Active Indian cricketers with most runs in ODIs against Pakistan: ಈ ವರ್ಷ ನಡೆಯಲಿರುವ ಏಷ್ಯಾಕಪ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಈ ವರ್ಷ ನಡೆಯಲಿರುವ ಏಷ್ಯಾಕಪ್ 2023 ರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿವೆ. ಜೂನ್ 15 ರಂದು, ಏಷ್ಯಾ ಕ್ರಿಕೆಟ್ ಕೌನ್ಸಿಲ್ (ACC) ಏಷ್ಯಾ ಕಪ್ 2023 ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಂದ್ಯಾವಳಿಯು ಆಗಸ್ಟ್ 31 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ.
ಪಾಕಿಸ್ತಾನ ಕೇವಲ ನಾಲ್ಕು ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಈ ಬಾರಿಯ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ ಎಂಬುದು ಗಮನಿಸಬೇಕಾದ ಅಂಶ. ಈ ಬೆನ್ನಲ್ಲೇ ನಾವಿಂದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಪಾಕಿಸ್ತಾನ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಅಗ್ರ 3 ಸಕ್ರಿಯ ಆಟಗಾರರು ಯಾರೆಂಬುದರ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದೇವೆ.
ರೋಹಿತ್ ಶರ್ಮಾ: ಈ ಪಟ್ಟಿಯಲ್ಲಿ ಮೊದಲ ಹೆಸರು ಭಾರತ ತಂಡದ ನಾಯಕ ಹಾಗೂ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರದ್ದಾಗಿದೆ. 16 ಪಂದ್ಯಗಳ 16 ಇನ್ನಿಂಗ್ಸ್’ಗಳಲ್ಲಿ 51.42 ಸರಾಸರಿಯಲ್ಲಿ 2 ಶತಕ ಮತ್ತು 6 ಅರ್ಧ ಶತಕಗಳನ್ನು ಒಳಗೊಂಡಂತೆ 720 ರನ್ ಗಳಿಸಿದ್ದಾರೆ. ಅವರ ಗರಿಷ್ಠ ವೈಯಕ್ತಿಕ ಸ್ಕೋರ್ 140 ರನ್ ಆಗಿದೆ. ಪ್ರಸ್ತುತ ಪಾಕಿಸ್ತಾನ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ 2007 ರಲ್ಲಿ ಪಾಕಿಸ್ತಾನದ ವಿರುದ್ಧ ಮೊದಲ ODI ಆಡಿದ್ದರು.
ವಿರಾಟ್ ಕೊಹ್ಲಿ: ಈ ಪಟ್ಟಿಯಲ್ಲಿ ಎರಡನೇ ಹೆಸರು ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರದ್ದು. 13 ಪಂದ್ಯಗಳ 13 ಇನ್ನಿಂಗ್ಸ್’ಗಳಲ್ಲಿ 49 ಸರಾಸರಿಯಲ್ಲಿ 536 ರನ್ ಗಳಿಸಿದ್ದಾರೆ. ಬಲಗೈ ಬ್ಯಾಟ್ಸ್ಮನ್ ಕಿಂಗ್ ಕೊಹ್ಲಿ 2 ಶತಕ ಮತ್ತು 2 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ವೈಯಕ್ತಿಕ ಸ್ಕೋರ್ 183 ರನ್ ಆಗಿದ್ದು, 2009ರಲ್ಲಿ ಪಾಕಿಸ್ತಾನ ವಿರುದ್ಧ ಮೊದಲ ಏಕದಿನ ಪಂದ್ಯ ಆಡಿದ್ದರು.
ಹಾರ್ದಿಕ್ ಪಾಂಡ್ಯ: ಈ ಪಟ್ಟಿಯಲ್ಲಿ ಮೂರನೇ ಹೆಸರು ಟೀಮ್ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರದ್ದು. ನಾಲ್ಕು ಪಂದ್ಯಗಳ ಮೂರು ಇನ್ನಿಂಗ್ಸ್’ಗಳಲ್ಲಿ 61 ಸರಾಸರಿಯಲ್ಲಿ 122 ರನ್ ಗಳಿಸಿದ್ದಾರೆ. ಅವರ ಗರಿಷ್ಠ ವೈಯಕ್ತಿಕ ಸ್ಕೋರ್ 76 ರನ್ ಆಗಿದೆ. ಈ ಸಂದರ್ಭದಲ್ಲಿ 1 ಅರ್ಧಶತಕ ಗಳಿಸಿದ್ದಾರೆ. ಎಡಗೈ ಬ್ಯಾಟ್ಸ್ಮನ್ ಪಾಂಡ್ಯ 2017 ರಲ್ಲಿ ಪಾಕಿಸ್ತಾನದ ವಿರುದ್ಧ ಮೊದಲ ODI ಆಡಿದ್ದಾರೆ.