ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಈಗ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬ್ರೇಕ್ ಹಾಕಿದೆ ಎಂಬ ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ‘ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂಬ ಆರೋಪ ಶುದ್ಧ ಸುಳ್ಳು. ಆರೋಗ್ಯ, ಶಿಕ್ಷಣ, ಕೃಷಿ ಮತ್ತು ವಸತಿ ಕ್ಷೇತ್ರದ ಯೋಜನೆಗಳು ಕಾಲಬದ್ಧವಾಗಿ ಜಾರಿಗೊಳ್ಳುತ್ತಿವೆ. ಕರ್ನಾಟಕ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗುತ್ತಿದೆ’ ಎಂದು ಹೇಳಿದ್ದಾರೆ.
ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂಬ ಆರೋಪ ಶುದ್ಧ ಸುಳ್ಳು. ಆರೋಗ್ಯ, ಶಿಕ್ಷಣ, ಕೃಷಿ ಮತ್ತು ವಸತಿ ಕ್ಷೇತ್ರದ ಯೋಜನೆಗಳು ಕಾಲಬದ್ಧವಾಗಿ ಜಾರಿಗೊಳ್ಳುತ್ತಿವೆ. ಕರ್ನಾಟಕ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗುತ್ತಿದೆ. ಮೂಲಸೌಕರ್ಯಗಳ ನಿರ್ಮಾಣ ಭರದಿಂದ ಸಾಗಿದೆ. ಉದ್ಯೋಗವಕಾಶಗಳು ಹೆಚ್ಚುತ್ತಿದೆ.…
— CM of Karnataka (@CMofKarnataka) October 6, 2023
ಇದನ್ನೂ ಓದಿ: ಕಲುಷಿತ ನೀರು ಕುಡಿದು ಮೃತಪಟ್ಟ ಘಟನೆ: ಸಂತ್ರಸ್ಥ ಕುಟುಂಬಗಳ ಜವಾಬ್ದಾರಿ ಸರ್ಕಾರ ವಹಿಸಿಕೊಳ್ಳಲಿದೆ ಎಂದ ಸಿಎಂ
‘ಮೂಲಸೌಕರ್ಯಗಳ ನಿರ್ಮಾಣ ಭರದಿಂದ ಸಾಗಿದೆ. ಉದ್ಯೋಗವಕಾಶಗಳು ಹೆಚ್ಚುತ್ತಿದೆ. ಒಟ್ಟಿನಲ್ಲಿ ರಾಜ್ಯ ಅಭಿವೃದ್ದಿಯ ಪಥದಲ್ಲಿ ದಾಪುಗಾಲಿಡುತ್ತಿದೆ. ಹಿಂದಿನ ಸರ್ಕಾರದಲ್ಲಿ ದುರಾಡಳಿತ, ಸಾಲ ಮತ್ತು ಬದ್ಧತಾ ವೆಚ್ಚ ಮಿತಿಮೀರಿದ್ದರಿಂದ ಆರ್ಥಿಕ ಸ್ಥಿತಿ ಹದಗೆಟ್ಟಿತ್ತು. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಈಗ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬಿಜೆಪಿ ಪಕ್ಷದವರು ಶಿವಮೊಗ್ಗದಲ್ಲಿ ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? ಈದ್-ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಯಾರು ಕಲ್ಲು ಎಸೆದಿದ್ದಾರೋ ಅವರ ಮೇಲೆ ಕ್ರಮ ಜರುಗಿಸಲಾಗಿದೆ. ತಪ್ಪಿತಸ್ಥರು ಯಾವ ಪಕ್ಷದವರೇ ಆಗಿದ್ದರೂ, ಯಾರೇ ಆಗಿದ್ದರೂ ಅವರನ್ನು ಬಿಡಬೇಡಿ, ಸೂಕ್ತ ಕ್ರಮ ಜರುಗಿಸಿ, ಯಾರೊಬ್ಬರಿಗೂ ಕಾನೂನು ಕೈಗೆತ್ತಿಕೊಳ್ಳಲು ಬಿಡಬೇಡಿ…
— CM of Karnataka (@CMofKarnataka) October 6, 2023
‘ಬಿಜೆಪಿ ಪಕ್ಷದವರು ಶಿವಮೊಗ್ಗದಲ್ಲಿ ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? ಈದ್-ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಯಾರು ಕಲ್ಲು ಎಸೆದಿದ್ದಾರೋ ಅವರ ಮೇಲೆ ಕ್ರಮ ಜರುಗಿಸಲಾಗಿದೆ. ತಪ್ಪಿತಸ್ಥರು ಯಾವ ಪಕ್ಷದವರೇ ಆಗಿದ್ದರೂ, ಯಾರೇ ಆಗಿದ್ದರೂ ಅವರನ್ನು ಬಿಡಬೇಡಿ, ಸೂಕ್ತ ಕ್ರಮ ಜರುಗಿಸಿ, ಯಾರೊಬ್ಬರಿಗೂ ಕಾನೂನು ಕೈಗೆತ್ತಿಕೊಳ್ಳಲು ಬಿಡಬೇಡಿ ಎಂದು ಬಹಳ ಸ್ಪಷ್ಟವಾಗಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ. ಅಪರಾಧಿಗಳಿಗೆ ಕಾನೂನಿನಡಿ ತಕ್ಕ ಶಿಕ್ಷೆಯಾಗುತ್ತದೆ, ಇದರಲ್ಲಿ ಸತ್ಯ ಶೋಧನೆ ಮಾಡಲು ಏನಿದೆ?’ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಸಮಾಜ ಒಡೆವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಹೊಲಿಯುತ್ತಿದೆ : ಡಿಸಿಎಂ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.