ರೋಹಿತ್ ಶರ್ಮಾ ಹೆಸರಿನಲ್ಲಿದ್ದ 14 ವರ್ಷ ಹಳೆಯ ದಾಖಲೆ ಇನ್ಮುಂದೆ ಜೈಸ್ವಾಲ್ ತೆಕ್ಕೆಗೆ!

Yashasvi Jaiswal: ಯಶಸ್ವಿ ಜೈಸ್ವಾಲ್ ಅಜೇಯ 84 ರನ್ ಬಾರಿಸುವ ಮೂಲಕ ಭಾರತದ ಹಾಲಿ ನಾಯಕ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರ 14 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ

Written by - Bhavishya Shetty | Last Updated : Aug 13, 2023, 10:32 AM IST
    • ಯುವ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಇತಿಹಾಸ ಸೃಷ್ಟಿಸಿದ್ದಾರೆ.
    • ರೋಹಿತ್ ಶರ್ಮಾ ಅವರ 14 ವರ್ಷದ ಸೂಪರ್ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ.
    • ಯಶಸ್ವಿ ಜೈಸ್ವಾಲ್ 'ಪಂದ್ಯ ಶ್ರೇಷ್ಠ' ಪ್ರಶಸ್ತಿಯನ್ನೂ ಸಹ ಪಡೆದಿದ್ದಾರೆ.
ರೋಹಿತ್ ಶರ್ಮಾ ಹೆಸರಿನಲ್ಲಿದ್ದ 14 ವರ್ಷ ಹಳೆಯ ದಾಖಲೆ ಇನ್ಮುಂದೆ ಜೈಸ್ವಾಲ್ ತೆಕ್ಕೆಗೆ!  title=
Rohit Sharma-Yashasvi Jaiswal

Yashasvi Jaiswal, New Record: ಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಇತಿಹಾಸ ಸೃಷ್ಟಿಸಿದ್ದಾರೆ. ಭಾರತದ ಹಾಲಿ ನಾಯಕ ಮತ್ತು ಆರಂಭಿಕ ರೋಹಿತ್ ಶರ್ಮಾ ಅವರ 14 ವರ್ಷದ ಸೂಪರ್ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ. ಆಗಸ್ಟ್ 12 ಶನಿವಾರದಂದು, ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ T20 ಸರಣಿಯ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆಡಿದ್ದು, ಭರ್ಜರಿ ಗೆಲುವು ಸಾಧಿಸಿದೆ. ಯಶಸ್ವಿ ಜೈಸ್ವಾಲ್ ಅಜೇಯ 84 ರನ್ ಗಳಿಸಿ ಭಾರತದ ಗೆಲುವಿಗೆ ಪ್ರಮುಖ ಕೊಡುಗೆಯನ್ನು ನೀಡಿದ್ದರು. ಅಷ್ಟೇ ಅಲ್ಲದೆ, ಯಶಸ್ವಿ ಜೈಸ್ವಾಲ್ 'ಪಂದ್ಯ ಶ್ರೇಷ್ಠ' ಪ್ರಶಸ್ತಿಯನ್ನೂ ಸಹ ಪಡೆದಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾದ ಭವಿಷ್ಯದ ‘ಜಹೀರ್ ಖಾನ್" ಈ ಬೌಲರ್! ಪದಾರ್ಪಣೆ ಪಂದ್ಯದಲ್ಲೇ ಅಬ್ಬರಿಸಿದ ಕಿಲಾಡಿ ಈತ

ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅಜೇಯ 84 ರನ್ ಬಾರಿಸುವ ಮೂಲಕ ಭಾರತದ ಹಾಲಿ ನಾಯಕ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರ 14 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಯಶಸ್ವಿ ಜೈಸ್ವಾಲ್ ಇದೀಗ ಟಿ20 ಅಂತಾರಾಷ್ಟ್ರೀಯ ಮಾದರಿಯಲ್ಲಿ ಅರ್ಧಶತಕ ಬಾರಿಸಿದ ಭಾರತದ ಅತ್ಯಂತ ಕಿರಿಯ ಆರಂಭಿಕ ಆಟಗಾರ ಎನಿಸಿಕೊಂಡಿದ್ದಾರೆ. ಯಶಸ್ವಿ ಜೈಸ್ವಾಲ್ 21 ವರ್ಷ 227 ದಿನಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ರೋಹಿತ್ ಶರ್ಮಾ 22 ವರ್ಷ ಮತ್ತು 41 ದಿನಗಳ ವಯಸ್ಸಿನಲ್ಲಿ ಟಿ 20 ಅಂತರರಾಷ್ಟ್ರೀಯ ಸ್ವರೂಪದಲ್ಲಿ ಅರ್ಧಶತಕ ಗಳಿಸಿದ ಕಿರಿಯ ಆರಂಭಿಕ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದ್ದರು. 2009ರಲ್ಲಿ ಐರ್ಲೆಂಡ್ ವಿರುದ್ಧ ರೋಹಿತ್ ಶರ್ಮಾ ಈ ದಾಖಲೆ ಮಾಡಿದ್ದರು. ಇಶಾನ್ ಕಿಶನ್ 2021 ರಲ್ಲಿ ಇಂಗ್ಲೆಂಡ್ ವಿರುದ್ಧ 22 ವರ್ಷ ಮತ್ತು 41 ದಿನಗಳ ವಯಸ್ಸಿನಲ್ಲಿ T20 ಅಂತರರಾಷ್ಟ್ರೀಯ ಅರ್ಧಶತಕವನ್ನು ಗಳಿಸಿದರು.

ಇದನ್ನೂ ಓದಿ: ಪಾಕಿಸ್ತಾನದ ಈ ವಿಶ್ವದಾಖಲೆ ಮುರಿದೇಬಿಟ್ಟರು ಗಿಲ್-ಜೈಸ್ವಾಲ್ ಜೋಡಿ!

ಯಶಸ್ವಿ ಜೈಸ್ವಾಲ್ ಅವರು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ತಮ್ಮ ಟೆಸ್ಟ್ ಮತ್ತು T20 ಅಂತರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದರು. ಕಳೆದ ತಿಂಗಳು ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಜೈಸ್ವಾಲ್ 177 ರನ್‌’ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರು. ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾವನ್ನು ಇನ್ನಿಂಗ್ಸ್ ಮತ್ತು 141 ರನ್‌ಗಳಿಂದ ಗೆಲ್ಲಲು ಸಹಾಯ ಮಾಡಿದರು.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News