ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ.

Written by - Zee Kannada News Desk | Last Updated : Sep 23, 2023, 12:09 AM IST
  • ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ
  • ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ
ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ.

ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ,  ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23  ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ: ಆರಂಭದಲ್ಲಿ ಜೈಲರ್ ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದರಂತೆ ಸೂಪರ್ ಸ್ಟಾರ್.. ಕಾರಣ ಏನು ಗೊತ್ತಾ?

ಸೆಪ್ಟೆಂಬರ್ 23  ನಾಲ್ಕನೇ ಶನಿವಾರವದಂದೂ  ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು.ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

Trending News