ಇಫ್ತಾರ್ ಕೂಟಕ್ಕೆ ಅಡ್ಡಿ: ಪಾಕಿಸ್ತಾನ ಹೆಂಡ ಕುಡಿದ ಕೋತಿ ತರಹ ಆಡ್ತಿದೆ ಎಂದ ಶಿವಸೇನೆ

ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ, ಪಾಕಿಸ್ತಾನದ ಸೇನಾ ಸಿಬ್ಬಂದಿಯ ಕೃತ್ಯವನ್ನು ತೀವ್ರವಾಗಿ ಖಂಡಿಸಿ, ಅಲ್ಲಿನ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. 

Last Updated : Jun 4, 2019, 05:20 PM IST
ಇಫ್ತಾರ್ ಕೂಟಕ್ಕೆ ಅಡ್ಡಿ: ಪಾಕಿಸ್ತಾನ ಹೆಂಡ ಕುಡಿದ ಕೋತಿ ತರಹ ಆಡ್ತಿದೆ ಎಂದ ಶಿವಸೇನೆ title=

ಮುಂಬೈ: ರಂಜಾನ್ ನಿಮಿತ್ತ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಇಫ್ತಾರ್​ ಕೂಟಕ್ಕೆ ತಡೆಯುಂಟು ಮಾಡಿದ್ದ ಪಾಕ್​ ಸೇನಾ ಸಿಬ್ಬಂದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಶಿವಸೇನೆ, ಪಾಕಿಸ್ತಾನ ಹೆಂಡ ಕುಡಿದ ಕೋತಿಯಂತೆ ಆಡುತ್ತಿದೆ ಎಂದಿದೆ. 

ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ, ಪಾಕಿಸ್ತಾನದ ಸೇನಾ ಸಿಬ್ಬಂದಿಯ ಕೃತ್ಯವನ್ನು ತೀವ್ರವಾಗಿ ಖಂಡಿಸಿ, ಅಲ್ಲಿನ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. ಪಾಕ್​ ಸೇನೆಯನ್ನು ಮದ್ಯಪಾನ ಮಾಡಿದ ಕೋತಿಗಳಿಗೆ ಹೋಲಿಸಿದ್ದು, ಪಾಕ್​ ಕೋತಿಗಳು ಮಾಡಿದ ಈ ಅವಮಾನವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ, ಉಗ್ರ ಮಸೂದ್​ ವಿಚಾರದಲ್ಲಿ ಪಾಕಿಸ್ತಾನ ದ್ವಂದ್ವ ನೀತಿ ಪಾಲಿಸುತ್ತಿದೆ. ನಮ್ಮ ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದಕ್ಕೆ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಅಭಿನಂದನೆ ತಿಳಿಸಿ, ಶಾಂತಿ ಸ್ಥಾಪನೆ ಮತ್ತು ಅಭಿವೃದ್ಧಿಗಾಗಿ ಜತೆಯಾಗಿ ಕೆಲಸ ಮಾಡೋಣ ಎಂದಿದ್ದಾರೆ. ಆದರೆ, ಸೇನಾ ಸಿಬ್ಬಂದಿ ಇಂತಹ ಹೀನ ವರ್ತನೆ ತೋರಿಸಿದ್ದಾರೆ. ಇದ್ಯಾವ ರೀತಿಯ ಶಾಂತಿ ಪಾಲನೆ ಎಂದು ಉದ್ಧವ್ ಠಾಕ್ರೆ ಪ್ರಶ್ನಿಸಿದ್ದಾರೆ.

Trending News