ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಬರ್ತ್‍ಡೇ ವಿಶ್ ಮಾಡಿದ ಪ್ರಧಾನಿ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

Last Updated : May 18, 2019, 11:09 AM IST
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಬರ್ತ್‍ಡೇ ವಿಶ್ ಮಾಡಿದ ಪ್ರಧಾನಿ ಮೋದಿ! title=

ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

"ನಮ್ಮ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಆ ದೇವರು ಆಯಸ್ಸು ಮತ್ತು ಉತ್ತಮ ಆರೋಗ್ಯ ನೀಡಲೆಂದು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. 

ಮಾಜಿ ಪ್ರಧಾನಿ ದೇವೇಗೌಡರು 87 ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸದ್ಯ ಕುಟುಂಬ ಸಮೇತ ಆಂಧ್ರ ಪ್ರದೇಶದ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ತೆರಳಿದ್ದಾರೆ.

Trending News