ದೇಶದಲ್ಲೇ  ಮೊದಲ ಪ್ರಯೋಗ : ಪ್ರಾಣಿ - ಪಕ್ಷಿ ಹಾಗು ಜೀವ ವೈವಿಧ್ಯ ಸಂರಕ್ಷಣೆಗೆ ಡಿಜಿಟಲ್ ತಂತ್ರಜ್ಞಾನ

ಜೀವವೈವಿಧ್ಯ ರಕ್ಷಣೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ನಿರೀಕ್ಷೆ ಇರುವ ಡಿಜಿಟಲ್ ತಂತ್ರಜ್ಞಾನದ ಮೂಲಕ ಜೀವ ವೈವಿಧ್ಯ ಸಂರಕ್ಷಣೆಗಾಗಿ ರೂಪಿಸಲಾಗಿರುವ ಜಾಗತಿಕ ಮುಕ್ತ ವೇದಿಕೆಯ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನ ನಗರದಲ್ಲಿ ಶನಿವಾರ ನಡೆಯಲಿದೆ. ನಗರದ ರಾಡಿಸನ್ ಬ್ಲೂ ಏಟ್ರಿಯಾನಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಏಟ್ರಿಯಾ ವಿಶ್ವವಿದ್ಯಾಲಯದ ಉತ್ಕೃಷ್ಟತೆಯ ಕೇಂದ್ರ ಮತ್ತು ಸ್ವಿಸ್ನೆಕ್ಸ್ SWISSNEX [Swissnex is the Swiss global network connecting Switzerland and the world in education, research & innovation] ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಸಮ್ಮೇಳನ, ಡಿಜಿಟಲ್ ತಂತ್ರಜ್ಞಾನ ಮೂಲಕ ನಮ್ಮ ಜೀವ ವೈವಿಧ್ಯತೆ ರಕ್ಷಣೆಯ ಕ್ಷೇತ್ರದ ಸಾಧ್ಯತೆಗಳ ಬಗ್ಗೆ ಚರ್ಚಿಸಲಿದೆ.

Written by - Manjunath N | Last Updated : Jul 27, 2023, 04:33 PM IST
  • ಮನುಕುಲದ ಎದುರಿಗಿರುವ ಅತಿ ದೊಡ್ಡ ಸವಾಲು ಹವಾಮಾನ ಬದಲಾವಣೆ. ಇದರಿಂದಾಗಿ ಜೀವವೈವಿಧ್ಯ ವ್ಯವಸ್ಥೆಯು ನಾಶವಾಗುವ ಸವಾಲು ಎದುರಾಗಿದೆ.
  • ಈ ಹಿನ್ನಲೆಯಲ್ಲಿ ಡಿಜಿಟಲ್ ತಂತ್ರಜ್ಞಾನದ ಮೂಲಕ ಜಿ20 ರಾಷ್ಟ್ರಗಳು ಮತ್ತು ದಕ್ಷಿಣ ಜಗತ್ತಿಯ ದೇಶಗಳನ್ನು ಜೀವವೈವಿಧ್ಯ ಸಂರಕ್ಷಣೆಯಲ್ಲಿ ಒಟ್ಟುಗೂಡಿಸುವ ಪ್ರಯತ್ನ ಇದಾಗಿದೆ.
  • ಈ ವೇದಿಕೆಯು ನಾನಾ ರಾಷ್ಟ್ರಗಳ ನಡುವೆ ಸಹಕಾರವನ್ನು ಬೆಳೆಸಲು ಮತ್ತು ಜೀವವೈವಿಧ್ಯ ಸಂರಕ್ಷಣೆಯ ನಿರ್ಣಾಯಕ ಸಮಸ್ಯೆಯನ್ನು ನಿಭಾಯಿಸಲು ಅನನ್ಯ ಅವಕಾಶವನ್ನು ಪ್ರತಿನಿಧಿಸುತ್ತದೆ.
ದೇಶದಲ್ಲೇ  ಮೊದಲ ಪ್ರಯೋಗ : ಪ್ರಾಣಿ - ಪಕ್ಷಿ ಹಾಗು ಜೀವ ವೈವಿಧ್ಯ ಸಂರಕ್ಷಣೆಗೆ ಡಿಜಿಟಲ್ ತಂತ್ರಜ್ಞಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಜೀವವೈವಿಧ್ಯ ರಕ್ಷಣೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ನಿರೀಕ್ಷೆ ಇರುವ ಡಿಜಿಟಲ್ ತಂತ್ರಜ್ಞಾನದ ಮೂಲಕ ಜೀವ ವೈವಿಧ್ಯ ಸಂರಕ್ಷಣೆಗಾಗಿ ರೂಪಿಸಲಾಗಿರುವ ಜಾಗತಿಕ ಮುಕ್ತ ವೇದಿಕೆಯ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನ ನಗರದಲ್ಲಿ ಶನಿವಾರ ನಡೆಯಲಿದೆ. ನಗರದ ರಾಡಿಸನ್ ಬ್ಲೂ ಏಟ್ರಿಯಾನಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಏಟ್ರಿಯಾ ವಿಶ್ವವಿದ್ಯಾಲಯದ ಉತ್ಕೃಷ್ಟತೆಯ ಕೇಂದ್ರ ಮತ್ತು ಸ್ವಿಸ್ನೆಕ್ಸ್ SWISSNEX [Swissnex is the Swiss global network connecting Switzerland and the world in education, research & innovation] ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಸಮ್ಮೇಳನ, ಡಿಜಿಟಲ್ ತಂತ್ರಜ್ಞಾನ ಮೂಲಕ ನಮ್ಮ ಜೀವ ವೈವಿಧ್ಯತೆ ರಕ್ಷಣೆಯ ಕ್ಷೇತ್ರದ ಸಾಧ್ಯತೆಗಳ ಬಗ್ಗೆ ಚರ್ಚಿಸಲಿದೆ.

ಇದನ್ನೂ ಓದಿ: ಉಡುಪಿ ಘಟನೆ ವಿಚಾರದಲ್ಲಿ ರಾಜಕೀಯ ಬೇಡ, ಮಕ್ಕಳ ಹಿತಾಸಕ್ತಿ ಮುಖ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯದ ಐಟಿ ಬಿಟಿ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ, ಅರಣ್ಯ ಮತ್ತು ಪರಿಸರ ಸಚಿವ ಶ್ರೀ ಈಶ್ವರ್ ಖಂಡ್ರೆ, ಕೇರಳದ ಅರಣ್ಯ ಮತ್ತು ಪರಿಸರ ಸಚಿವ ಶ್ರೀ ಎ.ಕೆ. ಸಸಿಂದ್ರನ್, ಗೋವಾದ ಅರಣ್ಯ ಮತ್ತು ಪರಿಸರ ಸಚಿವ ವಿಶ್ವಜಿತ್ ರಾಣೆ ಹಾಗು ಇಂಟೆರ್ ಸ್ಪೀಸೀಸ್ ಮನಿ ಗ್ರೂಪ್ನ ಜೊನಾಥನ್ ಲೆಡ್ಗರ್ಡ್ ಹಾಗು ಈ ಕ್ಷೇತ್ರದ ಪರಿಣಿತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜಿ 20 ದೇಶಗಳ ಪ್ರತಿನಿಧಿಗಳು, ನಾನಾ ವಿಶ್ವದ ಅತ್ಯಂತ ಸೂಕ್ಷ್ಮ ಜೀವ ವೈವಿಧ್ಯ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕದ ರಾಜ್ಯಧಾನಿ ಏಷ್ಯಾದ ಸಿಲಿಕಾನ್ ಸಿಟಿ ಎಂದೇ ಪ್ರಸಿದ್ದವಾಗಿರುವ ಬೆಂಗಳೂರಿನಲ್ಲಿ ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಈ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದೆ.  

ಮನುಕುಲದ ಎದುರಿಗಿರುವ ಅತಿ ದೊಡ್ಡ ಸವಾಲು ಹವಾಮಾನ ಬದಲಾವಣೆ. ಇದರಿಂದಾಗಿ  ಜೀವವೈವಿಧ್ಯ ವ್ಯವಸ್ಥೆಯು ನಾಶವಾಗುವ ಸವಾಲು ಎದುರಾಗಿದೆ. ಈ ಹಿನ್ನಲೆಯಲ್ಲಿ ಡಿಜಿಟಲ್ ತಂತ್ರಜ್ಞಾನದ ಮೂಲಕ ಜಿ20 ರಾಷ್ಟ್ರಗಳು ಮತ್ತು ದಕ್ಷಿಣ ಜಗತ್ತಿಯ ದೇಶಗಳನ್ನು ಜೀವವೈವಿಧ್ಯ ಸಂರಕ್ಷಣೆಯಲ್ಲಿ ಒಟ್ಟುಗೂಡಿಸುವ ಪ್ರಯತ್ನ ಇದಾಗಿದೆ.ಈ ವೇದಿಕೆಯು ನಾನಾ ರಾಷ್ಟ್ರಗಳ ನಡುವೆ ಸಹಕಾರವನ್ನು ಬೆಳೆಸಲು ಮತ್ತು ಜೀವವೈವಿಧ್ಯ ಸಂರಕ್ಷಣೆಯ ನಿರ್ಣಾಯಕ ಸಮಸ್ಯೆಯನ್ನು ನಿಭಾಯಿಸಲು ಅನನ್ಯ ಅವಕಾಶವನ್ನು ಪ್ರತಿನಿಧಿಸುತ್ತದೆ. ಎಲ್ಲರಿಗೂ ಮುಕ್ತವಾಗಿರುವ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ, ಈ ವೇದಿಕೆಯು ಜೀವ ವೈವಿಧ್ಯ  ರಕ್ಷಣೆಯನ್ನು ಸುಲಭಗೊಳಿಸಲು, ಹವಾಮಾನ ಬದಲಾವಣೆ ತಗ್ಗಿಸುವಿಕೆಗೆ ಕೊಡುಗೆ ನೀಡಲು ಮತ್ತು ಮಾನವ ಮತ್ತು ಮಾನವೇತರ ಜೀವಿಗಳ ನಡುವೆ ಸಂಘರ್ಷವನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: ಇಂದು ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ 

ನೀತಿ ಸಂಸ್ಥೆಗಳು, ಪರಿಸರ ತಜ್ಞರು, ಹೆಸರಾಂತ ವಿಜ್ಞಾನಿಗಳು ಮತ್ತು ಗೌರವಾನ್ವಿತ ರಾಜತಾಂತ್ರಿಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ವ್ಯಕ್ತಿಗಳು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿ ಈ ಅಂತಾರಾಷ್ಟ್ರೀಯ ಮಹತ್ವದ ವಿಷಯದ ಬಗ್ಗೆ ಚರ್ಚಿಸಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News