ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ : ಸಿಎಂ ಸಿದ್ದರಾಮಯ್ಯ

CM Siddaramaiah : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ  ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Written by - Prashobh Devanahalli | Last Updated : Sep 9, 2023, 03:56 PM IST
  • ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಕ್ರಮ
  • ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ನಿರ್ಧಾರ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ : ಸಿಎಂ ಸಿದ್ದರಾಮಯ್ಯ title=

ಹುಬ್ಬಳ್ಳಿ : ಇಲ್ಲಿನ ವಿಮಾನ ನಿಲ್ದಾಣದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಜೆಡಿಎಸ್, ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು.  ಜನತಾ ದಳ  ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು  ತೋರಿಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: "ಬಿಜೆಪಿ ಸರ್ಕಾರ ಮತ್ತು ಮೋದಿಯವರು ಅಂಬಾನಿ-ಅದಾನಿಗಳ ಜೇಬಿಗೆ ಹಣ ಹಾಕುತ್ತಿದ್ದಾರೆ" 

ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ  ರಾಜ್ಯಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು ಎಂದು ತಿಳಿಸಿದರು.

ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದರು.

ಇದನ್ನೂ ಓದಿ: ರಷ್ಯಾ - ಉಕ್ರೇನ್ ವಿಚಾರದಲ್ಲಿ ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಬೆಂಬಲ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳಾಗಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ತಿಳಿಸಿದರು.

ಚುನಾವಣೇ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಪ್ರಕರಣಗಳು, ಹಿಂದುತ್ವ, ಸನಾತನ ಧರ್ಮದ ಕುರಿತು ಚರ್ಚೆ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಜಾಬ್ ಹಲಾಲ್ ಪ್ರಕರಣಗಳು  ನ್ಯಾಯಾಲಯದಲ್ಲಿದೆ., ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

Trending News