ನಿವೇದಿತಾ ಶಿವರಾಜ್‌ಕುಮಾರ್‌ 'ಫೈರ್ ಫ್ಲೈ' ಮೊದಲ‌ ಹಂತದ ಶೂಟಿಂಗ್‌ ಮುಕ್ತಾಯ...!

Niveditha Shivarajkumar : ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಫೈರ್ ಫ್ಲೈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ದ್ವಿತೀಯ ಹಂತದ ಚಿತ್ರೀಕರಣ ಶುರುವಾಗಲಿದೆ.

Written by - YASHODHA POOJARI | Edited by - Krishna N K | Last Updated : Sep 24, 2023, 05:31 PM IST
  • ʼಫೈರ್ ಫ್ಲೈʼ ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಚಿತ್ರ
  • ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ.
  • ಫೈರ್ ಫ್ಲೈ ಸಿನಿಮಾ ಪೋಸ್ಟರ್ ಮೂಲಕ ಗಮನಸೆಳೆದಿತ್ತು.
ನಿವೇದಿತಾ ಶಿವರಾಜ್‌ಕುಮಾರ್‌ 'ಫೈರ್ ಫ್ಲೈ' ಮೊದಲ‌ ಹಂತದ ಶೂಟಿಂಗ್‌ ಮುಕ್ತಾಯ...! title=

Firefly Kannada movie : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕೊಡುಗೆ ಫೈರ್ ಫ್ಲೈ. ಪೋಸ್ಟರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಮೈಸೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ದ್ವಿತೀಯ ಹಂತದ ಚಿತ್ರೀಕರಣ ಶುರುವಾಗಲಿದೆ.

ಫೈರ್ ಫ್ಲೈ ಸಿನಿಮಾವನ್ನ ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಡ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ: ವಿರಾಟ್ ಬಯೋಪಿಕ್‌ನಲ್ಲಿ ತೆಲುಗು ನಟ ರಾಮ್..! ಕಿಂಗ್‌ ಕೊಹ್ಲಿ ಕುರಿತು ನಟನ ಇಂಟ್ರಸ್ಟಿಂಗ್‌ ಹೇಳಿಕೆ ವೈರಲ್‌

ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್‌.ಕೆ ಸಂಸ್ಥೆಯ ಮಾಯಾಬಜಾರ್ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿಯೇ ಕೆಲಸ ಮಾಡಿದ್ದರು. ಗುರು ದೇಶಪಾಂಡೆ ಅವರ ಪೆಂಟಗನ್ ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ರು. ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News