"ಗರಿಷ್ಠ ಹಂತದವರೆಗೆ ಶಿಕ್ಷಣ ಪಡೆದು, ದೇಶದ ಆಸ್ತಿಯಾಗಬೇಕೆಂಬ ನಮ್ಮ ಉದ್ದೇಶ"

ಗರಿಷ್ಠ ಹಂತದವರೆಗೆ ಶಿಕ್ಷಣ ಪಡೆದು, ದೇಶದ ಆಸ್ತಿಯಾಗಬೇಕೆಂಬ ನಮ್ಮ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Manjunath N | Last Updated : Sep 13, 2023, 01:53 PM IST
  • ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ನಮ್ಮ ಸರ್ಕಾರವು ವರ್ಷಕ್ಕೆ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸುವ ವಿನೂತನ ಪದ್ಧತಿ ಜಾರಿ ಮಾಡಿದೆ.
  • ಒಟ್ಟು 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶಿಕ್ಷಣ ಮುಂದುವರೆಸುವ ಅರ್ಹತೆ ಗಳಿಸಿದ್ದಾರೆ
"ಗರಿಷ್ಠ ಹಂತದವರೆಗೆ ಶಿಕ್ಷಣ ಪಡೆದು, ದೇಶದ ಆಸ್ತಿಯಾಗಬೇಕೆಂಬ ನಮ್ಮ ಉದ್ದೇಶ" title=

ಬೆಂಗಳೂರು: ಗರಿಷ್ಠ ಹಂತದವರೆಗೆ ಶಿಕ್ಷಣ ಪಡೆದು, ದೇಶದ ಆಸ್ತಿಯಾಗಬೇಕೆಂಬ ನಮ್ಮ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ವರೆಗೆ ವರ್ಷಕ್ಕೊಮ್ಮೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆ ನಡೆಸಲಾಗುತ್ತಿತ್ತು. ಇದು ವಿದ್ಯಾರ್ಥಿಗಳ ಮೇಲೆ ಪರೀಕ್ಷಾ ಒತ್ತಡವನ್ನು ಹೆಚ್ಚಿಸಿ, ಅವರ ಜ್ಞಾನಾರ್ಜನೆ ಮತ್ತು ಶೈಕ್ಷಣಿಕ ಪ್ರಗತಿಯನ್ನು ಕುಂಠಿತಗೊಳಿಸುತ್ತಿತ್ತು ಜೊತೆಗೆ ವಾರ್ಷಿಕ ಮತ್ತು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಮತ್ತೊಂದು ವರ್ಷ ಕಾಯಲಾಗದೆ ಶಿಕ್ಷಣ ಮೊಟಕುಗೊಳಿಸುತ್ತಿದ್ದ ಉದಾಹರಣೆಗಳು ಸಾಕಷ್ಟಿದ್ದವು.

ಇದನ್ನೂ ಓದಿ : 60 ಲಕ್ಷ‌ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ : ಸಚಿವೆ ಲಕ್ಷ್ಮೀ ಹಬ್ಬಾಳ್ಕರ್ ಮಾಹಿತಿ

ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ನಮ್ಮ ಸರ್ಕಾರವು ವರ್ಷಕ್ಕೆ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸುವ ವಿನೂತನ ಪದ್ಧತಿ ಜಾರಿ ಮಾಡಿದೆ. ನಮ್ಮ ಈ ವಿದ್ಯಾರ್ಥಿ ಸ್ನೇಹಿ ನಿಲುವಿನಿಂದಾಗಿ ಕಳೆದ ಆಗಸ್ಟ್ - ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2 ರಲ್ಲಿ ಒಟ್ಟು 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶಿಕ್ಷಣ ಮುಂದುವರೆಸುವ ಅರ್ಹತೆ ಗಳಿಸಿದ್ದಾರೆ ಎಂದು ಅವರು ತಿಳಿಸಿದರು.

ನಾಡಿನ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಿಮುಖನಾಗದೆ ಗರಿಷ್ಠ ಹಂತದ ವರೆಗೆ ಶಿಕ್ಷಣ ಪಡೆದು, ದೇಶದ ಆಸ್ತಿಯಾಗಬೇಕೆಂಬ ನಮ್ಮ ಉದ್ದೇಶಕ್ಕೆ ದೊರೆತಿರುವ ಈ ಆರಂಭಿಕ ಯಶಸ್ಸು ಮುಂದಿನ ದಿನಗಳಲ್ಲಿ ಮತ್ತಷ್ಟು ಶೈಕ್ಷಣಿಕ ಸುಧಾರಣೆಗಳಿಗೆ ನಾಂದಿಯಾಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News