ವರ ಮಹಾಲಕ್ಷ್ಮೀ ಹಬ್ಬದ ದಿನವೇ ಕುಸಿಯಿತು ಚಿನ್ನದ ಬೆಲೆ !

Gold Price Today, 25 August 2023 : ಚಿನ್ನ-ಬೆಳ್ಳಿ ದರಗಳು ಕುಸಿಯುತ್ತಲೇ ಇವೆ. ಆಗಸ್ಟ್ ತಿಂಗಳಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟು  ನೋಡೋಣ. 

Written by - Ranjitha R K | Last Updated : Aug 25, 2023, 12:07 PM IST
  • ಚಿನ್ನ-ಬೆಳ್ಳಿ ದರಗಳು ಕುಸಿಯುತ್ತಲೇ ಇವೆ
  • ಆಗಸ್ಟ್ ತಿಂಗಳಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ
  • 10 ಗ್ರಾಂ ಚಿನ್ನದ ಬೆಲೆ ಎಷ್ಟು ನೋಡೋಣ.
ವರ ಮಹಾಲಕ್ಷ್ಮೀ ಹಬ್ಬದ ದಿನವೇ ಕುಸಿಯಿತು ಚಿನ್ನದ ಬೆಲೆ !  title=

Gold Price Today, 25 August 2023 :  ಚಿನ್ನ-ಬೆಳ್ಳಿ ದರಗಳು ಕುಸಿಯುತ್ತಲೇ ಇವೆ. ಆಗಸ್ಟ್ ತಿಂಗಳಿನಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಈ ತಿಂಗಳು ಚಿನ್ನದ ಬೆಲೆ 10 ಗ್ರಾಂಗೆ 60,000 ರೂ.ನಿಂದ 58,500 ರೂ.ಗೆ ಕುಸಿದಿದೆ. ಶುಕ್ರವಾರವೂ, MCX ನಲ್ಲಿ ಚಿನ್ನದ ಬೆಲೆ 58,700 ರೂ. ಆಸುಪಾಸಿನಲ್ಲಿ ವಹಿವಾಟು ನಡೆಸುತ್ತಿದೆ. ಇದಲ್ಲದೆ, ಬೆಳ್ಳಿಯ ಬೆಲೆಯಲ್ಲಿ ದೊಡ್ಡ ಮಟ್ಟದ ಕುಸಿತ ಕಂಡು ಬಂದಿದೆ. ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟು ನೋಡೋಣ. 

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಗ್ಗವಾಗುತ್ತಿದೆ  ಚಿನ್ನ : 
ಅಂತಾರಾಷ್ಟ್ರೀಯ ಮಾರುಕಟ್ಟೆಯ ಬಗ್ಗೆ ಮಾತನಾಡುವುದಾದರೆ, ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಳಿಕೆಯಾಗುತ್ತಲೇ ಇದೆ. ಕಾಮ್ಯಾಕ್ಸ್‌ನಲ್ಲಿ ಚಿನ್ನದ ಬೆಲೆ ಔನ್ಸ್‌ಗೆ 1940 ಡಾಲರ್ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ಇದಲ್ಲದೆ, ಬೆಳ್ಳಿಯ ಬೆಲೆ ಪ್ರತಿ ಔನ್ಸ್‌ಗೆ 24 ಡಾಲರ್ ನಷ್ಟಿದೆ. 

ಇದನ್ನೂ ಓದಿ : ರೈತರಿಗೆ ಸಿಹಿ ಸುದ್ದಿ ! ಕೆಸಿಸಿ ಕುರಿತಂತೆ ಹೊರ ಬಿದ್ದಿದೆ ಬಿಗ್ ಅಪ್ಡೇಟ್

ಎಂಸಿಎಕ್ಸ್‌ನಲ್ಲಿ ಚಿನ್ನ-ಬೆಳ್ಳಿ ಬೆಲೆ : 
ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ಶೇಕಡಾ 0.15ರಷ್ಟು ಇಳಿಕೆಯೊಂದಿಗೆ 58724  ರ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ಇದಲ್ಲದೇ ಇಂದು ಎಂಸಿಎಕ್ಸ್‌ನಲ್ಲಿ ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇಂದು ಬೆಳ್ಳಿ ದರದಲ್ಲಿ ಶೇ.0.26ರಷ್ಟು ಇಳಿಕೆಯಾಗಿದ್ದು, ಪ್ರತಿ ಕೆಜಿಗೆ 73379 ರೂ. ಯಷ್ಟಾಗಿದೆ. 

ದೀಪಾವಳಿಯವರೆಗೆ ಏರಿಕೆಯಾಗಬಹುದು ಚಿನ್ನದ ದರ : 
ಮಾಧ್ಯಮ ವರದಿಗಳ ಪ್ರಕಾರ, ಚಿನ್ನದ ಬೆಲೆ ನಿರಂತರವಾಗಿ ಕುಸಿಯುತ್ತಿದೆ. ದೀಪಾವಳಿ ವೇಳೆಗೆ ಚಿನ್ನದ ಬೆಲೆ ಮತ್ತೆ 10 ಗ್ರಾಂಗೆ 60,000 ರಿಂದ 62,000 ರೂ. ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ಈ ಸಮಯವು ಉತ್ತಮ ಸಮಯವಾಗಿರಲಿದೆ.  

ಇದನ್ನೂ ಓದಿ : ಅಡಿಕೆಗೆ ಹಳದಿ ಎಲೆ ರೋಗ: ಮಲೆನಾಡ ಜನರಲ್ಲಿ ಆತಂಕ

ಚಿನ್ನದ ಶುದ್ದತೆಯನ್ನು ಪರಿಶೀಲಿಸುವುದು ಹೇಗೆ ? :  
ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ನೀವು ಸರ್ಕಾರಿ ಅಪ್ಲಿಕೇಶನ್ ಅನ್ನು ಬಳಸಬಹುದು. 'ಬಿಐಎಸ್ ಕೇರ್ ಆ್ಯಪ್' ಮೂಲಕ ಚಿನ್ನದ ಶುದ್ಧತೆಯನ್ನು ಪರಿಶೀಲಿಸಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News