BJP Protest : ವಿಪಕ್ಷಗಳು ತಮ್ಮ ಅಸ್ತಿತ್ವವನ್ನು ತೋರಿಸಿಕೊಳ್ಳಲು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆಶಿ ಗುಡುಗಿದ್ರೆ, ನೀವೆ ಪಾದಯಾತ್ರೆ ಮಾಡಿ, ನೀವೆ ನೀರು ಬಿಟ್ಟಿದ್ದೀರಿ ಎಂದು ಕಿಡಿಕಾರಿದ್ದಾರೆ..
ಹಳೆ ಮೈಸೂರು ಭಾಗದ ಜೀವನಾಡಿ ಕೆ.ಆರ್.ಎಸ್ ಅಣೆಕಟ್ಟೆಯಿಂದ ಭಾರೀ ವಿರೋಧದ ನಡುವೆಯೂ ತಮಿಳುನಾಡಿಗೆ ಕಾವೇರಿ ನದಿ ಮೂಲಕ ನೀರು ಬಿಡಲಾಗುತ್ತಿದೆ. ಸರ್ಕಾರದ ಈ ಧೋರಣೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತರು, ಇವ್ವತ್ತೂ ಕೂಡ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ರು. ಬೆಂಗಳೂರು-ಮೈಸೂರು ಎಕ್ಸ್ಪೆಸ್ ವೇ ಬಂದ್ ಮಾಡೋದಕ್ಕೂ ಯತ್ನವೂ ನಡೆಯಿತು.
ಹೌದು, ರೈತಸಂಘದ ಮೂಲ ಸಂಘಟನೆ ಕರೆ ನೀಡಿದ್ದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ತಡೆ ಹೋರಾಟಕ್ಕೆ ನೂರಾರು ಸಂಖ್ಯೆಯಲ್ಲಿ ರೈತರು ಭಾಗಿಯಾಗಿದ್ರು. ಮಂಡ್ಯದ ಹೊರವಲಯದ ಇಂಡುವಾಳು ಗ್ರಾಮದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಎತ್ತಿನಗಾಡಿಯಲ್ಲಿ ಸರ್ವೀಸ್ ರಸ್ತೆಯಲ್ಲಿ ಮೆರವಣಿಗೆ ಹೊರಟ್ರು.
ಹೈವೇ ಎಕ್ಸಿಟ್ ಎಂಟ್ರಿ ಪಾಯಿಂಟ್ ಬಳಿಗೆ 100 ಮೀಟರ್ ಇರುವಂತೆಯೇ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆದ್ರು. ಹೆದ್ದಾರಿಯಲ್ಲಿ ಪ್ರತಿಭಟನೆಗೆ ಅವಕಾಶ ನೀಡೋದಿಲ್ಲ. ಇಲ್ಲಿಂದಲೇ ವಾಪಸ್ ಹೋಗುವಂತೆ ಸೂಚಿಸಿದ್ರು. ಪೊಲೀಸರ ಸೂಚನೆಗೆ ಒಪ್ಪದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆಗೆ ಮುಂದಾದ್ರು. ಅಲ್ಲದೆ ಬ್ಯಾರಿಕೇಡ್ ದಾಟುವ ಪ್ರಯತ್ನವನ್ನೂ ಮಾಡಿದ್ರು. ಈ ವೇಳೆ ಪೊಲೀಸರು ಪ್ರತಿಭಟನಾನಿರತ ರೈತರನ್ನು ಬಲವಂತವಾಗಿ ಬಂಧಿಸಿದ್ರು.
ಇದನ್ನೂ ಓದಿ-ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಫಿಕ್ಸ್
ಇನ್ನು ಪ್ರತಿಭಟನೆ ತಡೆಯಲು ಪೊಲೀಸರು ಬೆಳಿಗ್ಗೆಯೇ ಅಲರ್ಟ್ ಆಗಿದ್ರು. 6 ಗಂಟೆಗೇ 5 ಡಿಎಆರ್ ತುಕಡಿ ಸೇರಿದಂತೆ 250ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಹೋರಾಟಗಾರರನ್ನ ಬಂಧನಕ್ಕೂ ಮೊದಲೇ ಪ್ಲಾನ್ ಕೂಡ ಮಾಡಿಕೊಂಡಿದ್ದ ಖಾಕಿ, 4 ಕೆ.ಎಸ್.ಆರ್.ಟಿ.ಸಿ. ಬಸ್ ಗಳನ್ನೂ ಕರೆಸಿಕೊಂಡಿದ್ರು. ರೈತರು ಸರ್ವೀಸ್ ರಸ್ತೆಯಲ್ಲಿ ಮೆರವಣಿಗೆ ಬರುತ್ತಿದ್ದಂತೆ ಅವರನ್ನು ತಡೆದ್ರು. ಈ ವೇಳೆ ಹೋರಾಟಗಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆಯಿತು.
ಕಾವೇರಿ ನೀರು ಬಿಡುಗಡೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಪಾಪ ರಾಜಕೀಯಪ್ರೇರಿತವಾಗಿ ಪ್ರತಿಭಟನೆ ಮಾಡುವವರನ್ನು ನಿಲ್ಲಿಸಲು ಆಗುತ್ತಾ. ಅವರ ಅಸ್ತಿತ್ವವನ್ನು ತೋರಿಸಕೊಳ್ಳಲು ಪ್ರತಿಭಟನೆ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ನೀರು ಬಿಡಬೇಕು ಅದಕ್ಕಾಗಿ ನೀರು ಬಿಟ್ಟಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ..
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಸಂಕಷ್ಟ ಕಾಲದ ಸೂತ್ರವನ್ನು ಕಾಂಗ್ರೆಸ್ ಸರ್ಕಾರ ಮರೆತಿದೆ. ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ . ನೀವೆ ಪಾದಯಾತ್ರೆ ಮಾಡಿ, ನೀವೆ ನೀರು ಬಿಟ್ಟಿದ್ದೀರಿ ಎಂದು ಬಿಜೆಪಿ ಮುಖಂಡ ಸಿಟಿ ರವಿ ಕಿಡಿಕಾರಿದ್ದಾರೆ..
ಒಟ್ಟಾರೆ ರೈತರ ವಿರೋಧಕ್ಕೂ ಕ್ಯಾರೇ ಎನ್ನದ ಸರ್ಕಾರ ಕೂಡ ತಮಿಳುನಾಡಿಗೆ ನೀರು ಹರಿಸುತ್ತಿದ್ದು, ಕೆ.ಆರ್.ಎಸ್ ಡ್ಯಾಂ ಮಟ್ಟ 104 ಅಡಿಗೆ ಕುಸಿದಿದೆ. ಇದ್ರಿಂದ ಅನ್ನದಾತ ಆತಂಕ ಒಂದು ಕಡೆಯಾದ್ರೆ ಮತ್ತೊಂದು ಕಡೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತತ್ವಾರದ ಭೀತಿ ಉಂಟಾಗಿದೆ.
ಇದನ್ನೂ ಓದಿ-ತಾರಕಕ್ಕೇರಿದ 'ಕಾವೇರಿ' ಕಿಚ್ಚು.. ನಾಳೆ ಸರ್ವಪಕ್ಷ ಸಭೆ..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ