Kangana ranaut on isro scientists : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ವಿಜ್ಞಾನಿಗಳಿಗೆ ಕಂಗನಾ ರಣಾವತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಂದ್ರಯಾನ-3 ಮಿಷನ್‌ನಲ್ಲಿ ಭಾಗವಹಿಸಿದ ಕೆಲವು ಮಹಿಳಾ ವಿಜ್ಞಾನಿಗಳ ಹಣೆಯಲ್ಲಿ ಸಿಂಧೂರ ಮತ್ತು ಸೀರೆಯನ್ನು ಧರಿಸಿದ್ದ ಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿ ʼಇದು ಭಾರತೀಯ ನಿಜವಾದ ಸಾರʼ ಅಂತ ನಟಿ ಹೊಗಳಿದ್ದಾರೆ.
ಹೌದು.. ಇಸ್ರೋ ಮಹಿಳಾ ವಿಜ್ಞಾನಿಗಳು ಹಣೆಯ ಮೇಲೆ ಬಿಂದಿ, ಸೀರೆಯನ್ನು ಧರಿಸಿದ್ದ ಫೋಟೋ ಹಂಚಿಕೊಂಡಿರುವ ನಟಿ ಕಂಗನಾ, ʼಭಾರತದ ಪ್ರಮುಖ ವಿಜ್ಞಾನಿಗಳು, ಇವರೆಲ್ಲರೂ ಬಿಂದಿ, ಸಿಂಧೂರ ಮತ್ತು ಮಂಗಳಸೂತ್ರ ಧರಿಸಿದ್ದಾರೆ. ಸರಳ ಜೀವನ ಮತ್ತು ಉನ್ನತ ಚಿಂತನೆಯ ಸಾರಾಂಶ... ಭಾರತೀಯತೆಯ ನಿಜವಾದ ಸಾರʼ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ʼಜೈ ಭೀಮ್ʼಗೆ ರಾಷ್ಟ್ರ ಪ್ರಶಸ್ತಿ ಸಿಗದಿದ್ದಕ್ಕೆ ಪರೋಕ್ಷವಾಗಿ ಬಿಜೆಪಿ ವಿರುದ್ಧ ಗುಡುಗಿದ ಪ್ರಕಾಶ್ ರಾಜ್..!
ಇನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ರ ಸಾಫ್ಟ್ ಲ್ಯಾಂಡಿಂಗ್ ಅನ್ನು ಇಸ್ರೋ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಗಸ್ಟ್ 23 ರಂದು, ಮಿಷನ್ ಚಂದ್ರಯಾನ -3 ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಿತು. ಯುಎಸ್, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟದ ನಂತರ ಭಾರತವು ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ರಾಷ್ಟ್ರವಾಗಿದೆ.
ಚಂದ್ರಯಾನ-3 ಮಿಷನ್‌ನ ಲ್ಯಾಂಡಿಂಗ್ ಸೈಟ್‌ನ ಹೆಸರು "ಶಿವಶಕ್ತಿ ಪಾಯಿಂಟ್" ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಹಲವಾರು ಮಹಿಳಾ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳು ಈ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರಿಂದ, ಪ್ರಧಾನಿ ನರೇಂದ್ರ ಮೋದಿ ಅವರು ಚಂದ್ರಯಾನ-3 "ಮಹಿಳಾ ಶಕ್ತಿಯ ಜೀವಂತ ಉದಾಹರಣೆ" ಎಂದು ಹಾಡಿ ಹೊಗಳಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.