ಡಿ.ಕೆ. ಶಿವಕುಮಾರ್ ಯಾವ ಕಾಲಕ್ಕೂ ಸಿಎಂ ಆಗಲ್ಲ : ಯತ್ನಾಳ್‌ ಭವಿಷ್ಯ

ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸೂಪರ್ ಸಿಎಂ ಆಗಿದ್ದಾರೆ, ಆದರೆ ಯಾವ ಕಾಲಕ್ಕೂ ಅವರು ಸಿಎಂ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಯತ್ನಾಳ ಬ್ಯಾಟ್‌ ಬೀಸಿದರು. 

Written by - Krishna N K | Last Updated : Aug 18, 2023, 05:24 PM IST
  • ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸೂಪರ್ ಸಿಎಂ ಆಗಿದ್ದಾರೆ.
  • ಆದರೆ ಅವರು ಯಾವ ಕಾಲಕ್ಕೂ ಅವರು ಸಿಎಂ ಆಗಲ್ಲ.
  • ಡಿಕೆಶಿ ಭವಿಷ್ಯ ನುಡಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌.
ಡಿ.ಕೆ. ಶಿವಕುಮಾರ್ ಯಾವ ಕಾಲಕ್ಕೂ ಸಿಎಂ ಆಗಲ್ಲ : ಯತ್ನಾಳ್‌ ಭವಿಷ್ಯ title=

ವಿಜಯಪುರ : ಇದೀಗ ಡಿ.ಕೆ. ಶಿವಕುಮಾರ್‌ ಅವರು ಸೂಪರ್‌ ಸಿಎಂ ಆಗಿದ್ದಾರೆ. ಆದ್ರೆ ಯಾವ ಕಾಲಕ್ಕೂ ಅವರು ಮುಖ್ಯಮಂತ್ರಿಯಾಗುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಭವಿಷ್ಯ ನುಡಿದರು.

ನಗರದಲ್ಲಿ ಮಾತನಾಡಿದ ಅವರು, ಡಿಕೆಶಿ ಸೂಪರ್ ಸಿಎಂ ಆಗಿದ್ದಾರೆ, ಆದರೆ ಯಾವ ಕಾಲಕ್ಕೂ ಅವರು ಸಿಎಂ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಯತ್ನಾಳ ಬ್ಯಾಟ್‌ ಬೀಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಬಹಳ ನೋವು ಇದೆ, ಕಾಂಗ್ರೆಸ್‌ನ ಕೊನೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ. ಇದೀಗ ಸುಮ್ಮನೆ ಸಿಎಂ ಹುದ್ದೆಯಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದರು.

ಇದನ್ನೂ ಓದಿ: ಶಾಲಾ‌ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಯೋಜನೆಗೆ ಚಾಲನೆ..!

ಅಲ್ಲದೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರೂ ಸಹ ಆಡಳಿತ ಮಾತ್ರ ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆ ಎಂದು ದೂರಿದರು. ಇನ್ನು ಆರು ತಿಂಗಳು ಆಗ್ಲಿ, ಐದು ವರ್ಷ ಆಗ್ಲಿ ಸಿಎಂ ಸಿದ್ದರಾಮಯ್ಯ ಅವರೇ ಇರುತ್ತಾರೆ ಹೊರತು ಯಾವತ್ತೂ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಶಾಸಕ ಯತ್ನಾಳ್‌ ಭವಿಷ್ಯ ನುಡಿದರು. 

ಯಾರು ಬಿಟ್ಟು ಹೋಗ್ತಾರೆ ಎಂಬ ಬಗ್ಗೆ ನಿಖರವಾಗಿ ಹೇಳಿಲ್ಲ : ಮಾಜಿ ಸಚಿವ ಗೋವಿಂದ ಕಾರಜೋಳ

ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಹೋಗ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಮಾಜಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದರು. ಯಾರು ಬಿಟ್ಟು ಹೋಗ್ತಾರೆ ಎಂಬ ಬಗ್ಗೆ ನಿಖರವಾಗಿ ಹೇಳಿಲ್ಲ, ಮಾಧ್ಯಮಗಳಲ್ಲಿ ಊಹಾಪೋಹಗಳು ಸೃಷ್ಟಿ ಆಗ್ತಿವೆ, ನನ್ನ ಮಾಹಿತಿ ಪ್ರಕಾರ ಯಾರು ಪಕ್ಷ ಬಿಟ್ಟು ಹೋಗುವವರಿಲ್ಲ, ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗ್ತಿಲ್ಲ, ಹಾಗಾಗಿ ಯಾಕೆ ಬಿಟ್ಟು ಹೋಗ್ತಾರೆ ಎಂದರು.

ಇದನ್ನೂ ಓದಿ: "ಸ್ಟಾಲಿನ್ ನಿಮ್ಮ ಸ್ನೇಹಿತರೇ ಅಲ್ಲವೇ? ಮೇಕೆದಾಟು ಅಣೆಕಟ್ಟು ಕಟ್ಟಿ"

ಮೂರು ತಿಂಗಳಲ್ಲಿ ಕಾಂಗ್ರೆಸ್ ಅಭಿವೃದ್ಧಿ ಶೂನ್ಯ, ನೌಕರರ ವರ್ಗಾವಣೆ ದಂಧೆಯನ್ನೇ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾರು ಹೋಗಲ್ಲ, ರಾತ್ರಿ ಕಂಡ ಬಾವಿಗೆ ಹಗಲು ಯಾರು ಬಿಳ್ಳುವುದಿಲ್ಲ ಅನೋದು ನನ್ನ ಅಭಿಪ್ರಾಯ ಎಂದರು ಅಲ್ಲದೆ, ಬಾಗಲಕೋಟೆ ಶಿವಾಜಿ ತೆರವು ಮಾಡಿರುವ ವಿಚಾರದ ಕುರಿತು ಮಾತನಾಡಿ, ಸಂಜೆ ಬಾಗಲಕೋಟೆಗೆ ಹೋಗಿ ವಿಚಾರ ಮಾಡುತ್ತೇನೆ ಎಂದ ಗೋವಿಂದ ಕಾರಜೋಳ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News