ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯ ವಿದೇಶಿ ಪೌರತ್ವ ಪ್ರಶ್ನಿಸಿ ರಾಜ್ಯಸಭಾ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ದೂರು ಸಲ್ಲಿಸಿದ್ದು, ಈ ಸಂಬಂಧ ರಾಹುಲ್ ಗಾಂಧಿಗೆ ಕೇಂದ್ರ ಗ್ರಹ ಸಚಿವಾಲಯ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, 15 ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದೆ.
ರಾಹುಲ್ ಗಾಂಧಿ ಅವರು 2003ರಲ್ಲಿ ಬ್ರಿಟನ್ ನ ವಿಂಚೆಸ್ಟರ್ ನಲ್ಲಿರುವ ಬ್ಯಾಕೋಪ್ಸ್ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಯಾಗಿದ್ದರು. ಬಳಿಕ ಕಂಪನಿಯ ವಾರ್ಷಿಕ ಆದಾಯ ಪತ್ರದಲ್ಲಿ ರಾಹುಲ್ ಗಾಂಧಿ ಅವರ ಜನ್ಮ ದಿನಾಂಕ 19/06/1970 ಎಂದು ನಮುದಿಸಲಾಗಿದ್ದು ಬ್ರಿಟನ್ ಪುರತ್ವ ಹೊಂದಿದ್ದಾರೆ ಎಂದು ನಮೂದಿಸಲಾಗಿದೆ. ಅಲ್ಲದೆ, 17/02/2009ರ ಮತ್ತೊಂದು ಅರ್ಜಿಯಲ್ಲಿಯೂ ಸಹ ರಾಹುಲ್ ಗಾಂಧಿ ರಾಷ್ಟ್ರೀಯತೆ ಬ್ರಿಟಿಷ್ ಎಂದು ಹೇಳಲಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಅವರು ದೂರು ಸಲ್ಲಿಸಿದ್ದರು.
ಈ ಬಗ್ಗೆ ಪರಿಶೀಲನೆ ನಡೆಸಿದ ಕೇಂದ್ರ ಗೃಹ ಇಲಾಖೆ, ರಾಹುಲ್ ಗಾಂಧಿ ತಮ್ಮ ವಿದೇಶಿ ಪುರತ್ವದ ಬಗ್ಗೆ ಹುಟ್ಟಿರುವ ಪ್ರಶ್ನೆಗೆ 15 ದಿನಗಳಲ್ಲಿ ಉತ್ತರಿಸಬೇಕೆಂದು ನೋಟಿಸ್ ಜಾರಿ ಮಾಡಿದೆ.
Ministry of Home Affairs issues notice to Congress President Rahul Gandhi over his citizenship after receiving a complaint from Rajya Sabha MP Dr Subramanian Swamy; MHA asks Rahul Gandhi to respond in the matter within a 'fortnight'. pic.twitter.com/rkFu6TJ7lu
— ANI (@ANI) April 30, 2019
ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಭಾರತೀಯ ಪುರತ್ವ ಹೊಂದಿರುವುದಾಗಿ ಹೇಳಿರುವ ರಾಹುಲ್ ಗಾಂಧಿ, ಕೇರಳದ ವಯನಾಡ್ ಹಾಗೂ ಉತ್ತರಪ್ರದೇಶದ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಬೆನ್ನಲ್ಲೇ ಡಾ.ಸುಬ್ರಮಣಿಯನ್ ಸ್ವಾಮಿ ರಾಹುಲ್ ಗಾಂಧಿ ಪುರತ್ವ ಪ್ರಶ್ನಿಸಿ ದೂರು ಸಲ್ಲಿಸಿದ್ದಾರೆ.