ಬೆಂಗಳೂರು: ಭಾರತದ ‘ಹಸಿರು ಕ್ರಾಂತಿ’ಯ ಪಿತಾಮಹನೆಂದೇ ಖ್ಯಾತಿಯಾಗಿದ್ದ ಡಾ.ಎಂ.ಎಸ್.ಸ್ವಾಮಿನಾಥನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 98 ವರ್ಷ ವಯಸ್ಸಾಗಿತ್ತು. ವಿಶ್ವ ಕಂಡ ಶ್ರೇಷ್ಠ ಕೃಷಿ ವಿಜ್ಞಾನಿಯಾಗಿದ್ದ ಸ್ವಾಮಿನಾಥನ್ ಅವರು ಬುಧವಾರ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ವರ್ಷವಷ್ಟೇ ಸ್ವಾಮಿನಾಥನ್ ಅವರ ಪತ್ನಿ ಮೀನಾ ಸ್ವಾಮಿನಾಥನ್ ನಿಧರಾಗಿದ್ದರು. ಸ್ವಾಮಿನಾಥನ್ ಅವರು ತಮ್ಮ ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಸ್ವಾಮಿನಾಥನ್ ನಿಧನಕ್ಕೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 1925ರ ಆಗಸ್ಟ್ 7ರಂದು ಕುಂಭಕೋಣಂ ಜಿಲ್ಲೆಯಲ್ಲಿ ಜನಿಸಿದ ಸ್ವಾಮಿನಾಥನ್ ತಮ್ಮ ಸ್ವಂತ ಊರಿನಲ್ಲಿ ಶಿಕ್ಷಣ ಪೂರ್ಣಗೊಳಿಸಿದ್ದರು. ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮವು ಸ್ವಾಮಿನಾಥನ್ ಅವರನ್ನು ‘ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ’ನೆಂದು ಬಣ್ಣಿಸಿದೆ.
ಇದನ್ನೂ ಓದಿ: ವರ್ಚಸ್ಸು ಕಳೆದುಕೊಂಡಿರುವ ಕಾಂಗ್ರೆಸ್ ಆಪರೇಷನ್ ಗೆ ಮುಂದಾಗಿದೆ : ಬಸವರಾಜ ಬೊಮ್ಮಾಯಿ
Deeply saddened by the demise of Dr. MS Swaminathan Ji. At a very critical period in our nation’s history, his groundbreaking work in agriculture transformed the lives of millions and ensured food security for our nation. pic.twitter.com/BjLxHtAjC4
— Narendra Modi (@narendramodi) September 28, 2023
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಡಾ.ಎಂ.ಎಸ್.ಸ್ವಾಮಿನಾಥನ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಅತ್ಯಂತ ನಿರ್ಣಾಯಕ ಅವಧಿಯಲ್ಲಿ, ಕೃಷಿಯಲ್ಲಿ ಮಾಡಿದ ಅವರ ಅದ್ಭುತ ಕೆಲಸವು ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಿತು ಮತ್ತು ನಮ್ಮ ರಾಷ್ಟ್ರಕ್ಕೆ ಆಹಾರ ಭದ್ರತೆಯನ್ನು ಒದಗಿಸಿತು’ ಎಂದು ಸ್ಮರಿಸಿದ್ದಾರೆ.
Sad to know that eminent agricultural scientist & father of India's Green Revolution Shri M S Swaminathan is no more with us.
His contribution to India's agricultural progress & economy is immense. His works are widely referred to by the governments.
My deepest condolences to… pic.twitter.com/lmcSt8qbdz
— Siddaramaiah (@siddaramaiah) September 28, 2023
‘ಖ್ಯಾತ ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್.ಸ್ವಾಮಿನಾಥನ್ ಅವರ ನಿಧನದ ಸುದ್ದಿ ತಿಳಿದು ದುಃಖವಾಗುತ್ತಿದೆ. ಭಾರತದ ಕೃಷಿ ಪ್ರಗತಿ ಮತ್ತು ಆರ್ಥಿಕತೆಗೆ ಅವರ ಕೊಡುಗೆ ಅಪಾರವಾಗಿದೆ. ಅವರ ಕೆಲಸ-ಕಾರ್ಯಗಳ ಬಗ್ಗೆ ಸರ್ಕಾರಗಳು ವ್ಯಾಪಕವಾಗಿ ಉಲ್ಲೇಖಿಸುತ್ತವೆ. ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಂತಾಪಗಳು’ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ನೀವು ಇನ್ನೂ ಆಸ್ತಿಯನ್ನು ನೋಂದಾಯಿಸಿಕೊಂಡಿಲ್ವಾ..?
ಭಾರತವು ಆಹಾರ ಭದ್ರತೆ ಸಾಧಿಸುವಲ್ಲಿ ಮಹತ್ವದ ಕೊಡುಗೆ ನೀಡಿದ, ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಪಡಿಸಿದ ಶ್ರೇಷ್ಠ ಕೃಷಿ ವಿಜ್ಞಾನಿ ಪದ್ಮವಿಭೂಷಣ ಎಂ.ಎಸ್.ಸ್ವಾಮಿನಾಥನ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು.
ಸ್ವಾತಂತ್ರ್ಯ ಭಾರತವು ಆಹಾರ ಪದಾರ್ಥಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವುದಕ್ಕೆ ಸ್ವಾಮಿನಾಥನ್ ಅವರ ದುಡಿಮೆ… pic.twitter.com/8nfU2I1JRv
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 28, 2023
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ‘ಭಾರತವು ಆಹಾರ ಭದ್ರತೆ ಸಾಧಿಸುವಲ್ಲಿ ಮಹತ್ವದ ಕೊಡುಗೆ ನೀಡಿದ, ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಪಡಿಸಿದ ಶ್ರೇಷ್ಠ ಕೃಷಿ ವಿಜ್ಞಾನಿ ಪದ್ಮವಿಭೂಷಣ ಎಂ.ಎಸ್.ಸ್ವಾಮಿನಾಥನ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಸ್ವಾತಂತ್ರ್ಯ ಭಾರತವು ಆಹಾರ ಪದಾರ್ಥಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವುದಕ್ಕೆ ಸ್ವಾಮಿನಾಥನ್ ಅವರ ದುಡಿಮೆ ಬಹಳ ದೊಡ್ಡದು. ಅಷ್ಟೇ ಅಲ್ಲ, ಅವರು ದೇಶದ ಕೃಷಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾದ ಹಸಿರುಕ್ರಾಂತಿಯ ಹರಿಕಾರರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.