ತೆರೆಯಿತು 28ರ ಹರೆಯದ ಆಟಗಾರನ ಅದೃಷ್ಟದ ಬಾಗಿಲು..! ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಆಲ್’ರೌಂಡರ್

Asian Games 2023: ನಿಧಾನಗತಿಯ ಎಡಗೈ ಬೌಲಿಂಗ್ ಆಲ್‌’ರೌಂಡರ್ ಶಹಬಾಜ್ ಅಹ್ಮದ್ ಐಪಿಎಲ್‌’ನಲ್ಲಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಶಹಬಾಜ್ ಇದುವರೆಗೆ 39 ಐಪಿಎಲ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಕೇವಲ 14 ವಿಕೆಟ್‌’ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

Written by - Bhavishya Shetty | Last Updated : Oct 6, 2023, 10:19 PM IST
    • ಏಷ್ಯನ್ ಗೇಮ್ಸ್ 2023 ರ ಕ್ರಿಕೆಟ್ ಸೆಮಿಫೈನಲ್ ಪಂದ್ಯ
    • 28ರ ಹರೆಯದ ಆಟಗಾರನಿಗೆ ಪದಾರ್ಪಣೆ ಮಾಡುವ ಅವಕಾಶ
    • ಬೌಲಿಂಗ್ ಆಲ್‌ರೌಂಡರ್ ಶಹಬಾಜ್ ಅಹ್ಮದ್
ತೆರೆಯಿತು 28ರ ಹರೆಯದ ಆಟಗಾರನ ಅದೃಷ್ಟದ ಬಾಗಿಲು..! ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಆಲ್’ರೌಂಡರ್ title=
Asian Games 2023

Asian Games 2023: ಏಷ್ಯನ್ ಗೇಮ್ಸ್ 2023 ರ ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಇನ್ನು ಝೆಜಿಯಾಂಗ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಇನ್ನೊಂದೆಡೆ ಈ ಪಂದ್ಯದಲ್ಲಿ ಭಾರತದ 28ರ ಹರೆಯದ ಆಟಗಾರನಿಗೆ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: ವಿರಾಟ್ ಅಂದ್ರೆ ಇಷ್ಟನಾ? ಇಷ್ಟ ಇಲ್ವಾ?... ಗೌತಮ್ ಗಂಭೀರ್ ಕೊಟ್ಟ ಉತ್ತರ ಏನು ಗೊತ್ತಾ?

ಬೌಲಿಂಗ್ ಆಲ್‌ರೌಂಡರ್ ಶಹಬಾಜ್ ಅಹ್ಮದ್ ಟೀಂ ಇಂಡಿಯಾಕ್ಕೆ ಟಿ20 ಕ್ರಿಕೆಟ್‌’ಗೆ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ. ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅವರು ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ಪರ ಶಹಬ್ಬಾಸ್ ಏಕದಿನ ಪಂದ್ಯಗಳನ್ನಾಡಿದ್ದಾರೆ. ಇದುವರೆಗೆ ಕೇವಲ 3 ಏಕದಿನ ಪಂದ್ಯಗಳನ್ನು ಮಾತ್ರ ಆಡಲು ಸಾಧ್ಯವಾಗಿದೆ. ಈ ಪಂದ್ಯಗಳಲ್ಲಿ 3 ವಿಕೆಟ್‌’ಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: ಈ ಬಳ್ಳಿಯ ಎಲೆಗಳನ್ನು ಅರೆದು ಕೂದಲಿಗೆ ಹಚ್ಚಿದರೆ ಒಂದೇ ಗಂಟೆಯಲ್ಲಿ ಕಪ್ಪಾಗುತ್ತೆ ಬಿಳಿಕೂದಲು

ನಿಧಾನಗತಿಯ ಎಡಗೈ ಬೌಲಿಂಗ್ ಆಲ್‌’ರೌಂಡರ್ ಶಹಬಾಜ್ ಅಹ್ಮದ್ ಐಪಿಎಲ್‌’ನಲ್ಲಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಶಹಬಾಜ್ ಇದುವರೆಗೆ 39 ಐಪಿಎಲ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಕೇವಲ 14 ವಿಕೆಟ್‌’ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಟಿಂಗ್ ಮಾಡುವಾಗ, ಅವರು ಅದೇ ಸಂಖ್ಯೆಯ ಪಂದ್ಯಗಳಲ್ಲಿ 321 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಲ್ಲಿ ಅವರ ಗರಿಷ್ಠ ಸ್ಕೋರ್ 45 ರನ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News