ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಸಂಘಟನೆಗಳ ಆಕ್ಷೇಪ : ಪರಿಶೀಲಿಸುವಂತೆ ಸಿಎಸ್ ಗೆ ರಾಜ್ಯಪಾಲರ ಸೂಚನೆ

ವಿಧಾನ ಪರಿಷತ್ ಸದಸ್ಯ ಸ್ಥಾನ ನಾಮ‌ನಿರ್ದೇಶನಕ್ಕೆ ಆಕ್ಷೇಪಿಸಿ ದೂರು ದಾಖಲಾದ ಹಿನ್ನೆಲೆ ಪರಿಶೀಲನೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.  

Written by - RACHAPPA SUTTUR | Last Updated : Aug 5, 2023, 09:13 PM IST
  • ವಿಧಾನ ಪರಿಷತ್ ಸದಸ್ಯ ಸ್ಥಾನ ನಾಮ‌ನಿರ್ದೇಶನಕ್ಕೆ ಆಕ್ಷೇಪಿಸಿ ದೂರು
  • ಪರಿಶೀಲನೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ
  • ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ ರಾಜ್ಯಪಾಲರು
ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಸಂಘಟನೆಗಳ ಆಕ್ಷೇಪ : ಪರಿಶೀಲಿಸುವಂತೆ ಸಿಎಸ್ ಗೆ ರಾಜ್ಯಪಾಲರ ಸೂಚನೆ  title=

ಬೆಂಗಳೂರು : ರಾಜ್ಯಪಾಲರಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಜನ ಜಾಗೃತಿ ವೇದಿಕೆ ಮತ್ತು ನ್ಯಾಯಮಿತ್ರ ಸಂಘಟನೆಯ ಕಾರ್ಯದರ್ಶಿ ರಾಘವಾಚಾರ್ ಶಾಸ್ತ್ರಿ ಎಂಬವರು ದೂರು ನೀಡಿದ್ದರು. ದೂರು ಹಿನ್ನಲೆಯಲ್ಲಿ ಆರೋಪದ ಬಗ್ಗೆ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. 

ಎಂ.ಆರ್.ಸೀತಾರಾಮ್, ಸುಧಾಮ್ ದಾಸ್ ಮತ್ತು ಮನ್ಸೂರ್ ಖಾನ್ ನಾಮನಿರ್ದೇಶನ ಶಿಫಾರಸು ಬಗ್ಗೆ ಆಕ್ಷೇಪಿಸಲಾಗಿತ್ತು. ಈ ಸಂಬಂಧ ರಾಜ್ಯಪಾಲರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪರಿಶೀಲಿಸುವಂತೆ ನಿರ್ದೇಶನ ನೀಡಿದ್ದಾರೆ. 

ಸಾಮಾಜಿಕ ಸೇವೆ ಕ್ಷೇತ್ರದಲ್ಲಿ ಸುಧಾಮ್ ದಾಸ್, ಶಿಕ್ಷಣ ಕ್ಷೇತ್ರದಲ್ಲಿ ಎಂ.ಆರ್.ಸೀತಾರಾಮ್ ಮತ್ತು ಸಹಕಾರ ಕ್ಷೇತ್ರದಿಂದ ಮನ್ಸೂರ್ ಖಾನ್ ರನ್ನು ವಿಧಾನಪರಿಷತ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಿ ಶಿಫಾರಸು ಮಾಡಲಾಗಿತ್ತು. ಜುಲೈ 29ಕ್ಕೆ ಮೂವರ ನಾಮನಿರ್ದೇಶನಕ್ಕೆ ಆಕ್ಷೇಪಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ‌.

ಇದನ್ನೂ ಓದಿ: "ಸರಕಾರದ ದುಡ್ಡು ಸಾರ್ವಜನಿಕರ ದುಡ್ಡೇ ಆಗಿರುವುದರಿಂದ ಅದನ್ನು ಇತಿಮಿತಿಯಲ್ಲಿ ಬಳಸಬೇಕು"

ಈ ಹಿಂದೆ ವಿ.ಸೋಮಣ್ಣ ಅವರ ಹೆಸರು ಸಹ ಇದೇ ರೀತಿ ಆಕ್ಷೇಪಕ್ಕೆ ಒಳಗಾಗಿತ್ತು. ನಾಮನಿರ್ದೇಶನ ಶಿಫಾರಸು ವೇಳೆ ನಿಗದಿತ ವಿಭಾಗ ಮತ್ತು ಶಿಫಾರಸು ಗೊಂಡವರ ಬಗ್ಗೆ ಸೂಕ್ತ ದಾಖಲೆ ಸಲ್ಲಿಸಬೇಕು. ವಿ.ಸೋಮಣ್ಣ ಹೆಸರು ಶಿಕ್ಷಣ ಕ್ಷೇತ್ರದಿಂದ ಶಿಫಾರಸು ಗೊಂಡಿದ್ದರು. ಅಂದು ರಾಜ್ಯಪಾಲರು ತಿರಸ್ಕಾರ ಮಾಡಿದ್ದರಿಂದ ಸಾಮಾಜಿಕ ಕ್ಷೇತ್ರದ ಮೂಲಕ ಪರಿಷತ್ ಸದಸ್ಯರಾಗಿ ನೇಮಕ ಮಾಡಲಾಗಿತ್ತು.

ಇದೀಗ ಮತ್ತದೇ ರೀತಿಯ ಆಡಳಿತಾತ್ಮಕ ಸಂಕಷ್ಟ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡಿದ ಬಳಿಕ ಮುಖ್ಯ ಕಾರ್ಯದರ್ಶಿ ರಾಜ್ಯಪಾಲರಿಗೆ ವಿವರಣೆ ನೀಡಲಿದ್ದಾರೆ. 

ಉಮಾಶ್ರೀ ನಾಮನಿರ್ದೇಶನಕ್ಕೆ ಸಿಎಂ ಒಲವು?

ಇತ್ತ ಮನ್ಸೂರ್ ಖಾನ್ ನಾಮನಿರ್ದೇಶ‌ನಕ್ಕೆ ಸಿಎಂ ಸಿದ್ದರಾಮಯ್ಯ ಒಲವು ಹೊಂದಿಲ್ಲ ಎನ್ನಲಾಗಿದೆ. ಹೀಗಾಗಿ ಮನ್ಸೂರ್ ಖಾನ್ ಬದಲಿಗೆ ಮಾಜಿ ಸಚಿವೆ ಉಮಾಶ್ರೀ ಹೆಸರನ್ನು ಪರಿಷತ್ ಸದಸ್ಯ ಸ್ಥಾನಕ್ಕೆ ಶಿಫಾರಸು ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. 

ಇದನ್ನೂ ಓದಿ: "ಗ್ಯಾರಂಟಿ ಜಾರಿಯಿಂದ ಬಿಜೆಪಿಯವರಿಗೆ ತಡೆದುಕೊಳ್ಳಲಾಗುತ್ತಿಲ್ಲ"- ಸಚಿವ ವೆಂಕಟೇಶ್

ಕಾಂಗ್ರೆಸ್ ಹಿರಿಯ ಮುಖಂಡ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ರನ್ನು ಪರಿಷತ್ ಸದಸ್ಯ ಸ್ಥಾನದ ನಾಮನಿರ್ದೇಶನಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಮನ್ಸೂರ್ ಖಾನ್ ಬಗ್ಗೆ ಹೆಚ್ಚಿನ ಒಲವು ಹೊಂದಿಲ್ಲ ಎನ್ನಲಾಗಿದೆ‌. ಅವರ ಬದಲು ಉಮಾಶ್ರೀ ಹೆಸರನ್ನು ಶಿಫಾರಸು ಮಾಡಲು ಒಲವು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ನಾಳೆ ಕೈ ಮುಸ್ಲಿಂ ಮುಖಂಡರ ಸಭೆ

ನಾಳೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಸಂಸದರು, ಜಿಲ್ಲಾಧ್ಯಕ್ಷರು, ಮಾಜಿ ಜಿಲ್ಲಾಧ್ಯಕ್ಷರ ಸಭೆ ಕರೆದಿದ್ದಾರೆ.

ಮನ್ಸೂರ್ ಖಾನ್ ನಾಮ ನಿರ್ದೇಶನ ವಿವಾದ ಹಿನ್ನೆಲೆ ಚರ್ಚೆ ನಡೆಸಲು ಕೈ ಮುಸ್ಲಿಂ ನಾಯಕರು ಸಭೆ ಕರೆದಿದ್ದಾರೆ ಎಂದು ಹೇಳಲಾಗಿದೆ. ಮನ್ಸೂರ್ ಖಾನ್ ಬದಲಿಗೆ ಉಮಾಶ್ರೀ ನಾಮನಿರ್ದೇಶನಕ್ಕೆ ಒಲವು ಹೊಂದಿರುವ ಬಗ್ಗೆ ಕೈ ಮುಸ್ಲಿಂ ನಾಯಕರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಸಿಎಂ ತೀರ್ಮಾನಕ್ಕೆ ಕಾಂಗ್ರೆಸ್ ಪಕ್ಕದಲ್ಲಿಯೇ ವಿರೋಧ ಮತ್ತು ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ನಾಳೆ ನಡೆಯುವ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಸಿಎಂ ಮೇಲೆ ಒತ್ತಡ ಹೇರಲು ಯತ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News