12 ವರ್ಷಗಳ ಬಳಿಕ ಸಿಂಹ ರಾಶಿಯಲ್ಲಿ ಚತುರ್ಗ್ರಹಿ ಯೋಗ, ಈ ಜನರ ತಿಜೋರಿ ಹಣದಿಂದ ತುಂಬಿ ತುಳುಕಲಿದೆ!

Spiritual News In Kannada: ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಸಿಂಹ ರಾಶಿಯಲ್ಲಿ ಚತುರ್ಗ್ರಹಿ ಯೋಗ ನಿರ್ಮಾಣಗೊಂಡಿದೆ, ಈ ಯೋಗ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಅಪಾರ ಧನ-ಸಂಪತ್ತನ್ನು ಕರುಣಿಸಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ,

Chaturgrahi Yog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಎಲ್ಲಾ ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ಗೋಚರಿಸಿ ಶುಭ ಹಾಗೂ ಅಶುಭ ಯೋಗಗಳನ್ನು ರೂಪಿಸುತ್ತವೆ. ಅವುಗಳ ಪ್ರಭಾವ ಮಾನವ ಜೀವನ ಸೇರಿದಂತೆ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಕಂಡುಬರುತ್ತದೆ. ಪ್ರಸ್ತುತ ಆಗಸ್ಟ್ 17 ರಂದು ಸಿಂಹ ರಾಶಿಯಲ್ಲಿ ಚತುರ್ಗ್ರಹಿ ಯೋಗ ನಿರ್ಮಾಣಗೊಳ್ಳುತ್ತಿದೆ. ಈ ಯೋಗ ಶುಕ್ರ, ಮಂಗಳ, ಬುಧ ಹಾಗೂ ಚಂದಿರರ ಮೈತ್ರಿಯಿಂದ ರೂಪುಗೊಳ್ಳುತ್ತಿದೆ. ಹೀಗಿರುವಾಗ ಈ ಯೋಗ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ತನ್ನ ಪ್ರಭಾವವನ್ನು ಬೀರಲಿದೆ. ಆದರೆ, 3 ರಾಶಿಗಳ ಜನರು ಇದರಿಂದ ವಿಶೇಷ ಪ್ರಯೋಜನಗಳನ್ನು ಪಡೆಯಲಿದ್ದು, ತಿಜೋರಿಯಲ್ಲಿ ಸಾಕಷ್ಟು ಹಣ ಹರಿದು ಬಂದು ಜೀವನದಲ್ಲಿ ಉನ್ನತಿಯಾಗಲಿದೆ.

 

ಇದನ್ನೂ ಓದಿ-ಕೆಲವೇ ಗಂಟೆಗಳಲ್ಲಿ ಈ ಜನರ ಮನೆಯಂಗಳದಲ್ಲಿ ಹಣದ ಸುರಿಮಳೆ, ಧನಸಂಪತ್ತಿನ ಹೊಳೆಯೇ ಹರಿಯಲಿದೆ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಸಿಂಹ ರಾಶಿಯಲ್ಲಿ ಚತುರ್ಗ್ರಹಿ ಯೋಗ ನಿರ್ಮಾಣಗೊಂಡಿದೆ, ಈ ಯೋಗ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಅಪಾರ ಧನ-ಸಂಪತ್ತನ್ನು ಕರುಣಿಸಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ,  

2 /5

ಮಿಥುನ ರಾಶಿ: ನಿಮ್ಮ ಪಾಲಿಗೆ ಈ ಚತುರ್ಗ್ರಹಿ ಯೋಗ ಶುಭ ಫಲಗಳನ್ನು ನೀಡಲಿದೆ. ಏಕೆಂದರೆ ಈ ಯೋಗ ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸಾಹಸ-ಪರಾಕ್ರಮ ಹೆಚ್ಚಾಗಲಿದೆ. ನಿಮ್ಮ ಪಾಲಿಗೆ ಈ ಸಮಯ ಸಾಕಷ್ಟು ಸಕಾರಾತ್ಮಕ ಸಾಬೀತಾಗಲಿದೆ. ಅದರಲ್ಲೂ ವಿದೇಶಗಳಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರಿಗೆ ಇದು ಸಕಾಲ. ಈ ಅವಧಿಯಲ್ಲಿ ನಿಮಗೆ ಸಹೋದರ-ಸಹೋದರಿಯರ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ. ಕುಟುಂಬ ಸದಸ್ಯರ ಮಧ್ಯೆ ಇರುವ ವೈಮನಸ್ಸು ಅಂತ್ಯವಾಗಲಿದೆ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳಿದ್ದರು ಅವು ಅಂತ್ಯವಾಗಲಿವೆ.  

3 /5

ಧನು ರಾಶಿ: ಚತುರ್ಗ್ರಹಿ ಯೋಗ ಧನು ರಾಶಿಯ ಜಾತಕದವರ ಪಾಲಿಗೆ ಸಾಕಷ್ಟು ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಇದು ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಭಾಗ್ಯ ಉದಯಿಸುವ ಎಲ್ಲಾ ಸಾಧ್ಯತೆಗಳಿವೆ. ಸಾಮಾಜಿಕ ಮಟ್ಟದಲ್ಲಿ ಈ ಯೋಗ ನಿಮ್ಮ ಪಾಲಿಗೆ ಅತ್ಯುತ್ತಮ ಸಾಬೀತಾಗಲಿದೆ. ಸ್ನೇಹಿತರ ಸಂಖ್ಯೆಯಲ್ಲಿ ವೃದ್ಧಿಯಾಗಲಿದೆ. ಕೆಲಸ-ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆಯಿಂದ ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಲಾಭ ಸಿಗಲಿದೆ. ಈ ಗೋಚರದ ಕಾಲದಲ್ಲಿ ನಿಮ್ಮ ಪ್ರೇಮ ಜೀವನ ಸಾಕಷ್ಟು ಸುಮಧುರತೆಯಿಂದ ಕೂಡಿರಲಿದೆ. ಮನೆ-ಕುಟುಂಬದಲ್ಲಿ ಧಾರ್ಮಿಕ ಹಾಗೂ ಮಂಗಳ ಕಾರ್ಯಗಳು ನಡೆಯುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಯ ಅತ್ಯುತ್ತಮವಾಗಿದೆ ಮತ್ತು ನಿಮಗೆ ಯಶಸ್ಸು ಸಿಗಲಿದೆ.  

4 /5

ವೃಷಭ ರಾಶಿ: ಚತುರ್ಗ್ರಹಿ ಯೋಗ ನಿಮ್ಮ ಪಾಲಿಗೂ ಕೂಡ ಅದ್ಭುತ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಭೌತಿಕ ಸುಖಗಳು ಹೆಚ್ಚಾಗಲಿವೆ. ವಾಹನ-ಆಸ್ತಿಪಾಸ್ತಿ ಖರೀದಿ ಯೋಗ ನಿರ್ಮಾಣಗೊಳ್ಳುತ್ತಿದೆ. ಕುಟುಂಬ ಸದಸ್ಯರ ನಡುವೆ ಇದ್ದ ದೀರ್ಘಕಾಲದ ವ್ಯಾಜ್ಯಗಳು ನಿವಾರಣೆಯಾಗಲಿವೆ. ಪಿತ್ರಾರ್ಜಿತ ಸಂಪತ್ತಿನ ಸುಖ ನಿಮಗೆ ಪ್ರಾಪ್ತಿಯಾಗಲಿದೆ. ರಿಯಲ್ ಎಸ್ಟೇಟ್, ಆಸ್ತಿ, ಕಲೆ, ಚಿತ್ರೋದ್ಯಮ, ಮಾಧ್ಯಮ, ಈವೆಂಟ್ ಮ್ಯಾನೇಜ್ಮೆಂಟ್ ಹಾಗೂ ಕಲಾತ್ಮಕ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೂ ಕೂಡ ಅನುಕೂಲಕರವಾಗಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)