ಚಿಂಚೋಳಿ ಉಪ ಚುನಾವಣೆ: ಅವಿನಾಶ್ ಜಾಧವ್‌ಗೆ ಭಾರೀ ಗೆಲುವು

ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ 7,638 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Last Updated : May 23, 2019, 02:48 PM IST
ಚಿಂಚೋಳಿ ಉಪ ಚುನಾವಣೆ: ಅವಿನಾಶ್ ಜಾಧವ್‌ಗೆ ಭಾರೀ ಗೆಲುವು title=

ಚಿಂಚೋಳಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ. ಉಮೇಶ್ ಜಾಧವ್ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದ ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ 7,638 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯಿಂದಾಗಿ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿತ್ತು. ಬಿಜೆಪಿಯಿಂದ ಡಾ.ಅವಿನಾಶ್ ಜಾಧವ್, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಸುಭಾಷ್ ರಾಥೋಡ್ ಅವರು ಕಣದಲ್ಲಿದ್ದರು. ಮೇ 19ರಂದು ಈ ಕ್ಷೇತ್ರದ ಚುನಾವಣೆ ನಡೆದಿತ್ತು.

Trending News