ಕಲ್ಯಾಣ ಕರ್ನಾಟಕ ಉತ್ಸವ 2023: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ..!

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ವೇಳೆ ಸಿಎಂ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಏಳೂ ಜಿಲ್ಲೆಗಳಲ್ಲಿ KKRDB ವತಿಯಿಂದ 145.51 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 60.05 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಉದ್ಘಾಟಿಸಿದ್ದಾರೆ.

Written by - Puttaraj K Alur | Last Updated : Sep 17, 2023, 04:43 PM IST
  • ಕಲ್ಯಾಣ ಕರ್ನಾಟಕ ಉತ್ಸವದ ಪ್ರಯುಕ್ತ ಸಿಎಂ ಸಿದ್ದರಾಮಯ್ಯರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
  • ಕಲ್ಯಾಣ ಕರ್ನಾಟಕ 7 ಜಿಲ್ಲೆಗಳಲ್ಲಿ KKRDB ವತಿಯಿಂದ 145.51 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು
  • 60.05 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕ ಉತ್ಸವ 2023: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ..! title=
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸಿದರು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ವೇಳೆ ಸಿಎಂ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಏಳೂ ಜಿಲ್ಲೆಗಳಲ್ಲಿ KKRDB ವತಿಯಿಂದ 145.51 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 60.05 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಉದ್ಘಾಟಿಸಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ನೂತನ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆ ಮಾಡಲಾದ ಮತ್ತು ಬಿಡುಗಡೆ ಮಾಡಿರುವ ಅನುದಾನದ ಕುರಿತ ಮಾಹಿತಿ ಇಲ್ಲಿದೆ ನೋಡಿ.

ಲೋಕೋಪಯೋಗಿ ಇಲಾಖೆ: ಒಟ್ಟು 139.36 ಕೋಟಿ ರೂ. ವೆಚ್ಚದ 33 ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಒಟ್ಟು 50.81 ಕೋಟಿ ರೂ. ವೆಚ್ಚದ 38 ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ: ಒಟ್ಟು 6.15 ಕೋಟಿ ರೂ. ವೆಚ್ಚದ 41 ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಒಟ್ಟು 74 ಲಕ್ಷ ರೂ. ವೆಚ್ಚದ 2 ಕಾಮಗಾರಿಗಳ ಉದ್ಘಾಟನೆ.

KRIDL: ಒಟ್ಟು 5.03 ಕೋಟಿ ರೂ. ವೆಚ್ಚದ 12 ಕಾಮಗಾರಿಗಳ ಉದ್ಘಾಟನೆ.

ಇದನ್ನೂ ಓದಿ: ವಾರ್ತಾ ಇಲಾಖೆಯ “ಅಮೃತ ಮಹೋತ್ಸವ ಸ್ಮರಣ ಸಂಚಿಕೆ: ಕಲ್ಯಾಣ ಕರ್ನಾಟಕ” ಕಿರು ಹೊತ್ತಿಗೆ ಬಿಡುಗಡೆ

ನಿರ್ಮಿತಿ ಕೇಂದ್ರ: ಒಟ್ಟು 4.47 ಕೋಟಿ ರೂ. ವೆಚ್ಚದ 26 ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಿದ್ದಾರೆ.

ಕಲಬುರಗಿ ಜಿಲ್ಲೆ: 182.93 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 50.77 ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ

KPTCL ಕಲಬುರಗಿ: ಗಣಗಾಪೂರ ಹೊಸದಾಗಿ ಪ್ರಸ್ತಾಪಿಸಲಾದ 2 x 100 ಒಗಿಂ 220/110 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ (ನಿಂಬರಗಾ) 17,011.50 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಅನುದಾನ ನೀಡಲಾಗಿದೆ. ಕಲಬುರಗಿ ತಾಲೂಕಿನ ಉದನೂರ ಹೊಸದಾಗಿ ಪ್ರಸ್ತಾಪಿಸಲಾದ 2 x 10 ಒಗಿಂ 110/11 ಕೆ.ವಿ ವಿದ್ಯುತ್ ಉಪ ಕೇಂದ್ರ ಉದನೂರ 1,282.12 ಲಕ್ಷ ರೂ. ನೀಡಲಾಗಿದ್ದು, ಇದಕ್ಕೆ ಒಟ್ಟು 18,293.62 ಲಕ್ಷ ರೂ. ತಗುಲಿದೆ.

ಯಡ್ರಾಮಿ ತಾಲೂಕು: ಜೆಸ್ಕಾಂ ವತಿಯಿಂದ ಕೈಗೊಂಡ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಕಛೇರಿ 57.41 ಲಕ್ಷ ರೂ ವೆಚ್ಚದ ಕಾಮಗಾರಿಯ ಉದ್ಘಾಟನೆ.

ಆಳಂದ ತಾಲೂಕು ರುದ್ರವಾಡಿ: ಹೊಸದಾಗಿ ಪ್ರಸ್ತಾಪಿಸಲಾದ 1*10 MVA, 110/11 KV ವಿದ್ಯುತ್ ಉಪ ಕೇಂದ್ರ. (ಭಂಗರಗಾ) 878.89 ಲಕ್ಷ ರೂ. ವೆಚ್ಚದ ಕಾಮಗಾರಿಯ ಉದ್ಘಾಟನೆ

ಚಿತ್ತಾಪೂರ ತಾಲೂಕು ರಾವೂರ ಗ್ರಾಮ: ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಿಬ್ಬಂದಿಗಳ ವಸತಿ ಗೃಹ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳ ಕಾಮಗಾರಿ (2ನೇ ಹಂತ) 850.00 ಲಕ್ಷ ರೂ. ವೆಚ್ಚದ ಕಾಮಗಾರಿಯ ಉದ್ಘಾಟನೆ.

ಇದನ್ನೂ ಓದಿ: "ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದ ಹೊರತು ರಾಜ್ಯದ ಅಭಿವೃಧ್ಧಿ ಅಸಾಧ್ಯ"

ಕಲಬುರಗಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಜಿಲ್ಲಾ ಕೈಗಾರಿಕಾ ಕೇಂದ್ರ ಕಾರ್ಯಲಯದ ಕಟ್ಟಡ, 407.00 ಲಕ್ಷ ರೂ. ವೆಚ್ಚದ ಕಾಮಗಾರಿಯ ಉದ್ಘಾಟನೆ. ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ  50 ಲಕ್ಷ ರೂ. ವೆಚ್ಚವಾಗಿದೆ. ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ ನಿರ್ಮಾಣಕ್ಕೆ 1.8 ಕೋಟಿ ರೂ.ವೆಚ್ಚವಾಗಿದೆ.

ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದ ಗಾಯರಾಣ ಸರ್ವೆ ನಂ.23 ರಲ್ಲಿ ಸರ್ಕಾರಿ ಗೋಶಾಲೆ ಕಟ್ಟಡ ಮತ್ತು ಕಾಂಪೌಂಡ್ ನಿರ್ಮಾಣ (MS ಗ್ರೀಲ್) 84.32 ಲಕ್ಷ ರೂ. ವೆಚ್ಚದ ಕಾಮಗಾರಿಯ ಉದ್ಘಾಟನೆ. KKRTC ವತಿಯಿಂದ ಹೊಸ ಸ್ಲೀಪರ್ ಬಸ್‍ಗಳ ಖರೀದಿ ಯೋಜನೆ 1,800.35 ಲಕ್ಷ ರೂ. ವೆಚ್ಚದ ಯೋಜನೆ ಉದ್ಘಾಟನೆ ಮಾಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News