಂದು ಅಂಬೇಡ್ಕರ್ ಅವರು ತಮ್ಮ ಐತಿಹಾಸಿಕ ಭಾಷಣದಲ್ಲಿ, "ನಮ್ಮ ಸಂವಿಧಾನ ಜನವರಿ 26 ರಿಂದ ಜಾರಿಗೆ ಬರುತ್ತದೆ. ಆದರೆ ಸಾಮಾಜಿಕ-ಆರ್ಥಿಕ‌ ಅಸಮಾನತೆ ದೇಶದಲ್ಲಿದೆ. ಈ ಅಸಮಾನತೆಯನ್ನು ಅಳಿಸದೇ ಹೋದರೆ ಜನರೇ ಈ ಸ್ವಾತಂತ್ರ್ಯ ಸೌಧವನ್ನು ಸುಟ್ಟು ಭಸ್ಮ ಮಾಡುತ್ತಾರೆ" ಎಂದಿದ್ದರು.‌ ಈ ಕಾರಣಕ್ಕೇ ಅಸಮಾನತೆ, ತಾರತಮ್ಯವನ್ನು ಅಳಿಸುವ ದೃಷ್ಟಿಯಿಂದ ಬಜೆಟ್ ನಲ್ಲಿ ಸರ್ವರಿಗೂ ಸಮಾನ ಅವಕಾಶ ಸಿಗುವ ಆಶಯದ ಕಾರ್ಯಕ್ರಮಗಳಿಗೆ ಮಹತ್ವ ನೀಡಿದ್ದೇನೆ. 

* ಬಸವಣ್ಣನವರ ದಾಸೋಹ ಮತ್ತು ಕಾಯಕ ಸಂಸ್ಕೃತಿಯ ಆಶಯ ನಮ್ಮ ಆಯವ್ಯಯದಲ್ಲಿದೆ. ಬಿಜೆಪಿಯವರು ಬಸವ ವಿರೋಧಿಗಳು. 

* ಬೆಂಕಿ ಹಚ್ಚುವುದೇ ಬಿಜೆಪಿ ಕೆಲಸ. ಅವರು ಮಣಿಪುರವನ್ಮೂ ಬಿಡಲ್ಲ, ಕರ್ನಾಟಕವನ್ನೂ ಬಿಡಲ್ಲ. ಬೆಂಕಿ ಹಚ್ಚುತಾರೆ ಎಂದರು. 

* ಶ್ರಮಿಕರ ,ಬಡವರ ಹಣ ಕಿತ್ತು ಶ್ರೀಮಂತ ಕಾರ್ಪೋರೇಟ್ ಗಳಿಗೆ ಕೊಡುವುದು ಬಿಜೆಪಿಯ ಆರ್ಥಿಕತೆ. ಈ ಕಾರಣಕ್ಕೇ ಹಾಲು, ಮೊಸರು, ಮಂಡಕ್ಕಿ ಮೇಲೂ ತೆರಿಗೆ ಹಾಕಿದ್ದಾರೆ. ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ, ರೈತರ ಸಾಲ ಮನ್ನಾ ಮಾಡಿ ಎಂದರೆ ಒಪ್ಪುತ್ತಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News