/kannada/photo-gallery/smartphones-selling-for-just-8k-in-amazon-great-indian-festival-bumper-sale-249412 ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು! ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು! 249412

Dharwad: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿ ಸಾವು..!

ಸೋಮವಾರ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದ ಜಯಪ್ರಕಾಶ ಕಲಕೋಟಿ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲುಕು ಖಜಾನೆ ಕಚೇರಿಯಲ್ಲಿ ಜಯಪ್ರಕಾಶ್ ಅವರು ಕೆಲಸ ಮಾಡುತ್ತಿದ್ದರು.

Written by - Puttaraj K Alur | Last Updated : Sep 5, 2023, 08:41 PM IST
  • ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿ ಸಾವು
  • ಧಾರವಾಡಕ್ಕೆ ಬಡ್ತಿ ಪಡೆದು ಅಧಿಕಾರ ಸ್ವೀಕಾರ ಮಾಡಿದ್ದ ಅಧಿಕಾರಿ
  • ಆದರೆ ಬಡ್ತಿಯಿಂದಿ ಸಿಕ್ಕ ಅಧಿಕಾರದಲ್ಲಿ ಒಂದು ದಿನವೂ ಕಳೆಯದ ಅಧಿಕಾರಿ
Dharwad: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿ ಸಾವು..! title=
ಹೃದಯಾಘಾತದಿಂದ ಅಧಿಕಾರಿ ಸಾವು!

ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ಸೋಮವಾರ ನಡೆದಿದೆ.

ಬಡ್ತಿ ಪಡೆದು ಅಧಿಕಾರ ಸ್ವೀಕಾರ ಮಾಡಿದ್ದ ಜಯಪ್ರಕಾಶ ಕಲಕೋಟಿ ಮೃತ ಅಧಿಕಾರಿ. ಇವರು ಧಾರವಾಡದ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಹುದ್ದೆ ಅಲಂಕರಿಸಿದ್ದರು. ಆದರೆ ಬಡ್ತಿಯಿಂದ ಸಿಕ್ಕ ಅಧಿಕಾರದಲ್ಲಿ ಒಂದು ದಿನವೂ ಕಳೆಯದೆ ಇಹಲೋಕ ತ್ಯೆಜಿಸಿದ್ದಾರೆ.

ಇದನ್ನೂ ಓದಿ: ‘ಇಂಡಿಯಾ’ ಬದಲು ‘ಭಾರತ್’ ಎಂದು ದೇಶದ ಹೆಸರು ಬದಲಾವಣೆ?

ಸೋಮವಾರ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದ ಜಯಪ್ರಕಾಶ ಕಲಕೋಟಿ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲುಕು ಖಜಾನೆ ಕಚೇರಿಯಲ್ಲಿ ಜಯಪ್ರಕಾಶ್ ಅವರು ಕೆಲಸ ಮಾಡುತ್ತಿದ್ದರು.

15 ದಿನಗಳ ಹಿಂದಷ್ಟೇ ಜಯಪ್ರಕಾಶರಿಗೆ ಬಡ್ತಿ ಲಭಿಸಿತ್ತು. ಧಾರವಾಡ ಜಿಲ್ಲಾ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದ ಅವರಿಗೆ ಸಂಜೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.  

ಇದನ್ನೂ ಓದಿ: ಮೈಸೂರು ಅರಮನೆಗೆ ಆಗಮಿಸಿದ ದಸರಾ ಗಜಪಡೆ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.