ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಂದ ಹಣ ವಸೂಲು; ಪ್ರಕರಣ ದಾಖಲು

 ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಸಂಬಂಧಿಸಿದಂತೆ ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವುದಕ್ಕೆ, ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ದಾಖಲಾಗಿದೆ.

Written by - Manjunath N | Last Updated : Aug 2, 2023, 05:03 PM IST
  • ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಂದ ಯಾವುದೇ ಶುಲ್ಕ ಪಡೆಯಬಾರದು
  • ಇದ್ದರೂ ಸಹಿತ ಗೃಹಲಕ್ಷ್ಮಿ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ ರೂ.50/- ಹಣ ಸ್ವೀಕರಿಸಿ ಸರ್ಕಾರಕ್ಕೆ ನಂಬಿಕೆ ದ್ರೋಹಮಾಡಿ ಮೋಸ ಮಾಡಿರುತ್ತಾರೆ.
  • ಹೀಗಾಗಿ ಇವರ ಮೇಲೆ ಪೆಲೀಸ್ ಠಾಣೆಯಲ್ಲಿ ಎಫ್‍ಐಆರ್ ದೂರು ದಾಖಲಿಸಲಾಗಿದೆ.
 ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಂದ ಹಣ ವಸೂಲು; ಪ್ರಕರಣ ದಾಖಲು title=

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಸಂಬಂಧಿಸಿದಂತೆ ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವುದಕ್ಕೆ, ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಡೂರು ತಾಲೂಕಿನ ಅಂಕಮನಾಳು ಗ್ರಾಮದ ಗ್ರಾಮಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ದೇವರಾಜ್ ಎಂಬುವಾತ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪ್ರತಿ ಅರ್ಜಿದಾರರಿಂದ ರೂ.50/- ಹಣ ಪಡೆಯುತ್ತಿರುವುದು ಕಂಡುಬಂದಿದ್ದು, ಸಂಡೂರು ತಾಲೂಕಿನ ಚೋರನೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Crime: ವಾಟ್ಸಾಪ್‌, ಫೇಸ್‌ಬುಕ್‌ನಲ್ಲಿ ಹುಡುಗಿಯರಿಗೆ ಹಾರ್ಟ್‌ ಎಮೋಜಿ ಕಳಿಸಿದ್ರೆ ಜೈಲ್‌ ಗ್ಯಾರಂಟಿ..!

ಅಂಕಮನಾಳು ಗ್ರಾಮದ ಮಾರೆಮ್ಮ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕುಳಿತು, ಉದ್ದೇಶ ಪೂರ್ವಕವಾಗಿ ಗೃಹಲಕ್ಷ್ಮಿ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ ರೂ.50/- ಹಣ ಸ್ವೀಕರಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆ.01 ರಂದು ಮಧ್ಯಾಹ್ನ 02 ಕ್ಕೆ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು.ಸಂಡೂರು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳನಾಗಪ್ಪ, ಅಂಕಮನಾಳು ಗ್ರಾಮದ ಗ್ರಾಮ ಆಡಳಿತಾಧಿಕಾರಿ ಬಿ.ಕೊಟ್ರಪ್ಪ, ಚೋರನೂರು ಪಟ್ಟಣದ ಕಂದಾಯ ನಿರೀಕ್ಷಕ ಬಿ.ವೀರೇಂದ್ರ ಕುಮಾರ ಅವರು ದಾಳಿ ನಡೆಸಿ ಅಕ್ರಮವನ್ನು ಪತ್ತೆ ಹಚ್ಚಿದ್ದರು.

ಇದನ್ನೂ ಓದಿ: ಫ್ರೀ ಗ್ಯಾರಂಟಿ ಯೋಜನೆಗಳಿಗೆ ಕರ್ನಾಟಕ ಸರ್ಕಾರದ ಬಳಿ ಹಣವಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ಸಿಎಂ ತಿರುಗೇಟು!

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಂದ ಯಾವುದೇ ಶುಲ್ಕ ಪಡೆಯಬಾರದು ಎಂದು ಸರ್ಕಾರದ ಆದೇಶ ಇದ್ದರೂ ಸಹಿತ ಗೃಹಲಕ್ಷ್ಮಿ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ ರೂ.50/- ಹಣ ಸ್ವೀಕರಿಸಿ ಸರ್ಕಾರಕ್ಕೆ ನಂಬಿಕೆ ದ್ರೋಹಮಾಡಿ ಮೋಸ ಮಾಡಿರುತ್ತಾರೆ. ಹೀಗಾಗಿ ಇವರ ಮೇಲೆ ಪೆÇಲೀಸ್ ಠಾಣೆಯಲ್ಲಿ ಎಫ್‍ಐಆರ್ ದೂರು ದಾಖಲಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News