ಮುಂಬೈ: ಖ್ಯಾತ ಉದ್ಯಮಿ ಹಾಗೂ ಟಾಟಾ ಸಮೂಹದ ಅಧ್ಯಕ್ಷ ರತನ್ ಟಾಟಾರಿಗೆ ಮೊದಲ ಗೌರವಾನ್ವಿತ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ರಾಜ್ಯ ವಿಧಾನಸಭೆಯಲ್ಲಿ ಗುರುವಾರ ನಡೆದ ಅಧಿವೇಶನದಲ್ಲಿ ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಅವರು ಈ ಮಹತ್ವದ ಘೋಷಣೆ ಮಾಡಿದರು.
ಪ್ರತಿಷ್ಠಿತ ವ್ಯಕ್ತಿಗಳಿಗೆ ನೀಡುವ ಅತ್ಯುನ್ನತ ರಾಜ್ಯ ಗೌರವವಾದ ಮಹಾರಾಷ್ಟ್ರ ಭೂಷಣ ಪ್ರಶಸ್ತಿಯ ಸಂಪ್ರದಾಯವನ್ನು ಅನುಸರಿಸಿ, ಮಹಾರಾಷ್ಟ್ರ ಸರ್ಕಾರವು ಈ ವರ್ಷದಿಂದ ಪ್ರತಿಷ್ಠಿತ ಉದ್ಯೋಗ ರತ್ನ ಪ್ರಶಸ್ತಿಯನ್ನು ಪರಿಚಯಿಸುವ ನಿರ್ಧಾರವನ್ನು ಕೈಗೊಂಡಿದೆ. ರತನ್ ಟಾಟಾ ಅವರು ಈ ಪ್ರಶಸ್ತಿಯ ಮೊದಲ ಪುರಸ್ಕೃತರಾಗಿರುತ್ತಾರೆ.
ಇದನ್ನೂ ಓದಿ: ಬೆಲೆ ಏರಿಕೆಯಿಂದ ರೋಸಿ ಹೋದ ಜನಸಾಮಾನ್ಯರು
"ಮಹಾರಾಷ್ಟ್ರ ಭೂಷಣ ಪ್ರಶಸ್ತಿಯನ್ನು ಪ್ರತಿಷ್ಠಿತ ವ್ಯಕ್ತಿಗಳಿಗೆ ನೀಡಲಾಗುತ್ತದೆ, ರಾಜ್ಯ ಸರ್ಕಾರವು ರತನ್ ಟಾಟಾ ಅವರಿಗೆ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ" ಎಂದು ಸಮಂತ್ ಹೇಳಿದ್ದಾರೆ. ಇದಲ್ಲದೆ ಯುವ ಉದ್ಯಮಿ, ಮಹಿಳಾ ಉದ್ಯಮಿ ಮತ್ತು ಮರಾಠಿ ಉದ್ಯಮಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಸಾಮಂತ್ ರಾಜ್ಯ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.
ಈ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಆದಾಯ ತೆರಿಗೆ ಪಾವತಿರಾದರಿದೊಂದು ಸಂತಸದ ಸುದ್ದಿ, 10 ಲಕ್ಷ ಆದಾಯ ಇದ್ದರೂ 1 ರೂಪಾಯಿ ತೆರಿಗೆ ಪಾವತಿಸಬೇಕಾಗಿಲ್ಲ!
ಮಹಾರಾಷ್ಟ್ರ ಉದ್ಯೋಗ ರತ್ನ ಪ್ರಶಸ್ತಿಗಳು ವ್ಯಾಪಾರ, ಕೈಗಾರಿಕೆ, ಶಿಕ್ಷಣ, ರಿಯಲ್ ಎಸ್ಟೇಟ್, ಪ್ರವಾಸೋದ್ಯಮ, ಹಣಕಾಸು ಸೇವೆಗಳು, ಫ್ಯಾಷನ್, ಎಲೆಕ್ಟ್ರಾನಿಕ್ಸ್, ಕೃಷಿ, ಬ್ಯಾಂಕಿಂಗ್, ಐಟಿ, ಆಹಾರ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ವ್ಯಕ್ತಿಗಳು ಮತ್ತು ಸಂಸ್ಥೆಗಳ ಪ್ರಯತ್ನಗಳನ್ನು ಗುರುತಿಸುವ ಗುರಿಯನ್ನು ಹೊಂದಿವೆ.
ರತನ್ ಟಾಟಾ ಅವರ ನಾಯಕತ್ವದಲ್ಲಿ TCS ಸಾರ್ವಜನಿಕವಾಗಿ ವ್ಯಾಪಾರ ಮಾಡುವ ಕಂಪನಿಯಾಯಿತು ಮತ್ತು ಟಾಟಾ ಮೋಟಾರ್ಸ್ ನ್ಯೂಯಾರ್ಕ್ ಸ್ಟಾಕ್ ಎಕ್ಸ್ಚೇಂಜ್ನಲ್ಲಿ ಲಿಸ್ಟ್ ಆಗಿ ಜಾಗತಿಕ ಮನ್ನಣೆ ಪಡೆಯಿತು. ಟಾಟಾ ಗ್ರೂಪ್ನ ಮುಖ್ಯಸ್ಥರಾಗಿದ್ದ ಅವರ 21 ವರ್ಷಗಳ ಅವಧಿಯ ಉದ್ದಕ್ಕೂ, ಸಂಸ್ಥೆಯ ಆದಾಯವು 40 ಪಟ್ಟು ಹೆಚ್ಚು ಗಮನಾರ್ಹ ಬೆಳವಣಿಗೆ ಸಾಧಿಸಿದೆ ಮತ್ತು ಲಾಭವು 50 ಪಟ್ಟು ಹೆಚ್ಚಾಗಿದೆ. ಹೀಗಾಗಿ ಉದ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.