ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಸತ್ಯನಾರಾಯಣ(74) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇಲವಾಲ ಸಮೀಪದ ನಂಜಮ್ಮ ಜವರೇಗೌಡ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ.
ಮೈಸೂರು ತಾಲ್ಲೂಕಿನ ಗುಂಗ್ರಾಲ್ ಛತ್ರ ಗ್ರಾಮದವರಾದ ಸತ್ಯನಾರಾಯಣ ಅವರು 2008ರ ವಿಧಾನ ಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಇವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಗುಂಗ್ರಾಲ್ ಗ್ರಾಮದಲ್ಲಿ ನೆರವೇರಲಿದೆ.
ಎಂ.ಸತ್ಯನಾರಾಯಣರಾವ್ ಅವರ ನಿಧನಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ಜನಪರ ಕಾಳಜಿಯ ಸಜ್ಜನ ರಾಜಕಾರಣಿಯಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಸತ್ಯನಾರಾಯಣ್ ಅವರ ನಿಧನವು ನೋವಿನ ವಿಚಾರ. ಇವರ ಅಗಲಿಕೆಯಿಂದಾಗಿ ಸಮಾಜ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಹಾಗೂ ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ದಯಪಾಲಿಸಲಿ" ಎಂದು ಟ್ವೀಟ್ ಮಾಡಿದ್ದಾರೆ.
ಜನಪರ ಕಾಳಜಿಯ ಸಜ್ಜನ ರಾಜಕಾರಣಿಯಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಸತ್ಯನಾರಾಯಣ್ ಅವರ ನಿಧನವು ನೋವಿನ ವಿಚಾರ.
ಇವರ ಅಗಲಿಕೆಯಿಂದಾಗಿ ಸಮಾಜ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಹಾಗೂ ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ದಯಪಾಲಿಸಲಿ.
- @dineshgrao pic.twitter.com/65hBCWUhaY— Karnataka Congress (@INCKarnataka) June 7, 2019