ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

Basavaraj Bommai : ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಪೊಲೀಸರು ಸೂಕ್ತ ಮುಂಜಾಗ್ರತ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. 

Written by - Prashobh Devanahalli | Last Updated : Oct 2, 2023, 12:44 PM IST
  • ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ
  • ಸೂಕ್ತ ಮುಂಜಾಗ್ರತ ಕ್ರಮ ತೆಗೆದುಕೊಂಡಿಲ್ಲ
  • ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ title=

ಬೆಂಗಳೂರು: ರಾಜ್ಯದಲ್ಲಿ  ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆ ನಡೆದಿದೆ. ಇಂತ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. 

ಶಿವಮೊಗ್ಗದ ಮೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂತ ಘಟನೆ ನಡೆಯುತ್ತದೆ. ಇಂತ ಸ್ಟೇಷನ್‌ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿ ಹಾಕಬೇಕು. ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ ಎಂದರು.  

ಇದನ್ನೂ ಓದಿ: Cauvery Dispute: ಒಣಗಿದ ತರಕಾರಿ ಹಿಡಿದು ಆಕ್ರೋಶ..! ನೀರು ಬಿಡದಂತೆ ಆಗ್ರಹ 

ಇದರಿಂದ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆ. ಇದರ ಮೂಲ ಪ್ರತಿ ಡಿಸ್ಟಿಕ್‌ನಲ್ಲಿ ಕ್ಲಬ್,  ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ಇದನ್ನ ಸಮಗ್ರವಾಗಿ ನಿಭಾಯಿಸಬೇಕು. ಶಾಂತಿ ಕಾಪಾಡಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು. ಅಧಿಕಾರಿಳನ್ನು ಯಾವುದೇ ಮುಲಾಜಿಲ್ಲದೆ ಟ್ರಾನ್ಸ್‌ಫರ್ ಮಾಡಿದ್ಲರೆ. ಇಂತ ಘಟನೆ ನಿಲ್ಲುತ್ತದೆ ಎಂದು ಹೇಳಿದರು.

ಗಾಂಧಿ ಕಂಡ ಕನಸು ಕರ್ನಾಟಕದಲ್ಲಿ ನನಸು ಅಂತ ಸರ್ಕಾರ  ಜಾಹೀರಾತು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವರು ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ ನೀತಿ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವುದು. ಸಿಕ್ಕಲ್ಲೆಲ್ಲಾ ಮಧ್ಯದಂಗಡಿ ಶುರು ಮಾಡಿದ್ದಾರೆ. ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮಧ್ಯದಂಗಡಿ ತೆರಯುತ್ತಿದ್ದಾರೆ. ಹೇಳಲು ಮಾತ್ರ ಗಾಂಧಿ ಶಾಂತಿ ಮಂತ್ರ ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸಗಳು ಎಂದು ಹೇಳಿದರು.

ಇದನ್ನೂ ಓದಿ: ಪೋಷಕರು ಐಫೋನ್ ಕೊಡಿಸಿಲ್ಲ ಅಂತಾ ಮನೆ ಬಿಟ್ಟು ಹೋದ ಬಾಲಕರು..! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News