ಬೆಂಗಳೂರು : ಮಹಿಳೆಯರ ಸಬಲೀಕರಣಕ್ಕಾಗಿ ಕೆಂದರ್ ಸರ್ಕಾರ ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಮೂಲಕ ಮಹಿಳೆಯರ ಅಭಿವೃದ್ದಿಗೆ ನೆರವು ನೀಡುತ್ತಿದೆ. ಶಿಕ್ಷಣ, ಸುರಕ್ಷತೆ ಮತ್ತು ಆರ್ಥಿಕ ಸ್ವಾತಂತ್ರ್ಯದ ಅಗತ್ಯವನ್ನು ಪೂರೈಸಲು ನೆರವಾಗುವಂತೆ ಸರ್ಕಾರ ಮಹಿಳೆಯರಿಗಾಗಿ ಪರಿಚಯಿಸಿದ 5 ಪ್ರಮುಖ ಯೋಜನೆಗಳು ಇಲ್ಲಿವೆ.
1. ಮಹಿಳಾ ಸಮ್ಮಾನ್ ಬಚತ್ ಪತ್ರ ಯೋಜನೆ ಅಥವಾ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ :
2023 ರ ಬಜೆಟ್ನಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮಹಿಳೆಯರು ಮತ್ತು ಬಾಲಕಿಯರಿಗಾಗಿ ಮಹಿಳಾ ಸಮ್ಮಾನ್ ಬಚತ್ ಪತ್ರ ಯೋಜನೆ ಅಥವಾ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ ಎಂಬ ಉಳಿತಾಯ ಯೋಜನೆಯನ್ನು ಘೋಷಿಸಿದರು. ಈ ಯೋಜನೆಯು ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಇದು ಒಂದು ಬಾರಿಯ ಸಣ್ಣ ಉಳಿತಾಯ ಯೋಜನೆಯಾಗಿದ್ದು, ಗರಿಷ್ಠ 2 ಲಕ್ಷ ಠೇವಣಿಗೆ ಶೇಕಡಾ 7.5 ರ ಬಡ್ಡಿದರವನ್ನು ನೀಡುತ್ತದೆ.
ಇದನ್ನೂ ಓದಿ : ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿಗೆ ಹಣ ಠೇವಣಿ ಇರಿಸುವ ಬದಲು ಈ ಯೋಜನೆಗಳನ್ನು ಒಮ್ಮೆ ಟ್ರೈ ಮಾಡಿ ನೋಡಿ!
2. ಸುಕನ್ಯಾ ಸಮೃದ್ಧಿ ಯೋಜನೆ :
'ಬೇಟಿ ಪಡಾವೋ-ಬೇಟಿ ಬಚಾವೋ' ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಉಳಿತಾಯ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿಯಲ್ಲಿ, 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಗುವಿನ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದು. ಈ ಯೋಜನೆಯು ಹಲವಾರು ತೆರಿಗೆ ಪ್ರಯೋಜನಗಳೊಂದಿಗೆ ಹೆಚ್ಚಿನ ಬಡ್ಡಿದರವನ್ನು ಹೊಂದಿರುತ್ತದೆ. ಭಾರತೀಯ ಅಂಚೆ ಕಚೇರಿಯ ಪ್ರಕಾರ, ಪಾಲಕರು ಹೆಣ್ಣು ಮಗುವಿನ ಹೆಸರಿನಲ್ಲಿ ಕನಿಷ್ಠ 250 ರೂ ಮತ್ತು ಗರಿಷ್ಠ 1,50,000 ವರೆಗೆ ಠೇವಣಿ ಮಾಡಬಹುದು.
3. ಸಖಿ ನಿವಾಸ :
ಉದ್ಯೋಗಸ್ಥ ಮಹಿಳೆಯರಿಗೆ ಸುರಕ್ಷಿತ ಮತ್ತು ಅನುಕೂಲಕರವಾದ ವಸತಿ ಸೌಕರ್ಯವನ್ನು ಒದಗಿಸುವ ಸಲುವಾಗಿ, ಸಖಿ ನಿವಾಸ್ ಎಂಬ ಯೋಜನೆಯನ್ನು ಪ್ರಾರಂಭಿಸಲಾಯಿತು. ಈ ಯೋಜನೆಯು ಹೊಸ ಹಾಸ್ಟೆಲ್ ಕಟ್ಟಡಗಳ ನಿರ್ಮಾಣ, ಅಸ್ತಿತ್ವದಲ್ಲಿರುವ ಹಾಸ್ಟೆಲ್ ಕಟ್ಟಡಗಳ ವಿಸ್ತರಣೆ ಮತ್ತು ಬಾಡಿಗೆ ಆವರಣದಲ್ಲಿ ಹಾಸ್ಟೆಲ್ ಕಟ್ಟಡಗಳ ಯೋಜನೆಗಳಿಗೆ ಸಹಾಯ ಮಾಡುತ್ತಿದೆ. ಈ ಯೋಜನೆಯಡಿಯಲ್ಲಿ ಸಹಾಯ ಮಾಡಲಾಗುತ್ತಿರುವ ಮಹಿಳಾ ಹಾಸ್ಟೆಲ್ ಜಾತಿ, ಧರ್ಮ, ವೈವಾಹಿಕ ಸ್ಥಿತಿ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಯಾವುದೇ ಭೇದವಿಲ್ಲದೆ ಎಲ್ಲಾ ಉದ್ಯೋಗಸ್ಥ ಮಹಿಳೆಯರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು.
ಇದನ್ನೂ ಓದಿ : ಲೋಕಸಭೆಗೆ ಪಿಂಚಣಿಗೆ ಸಂಬಂಧಿಸಿದ ಮಹತ್ವದ ಮಾಹಿತಿ ನೀಡಿದೆಯಾ ಕೇಂದ್ರ ಸರ್ಕಾರ?
4. ಮಹಿಳಾ ಶಕ್ತಿ ಕೇಂದ್ರ ಯೋಜನೆ :
ಕೌಶಲ್ಯಾಭಿವೃದ್ಧಿ, ಉದ್ಯೋಗ, ಡಿಜಿಟಲ್ ಸಾಕ್ಷರತೆ, ಆರೋಗ್ಯ ಮತ್ತು ಪೋಷಣೆಯ ಅವಕಾಶಗಳೊಂದಿಗೆ ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಈ ಯೋಜನೆ ಜಾರಿಗೆ ತರಲಾಗಿದೆ. MSK ಮಹಿಳಾ ಕೇಂದ್ರಿತ ಯೋಜನೆಗಳು ಮತ್ತು ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸ್ಥಳೀಯ ಆಡಳಿತ, ರಾಜ್ಯ ಸರ್ಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಈ ಯೋಜನೆಯು ಶಿಕ್ಷಣ, ಆರೋಗ್ಯ ರಕ್ಷಣೆ, ಕೆಲಸದ ಪ್ರಗತಿ ಮತ್ತು ರಾಜಕೀಯ ಮತ್ತು ಆರ್ಥಿಕ ನಿರ್ಧಾರ ತೆಗೆದುಕೊಳ್ಳುವಲ್ಲಿ ಪ್ರಾತಿನಿಧ್ಯದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಸಮಾನ ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.
5. ಮಹಿಳಾ ಸಹಾಯವಾಣಿ ಯೋಜನೆ :
ಈ ಕಾರ್ಯಕ್ರಮವು ಖಾಸಗಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ 24 ಗಂಟೆಗಳ ತುರ್ತು ಸಹಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ. ದೇಶದಾದ್ಯಂತ ಮಹಿಳೆಯರಿಗೆ ತಕ್ಷಣದ ಸಹಾಯವನ್ನು ಒದಗಿಸುವ ಏಕೈಕ ಟೋಲ್-ಫ್ರೀ ಸಂಖ್ಯೆ (181) ಮೂಲಕ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಮಹಿಳಾ ಸಹಾಯವಾಣಿ ಸಂಖ್ಯೆಗಳನ್ನು ಲಭ್ಯಗೊಳಿಸಲಾಗಿದೆ.
ಇದನ್ನೂ ಓದಿ: ಸರ್ಕಾರಿ ನೌಕರರ ವೇತನದಲ್ಲಿ 15144 ಹೆಚ್ಚಳ... ಡಿಟೇಲ್ಸ್ ಇಲ್ಲಿದೆ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.