India vs West Indies 1st ODI: ಭಾರತ ತಂಡವು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ಅನ್ನು 1-0 ಅಂತರದಲ್ಲಿ ಸೋಲಿಸಿದೆ. ಸದ್ಯ ಭಾರತ ತಂಡ ಏಕದಿನ ಸರಣಿ ಗೆಲ್ಲುವತ್ತ ದೃಷ್ಟಿ ನೆಟ್ಟಿದೆ. ಮೊದಲ ಏಕದಿನ ಪಂದ್ಯ ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಸುಮಾರು 10 ವರ್ಷಗಳ ಬಳಿಕ ಓರ್ವ ಆಟಗಾರ ಎಂಟ್ರಿ ಕೊಟ್ಟಿದ್ದಾನೆ. ಈ ಪಂದ್ಯದಲ್ಲಿ ಭಾರತ ಅದ್ಭುತ ಗೆಲುವು ಸಾಧಿಸಿತ್ತು.
ಇದನ್ನೂ ಓದಿ: ಗಂಟೆಗೆ 153 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಈ ಕಿಲಾಡಿ ವೇಗಿ 11 ತಿಂಗಳ ಬಳಿಕ Team Indiaಗೆ ಎಂಟ್ರಿ!
ಡ್ಯಾಶಿಂಗ್ ಓಪನರ್ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಸೋಲಿಸಿತು. ಡೊಮಿನಿಕಾದಲ್ಲಿ ನಡೆದ ಸರಣಿಯ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 141 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ಮಳೆ ಹಾಗೂ ಪ್ರತಿಕೂಲ ವಾತಾವರಣದಿಂದ ಡ್ರಾ ಆಗಿತ್ತು. ಈಗ ಭಾರತ ತಂಡವು 3 ಪಂದ್ಯಗಳ ಏಕದಿನ ಸರಣಿಯನ್ನು ಗೆಲ್ಲಲು ಬಯಸಿದೆ.
ಕಳೆದ ದಿನ ಬಾರ್ಬಡೋಸ್’ನ ಕೆನ್ನಿಂಗ್ಟನ್ ಓವಲ್’ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಓರ್ವ ಆಟಗಾರ ಟೀಂ ಇಂಡಿಯಾಗೆ ಪ್ರವೇಶ ಪಡೆಯಲು ಅವಕಾಶ ಪಡೆದಿದ್ದಾನೆ. ಆತ ಬೇರಾರು ಅಲ್ಲ. ಪೇಸರ್ ಜಯದೇವ್ ಉನದ್ಕತ್. ಪ್ಲೇಯಿಂಗ್ 11ನಲ್ಲಿ ಅವಕಾಶ ಪಡೆಯದಿದ್ದರೂ ಸಹ ಏಕದಿನ ತಂಡಕ್ಕೆ ಸುಮಾರು 10 ವರ್ಷಗಳ ಬಳಿಕ ಎಂಟ್ರಿಕೊಟ್ಟಿದ್ದಾರೆ. 31 ವರ್ಷದ ಆಟಗಾರ 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊಚ್ಚಿಯಲ್ಲಿ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು.
IPL-2023 ಕ್ಕಿಂತ ಮೊದಲು ಆಸ್ಟ್ರೇಲಿಯಾ ವಿರುದ್ಧ ಆಡಿದ ODI ಸರಣಿಯಲ್ಲಿ ಉನಾದ್ಕತ್ ಆಯ್ಕೆಯಾಗಿದ್ದರು. ವಿಶೇಷವೆಂದರೆ ಕಳೆದ ವರ್ಷ ಭಾರತ ಟೆಸ್ಟ್ ತಂಡಕ್ಕೆ ವಾಪಸಾದ ಅವರು 12 ವರ್ಷಗಳ ನಂತರ ಟೆಸ್ಟ್ ಪಂದ್ಯ ಆಡಿದ್ದರು. ಡಿಸೆಂಬರ್ ನಲ್ಲಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಪಂದ್ಯ ಆಡುವ ಅವಕಾಶ ಸಿಕ್ಕಿತ್ತು. ಇದಕ್ಕೂ ಮೊದಲು 2010 ರಲ್ಲಿ ಅವರು ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚುರಿಯನ್ ನಲ್ಲಿ ಆಡಿದ್ದರು.
ಜಯದೇವ್ ಉನದ್ಕತ್ ಭಾರತ ಪರ 7 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 8 ವಿಕೆಟ್ ಪಡೆದಿದ್ದಾರೆ. ಇದಲ್ಲದೇ ಟೆಸ್ಟ್ ಮಾದರಿಯಲ್ಲಿ 4 ಪಂದ್ಯಗಳಲ್ಲಿ 3 ವಿಕೆಟ್ ಹಾಗೂ 10 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದಾರೆ. ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕಬಳಿಸಲು ಸಾಧ್ಯವಾಗಿರಲಿಲ್ಲ.
ಇದನ್ನೂ ಓದಿ: World Cup 2023: ಇಂಡೋ-ಪಾಕ್ ಪಂದ್ಯದ ಪ್ರತಿ 10 ಸೆಕೆಂಡ್ ಜಾಹಿರಾತಿಗೆ ರೂ.30 ಲಕ್ಷ ಫಿಕ್ಸ್…!!
ಏಕದಿನ ಸರಣಿಗೆ ಟೀಂ ಇಂಡಿಯಾದ 15 ಆಟಗಾರರ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್ , ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮ್ರಾನ್ ಮಲಿಕ್ ಮತ್ತು ಮುಖೇಶ್ ಕುಮಾರ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ