Job Alert: ಅರಣ್ಯ ಇಲಾಖೆಯ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Government Job: ಈ ಹುದ್ದೆಗಳಿಗೆ ದೈಹಿಕ ಸಾಮಾರ್ಥ್ಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

Written by - Puttaraj K Alur | Last Updated : Sep 21, 2023, 11:13 PM IST
  • ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿಯಿರುವ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಓದಿದ ಬಳಿಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು
Job Alert: ಅರಣ್ಯ ಇಲಾಖೆಯ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ title=
ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿದ ಬಳಿಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2021-22ನೇ ಸಾಲಿನಲ್ಲಿ ಹೊಸದಾಗಿ ಸೃಜಿಸಲಾದ ಒಟ್ಟು 413 ಅರಣ್ಯ ವೀಕ್ಷಕ ಹುದ್ದೆಗಳ ಪೈಕಿ 310 ಹುದ್ದೆಗಳನ್ನು ಪ್ರಸಕ್ತ ಸಾಲಿನಲ್ಲಿ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ವೃತ್ತವಾರು ಹುದ್ದೆಗಳ ಮಾಹಿತಿ ತಿಳಿದು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು.

ಇದನ್ನೂ ಓದಿ: ಈ ಬಾರಿ ಸರ್ಕಾರಿ ಉದ್ಯೋಗಿಗಳಿಗೆ ಡಬಲ್ ಧಮಾಕ ! ವೇತನದಲ್ಲಿ ಇಷ್ಟು ಹೆಚ್ಚಳ ಫಿಕ್ಸ್

ಅರಣ್ಯ ವೃತ್ತವಾರು ಹುದ್ದೆಗಳ ವಿವರ

ಬೆಂಗಳೂರು ವೃತ್ತ : 33

ಬೆಳಗಾವಿ : 20

ಬಳ್ಳಾರಿ: 20

ಚಾಮರಾಜನಗರ: 32

ಚಿಕ್ಕಮಗಳೂರು: 25

ಧಾರವಾಡ: 07

ಹಾಸನ: 20

ಕೆನರಾ: 32

ಕೊಡಗು: 16

ಕಲಬುರಗಿ: 23

ಮಂಗಳೂರು: 20

ಮೈಸೂರು: 32

ಶಿವಮೊಗ್ಗ: 30

ಒಟ್ಟು : 310

ವಿದ್ಯಾರ್ಹತೆ: ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ದೈಹಿಕ ಸಾಮಾರ್ಥ್ಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಆರಂಭಿಕ ದಿನಾಂಕ: 27-09-2023 & ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26-10-2023

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲುಸು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರು 27 ವರ್ಷ, ಒಬಿಸಿ ಅಭ್ಯರ್ಥಿಗಳು 30 ವರ್ಷ, SC/ST ಅಭ್ಯರ್ಥಿಗಳು 32 ವರ್ಷ ಮೀರದಿದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ/2A/2B/3A/3B ಅಭ್ಯರ್ಥಿಗಳಿಗೆ 125 ರೂ. ಅರ್ಜಿ ಶುಲ್ಕವಿದ್ದರೆ, SC/ST/ಪ್ರವರ್ಗ-1ರ ಅಭ್ಯರ್ಥಿಗಳಿಗೆ 45 ರೂ. ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://aranya.gov.in/ ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

ಇದನ್ನೂ ಓದಿಈ ಬಾರಿ ಸರ್ಕಾರಿ ಉದ್ಯೋಗಿಗಳಿಗೆ ಡಬಲ್ ಧಮಾಕ ! ವೇತನದಲ್ಲಿ ಇಷ್ಟು ಹೆಚ್ಚಳ ಫಿಕ್ಸ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News