ಬೆಂಗಳೂರು : ಸುದ್ದಿಗಾರರ ಜತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ಇವರು ಗೆಲ್ಲುತ್ತಿದ್ದರೆ ಎಂಬುದನ್ನು ಎದೆ ಮುಟ್ಟಿಕೊಂಡು ಹೇಳಲಿ ಎಂದು ಪ್ರೆಶ್ನೆ ಮಾಡಿದ್ದಾರೆ.
ಹೊಳೆನರಸೀಪುರದಲ್ಲಿ ಎಚ್. ಡಿ. ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿಕ್ಕ ನಾಯಕನಹಳ್ಳಿ ಸುರೇಶ್ ಬಾಬು, ಗುರುಮಿಠಕಲ್ ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ, ಚನ್ನ ರಾಯಪಟ್ಟಣ ಬಾಲಕೃಷ್ಣ ಇವರೆಲ್ಲ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ. ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು ಇಲ್ಲದಿದ್ದರೆ ಸೋಲುತ್ತಿದ್ದರು. ಮುಸ್ಲಿಂ ಸಮುದಾಯ ಜೆಡಿಎಸ್ ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5 ರಿಂದ ಆರು ಸ್ಥಾನ ಬರುತ್ತಿತ್ತು ಎಂದು ಹೇಳಿದ್ದಾರೆ.
ಇದನ್ನೂ ಓದಿ-ಸ್ಥಬ್ದವಗುತ್ತಾ ರಾಜಧಾನಿ ಬೆಂಗಳೂರು? ಬಂದ್ ಗೆ ಯಾರ್ಯಾರ ಬೆಂಬಲ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಎಚ್. ಡಿ. ಕುಮಾರಸ್ವಾಮಿ ಅವರು ಬಿಜೆಪಿ ಜತೆ ಹೋಗುವ ಸಲುವಾಗಿ ಮುಸ್ಲಿಂ ಮತ ಕೊಡಲಿಲ್ಲ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಜಮೀರ್ ಅಹಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಅಪಾರವಾಗಿ ಗೌರವಿಸುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಇದ್ದವರು. ಆದರೆ ಕುಮಾರಸ್ವಾಮಿ ತಮ್ಮ ರಾಜಕಾರಣಕ್ಕೆ ಗೌಡರ ತತ್ವ ಸಿದ್ದಾಂತ ಬಲಿ ಕೊಟ್ಟಿದ್ದಾರೆ ಎಂದು ದೂರಿದ್ದಾರೆ.
ಇದನ್ನೂ ಓದಿ-6ನೇ ಗ್ಯಾರಂಟಿಯಾಗಿ ʼಮದ್ಯಭಾಗ್ಯʼ : ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.