ಬೆಂಗಳೂರು : ನೀವು ಕೂಡಾ ಸರ್ಕಾರ ನಡೆಸುವ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಇತ್ತೀಚೆಗೆ, ಪಿಪಿಎಫ್, ಸುಕನ್ಯಾ ಸಮೃದ್ಧಿ ಯೋಜನೆ, ಹಿರಿಯ ನಾಗರಿಕ ಉಳಿತಾಯ ಯೋಜನೆ (ಎಸ್ಸಿಎಸ್ಎಸ್) ಮತ್ತು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್ಎಸ್ಸಿ) ನಿಯಮಗಳನ್ನು ಹಣಕಾಸು ಸಚಿವಾಲಯವು ಬದಲಾಯಿಸಿದೆ. ಹೊಸ ನಿಯಮದ ಬಗ್ಗೆ ಈಗಾಗಲೇ ಹಣಕಾಸು ಸಚಿವಾಲಯ ಎಚ್ಚರಿಕೆ ನೀಡಿದೆ. ಈ ಎಲ್ಲಾ ಯೋಜನೆಗಳಲ್ಲಿ ಹೂಡಿಕೆ ಮಾಡಲು ಆಧಾರ್ ಮತ್ತು ಪ್ಯಾನ್ ಅಗತ್ಯ ಎನ್ನುವ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ.
ಹೂಡಿಕೆದಾರರಿಗೆ ಸೆಪ್ಟೆಂಬರ್ 30 ರವರೆಗೆ ಸಮಯ :
ಇದಕ್ಕಾಗಿ ಹೂಡಿಕೆದಾರರಿಗೆ ಹಣಕಾಸು ಸಚಿವಾಲಯ ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ನೀಡಿದೆ. ಹಣಕಾಸು ಸಚಿವಾಲಯದ ಸೂಚನೆಯನ್ನು ನಿರ್ಲಕ್ಷಿಸಿದರೆ, ಅಕ್ಟೋಬರ್ 1 ರಿಂದ ನಿಮ್ಮ ಖಾತೆಯನ್ನು ಮುಚ್ಚಲಾಗುವುದು. ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, ಪಿಪಿಎಫ್, ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ), ಅಂಚೆ ಕಚೇರಿ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆಗಳಂತಹ ಎಲ್ಲಾ ರೀತಿಯ ಸಣ್ಣ ಉಳಿತಾಯ ಯೋಜನೆಗಳಿಗೆ ಹೂಡಿಕೆದಾರರು ಕೆವೈಸಿಗೆ ಪ್ಯಾನ್ ಮತ್ತು ಆಧಾರ್ ಒದಗಿಸಬೇಕಾಗುತ್ತದೆ ಎಂದು ಹೇಳಿದೆ. ಈ ಹಿಂದೆ ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಆಧಾರ್ ಇಲ್ಲದಿದ್ದರೂ ಈ ಯೋಜನೆಗಳಲ್ಲಿ ಹೂಡಿಕೆ ಮಾಡಬಹುದಿತ್ತು.
ಇದನ್ನೂ ಓದಿ : Creta, Nexon ಹಿಂದಿಕ್ಕಿದೆ ಈ ಎಸ್ಯುವಿ, ಬೆಲೆ 10 ಲಕ್ಷಕ್ಕಿಂತ ಕಡಿಮೆ!
2015 ರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಪ್ರಾರಂಭ :
ಒಂದು ವೇಳೆ ನೀವು ಇನ್ನೂ ಕೂಡಾ ಆಧಾರ್ ಮಾಡದಿದ್ದರೆ, ಆಧಾರ್ ನೋಂದಣಿ ಸಂಖ್ಯೆಯ ಮೂಲಕವೂ ಹೂಡಿಕೆ ಮಾಡಬಹುದು. ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಹೂಡಿಕೆಯ ಮೇಲೆ ಪ್ಯಾನ್ ಕಾರ್ಡ್ ನೀಡುವುದು ಅಗತ್ಯ ಎಂದು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಮೋದಿ ಸರ್ಕಾರ 2015 ರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಪ್ರಾರಂಭಿಸಿತು. ಸರ್ಕಾರದ ಅಧಿಸೂಚನೆಯ ಮೊದಲು, ಈ ಯೋಜನೆಯಲ್ಲಿ ಹೂಡಿಕೆಯನ್ನು ಆಧಾರ್ ಇಲ್ಲದೆ ಮಾಡಬಹುದಾಗಿತ್ತು. ಆದರೆ, ಈಗ ಈ ನಿಯಮವನ್ನು ಬದಲಾಯಿಸಲಾಗಿದೆ. ಸುಕನ್ಯಾ ಸಮೃದ್ಧಿಯಂತಹ ಯೋಜನೆಯಲ್ಲಿ ಖಾತೆ ತೆರೆಯುವಾಗ, ಪ್ಯಾನ್ ಕಾರ್ಡ್ ಅಥವಾ ಫಾರ್ಮ್ 60 ಅನ್ನು ಸಲ್ಲಿಸಬೇಕು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಒಂದು ವೇಳೆ ಖಾತೆ ತೆರೆಯುವಾಗ ಈ ದಾಖಲೆಗಳನ್ನು ಒದಗಿಸುವುದು ಸಾಧ್ಯವಾಗದೆ ಇದ್ದರೆ, ಅದನ್ನು ಎರಡು ತಿಂಗಳೊಳಗೆ ಸಲ್ಲಿಸಬಹುದು.
ಯಾವ ಯೋಜನೆಗಳಿಗೆ ನಿಯಮ ಅನ್ವಯಿಸುತ್ತದೆ? :
- ಪೋಸ್ಟ್ ಆಫೀಸ್ ಫಿಕ್ಸೆಡ್ ಡೆಪಾಸಿಟ್ (FD)
- ಪೋಸ್ಟ್ ಆಫೀಸ್ ರಿಕರಿಂಗ್ ಡೆಪಾಸಿಟ್ (RD)
- ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (POMIS)
- ಸುಕನ್ಯಾ ಸಮೃದ್ಧಿ ಯೋಜನೆ (SSY)
- ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ (TD)
- ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರಗಳು
- ಸಾರ್ವಜನಿಕ ಭವಿಷ್ಯ ನಿಧಿ ( PPF)
- ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS)
- ಕಿಸಾನ್ ವಿಕಾಸ್ ಪತ್ರ (KVP)
ಇದನ್ನೂ ಓದಿ : ಸರ್ಕಾರಿ ನೌಕರರ ವೇತನದಲ್ಲಿ 44%ದಷ್ಟು ಹೆಚ್ಚಳ ? ಯಾವಾಗ ಸಿಗುವುದು ಅನುಮೋದನೆ ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.