ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಭಯಬಿದ್ದು ಬಿಜೆಪಿ ರಾವಣನ ಹೆಸರು ತಂದಿದೆ: ಡಿಸಿಎಂ ಡಿಕೆಶಿ

ಬಿಜೆಪಿಯ ಈ ನಡೆ ವಿರುದ್ಧ ಇಡೀ ದೇಶದಾದ್ಯಂತ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿಯೂ ಸಚಿವರಾದ ರಾಮಲಿಂಗಾರೆಡ್ಡಿಯವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.   

Written by - Prashobh Devanahalli | Edited by - Puttaraj K Alur | Last Updated : Oct 7, 2023, 05:40 PM IST
  • ರಾಹುಲ್ ಗಾಂಧಿ ಜನಪ್ರಿಯತೆ ಹಾಗೂ ನಾಯಕತ್ವಕ್ಕೆ ಹೆದರಿ ಬಿಜೆಪಿಯವರು ರಾವಣನಂತೆ ಬಿಂಬಿಸಿದ್ದಾರೆ
  • ಬಿಜೆಪಿಯವರಿಗೆ ರಾಮ ಮತ್ತು ರಾವಣನ ಯುದ್ಧದ ಪುರಾಣ ಸಂಪೂರ್ಣವಾಗಿ ತಿಳಿದಿಲ್ಲ
  • ರಾಹುಲ್ ಗಾಂಧಿಯವರನ್ನು ಟೀಕಿಸಿದ್ದ ಬಿಜೆಪಿಗೆ ಡಿ.ಕೆ.ಶಿವಕುಮಾರ್ ತಿರುಗೇಟು
ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಭಯಬಿದ್ದು ಬಿಜೆಪಿ ರಾವಣನ ಹೆಸರು ತಂದಿದೆ: ಡಿಸಿಎಂ ಡಿಕೆಶಿ title=
ಬಿಜೆಪಿಗೆ ಡಿ.ಕೆ.ಶಿವಕುಮಾರ್ ತಿರುಗೇಟು!

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜನಪ್ರಿಯತೆ ಹಾಗೂ ನಾಯಕತ್ವಕ್ಕೆ ಹೆದರಿ ಅವರನ್ನು, ರಾವಣನಂತೆ ಬಿಜೆಪಿಯವರು ಬಿಂಬಿಸಿದ್ದಾರೆ. ಬಿಜೆಪಿಗೆ ರಾಮ-ರಾವಣನ ಯುದ್ಧದ ಪುರಾಣ ಸಂಪೂರ್ಣವಾಗಿ ತಿಳಿದಿಲ್ಲ. ಅದಕ್ಕೆ ಈ ರೀತಿ ಮಾಡಿದ್ದಾರೆ ಎಂದು ಬಿಜೆಪಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ರಾಹುಲ್‌ಗಾಂಧಿಯವರನ್ನು ರಾವಣನನ್ನಾಗಿ ಬಿಂಬಿಸಿ ತಿರುಚಿರುವ ಪೋಸ್ಟರ್ ಹಂಚಿಕೊಂಡಿದ್ದ ಬಿಜೆಪಿಗೆ ತಿರುಗೇಟು ನೀಡಿದರು. ‘ಉತ್ತರ ಭಾರತದಲ್ಲಿ ರಾವಣನನ್ನು ಕೂಡ ಪೂಜಿಸುವ ಪದ್ದತಿ ಇದೆ. ನಮ್ಮ ಸಂಸ್ಕೃತಿಯನ್ನು ಸರಿಯಾಗಿ ತಿಳಿದುಕೊಂಡಿದ್ದರೆ ಈ ಮಟ್ಟಕ್ಕೆ ಬಿಜೆಪಿಯವರು ಇಳಿಯುತ್ತಿರಲಿಲ್ಲ’ ಎಂದು ಟೀಕಿಸಿದ್ದಾರೆ.

 ‘ಭಾರತ್ ಜೋಡೋ ಯಾತ್ರೆ’ಯ ನಂತರ ಇಂಡಿಯಾ ಮೈತ್ರಿಕೂಟ ಪ್ರಾರಂಭವಾಯಿತು. ಇಂಡಿಯಾ ಮೈತ್ರಿಕೂಟ ಬಲಿಷ್ಠವಾಗಿ ರೂಪುಗೊಳ್ಳುತ್ತಿದೆ, ಇಂಡಿಯಾ ಒಂದಾಗುತ್ತಿದೆ. ಇಂಡಿಯಾ ರಕ್ಷಣೆಯಾಗಲಿದೆ. ಹೀಗಾಗಿ ಬಿಜೆಪಿಯವರು ರಾಹುಲ್ ಗಾಂಧಿ ಪಾದಯಾತ್ರೆ ಹಾಗೂ ಮೈತ್ರಿಗೆ ಹೆದರಿಕೊಂಡಿದ್ದಾರೆ. ಹೀಗಾಗಿ ರಾಹುಲ್ ಗಾಂಧಿಯವರಿಗೆ ರಾವಣನ ರೀತಿ 10 ತಲೆ ಹಾಕಿದ್ದಾರೆ. ರಾಮ-ರಾವಣರ ಯುದ್ಧ ಆಗುವ ಹೊತ್ತಿನಲ್ಲಿ ರಾವಣ, ರಾಮನಿಗೆ ಯುದ್ಧದ ಸಂಕಲ್ಪ ಮಾಡಿಸುತ್ತಾನೆ. ಬಿಜೆಪಿಯವರು ಪುರಾಣ ತಿಳಿದುಕೊಳ್ಳಬೇಕು. ರಾಹುಲ್‌ ಗಾಂಧಿ ಅವರ ಬಗ್ಗೆ ಎಷ್ಟು ಭಯಭೀತರಾಗಿದ್ದಾರೆ ಎನ್ನುವುದು 'ರಾವಣ' ಪೋಸ್ಟರ್ ನೋಡಿದರೆ ತಿಳಿಯುತ್ತದೆ” ಎಂದು ಹೇಳಿದರು. ‘ಬಿಜೆಪಿಯ ಈ ನಡೆ ವಿರುದ್ಧ ಇಡೀ ದೇಶದಾದ್ಯಂತ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇಲ್ಲಿಯೂ ಸಚಿವರಾದ ರಾಮಲಿಂಗಾರೆಡ್ಡಿಯವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ’ ಎಂದರು.   

ಇದನ್ನೂ ಓದಿ: ಡೆಂಗ್ಯೂ ಸೋಂಕು ಹರಡುವುದನ್ನು ನಿಯಂತ್ರಿಸುವುದೇಗೆ?

ರಾಜರಾಜೇಶ್ವರಿ ನಗರದ 9 ವಾರ್ಡ್‌ಗಳಿಗೆ ಸಂಬಂಧಿಸಿದ ಕಾಮಗಾರಿಗಳ ಬಿಲ್ ಮೊತ್ತ ಬಿಡುಗಡೆಯಾಗಿಲ್ಲ ಎನ್ನುವ ಪ್ರಶ್ನೆಗೆ ‘ಬಿಡುಗಡೆ ಆಗುತ್ತದೆ, ಅಲ್ಲಿನ ಶಾಸಕರೇ ಕಾಮಗಾರಿಗಳ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿ ತನಿಖೆ ಮಾಡಿ ಎಂದು ಮನವಿ ಮಾಡಿದ್ದಾರೆ. ಅವರ ಮನವಿಯನ್ನು ಗೌರವದಿಂದ ಸ್ವೀಕರಿಸುತ್ತೇವೆ ಎಂದರು. ತೆರಿಗೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ನಾಗರಿಕರು ತಮ್ಮ ಆಸ್ತಿಗೆ ಅನುಗುಣವಾಗಿ ತೆರಿಗೆಯನ್ನು ಸರಿಯಾಗಿ ಕಟ್ಟಿದರೆ ಸಾಕು. ಸದ್ಯಕ್ಕೆ ಸರ್ಕಾರ ಯಾವುದೇ ಹೊಸ ತೆರಿಗೆ ಹಾಕುವ ಬಗ್ಗೆ ಆಲೋಚನೆ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದರು.

ನೂತನ ಮದ್ಯದಂಗಡಿಗಳಿಗೆ ಅನುಮತಿ ನೀಡುವುದಿಲ್ಲವೆಂಬ ಸಿಎಂ ಹೇಳಿಕೆ ವಿಚಾರವಾಗಿ ಕೇಳಿದಾಗ, “ಮುಖ್ಯಮಂತ್ರಿಗಳು ಹೇಳಿದ್ದಾರೆ. ಮದ್ಯದಂಗಡಿ ತೆರೆಯಲು ಅದಕ್ಕೆ ಆದ ಕಾನೂನು ಎಂಎಸ್ಐಎಲ್ ಸೇರಿದಂತೆ ಅನೇಕ ನಿಯಮಗಳಿವೆ. ಹೀಗಾಗಿ ಪ್ರತಿ ಹಳ್ಳಿ ಹಳ್ಳಿಯಲ್ಲಿ ಮದ್ಯದಂಗಡಿ ತೆರೆಯಲು ಆಗುವುದಿಲ್ಲ. ಇವುಗಳನ್ನು ಒಂದು ವ್ಯವಸ್ಥಿತ ರೂಪದಲ್ಲಿ ತರಬೇಕಿದೆ” ಎಂದು ತಿಳಿಸಿದರು.

ಲಿಂಗಾಯತರ ಶೇ.20ರಷ್ಟು ಹಾಗೂ ಇತರೆಯವರ ಶೇ.80ರಷ್ಟು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಂದಿವೆ ಎಂಬ ಪ್ರಕಾಶ್ ರಾಥೋಡ್ ಹೇಳಿಕೆಗೆ "ಅಂತಹ ಯಾವುದೇ ಲೆಕ್ಕ ಇಲ್ಲ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಗೌಪ್ಯ ಮತದಾನ ವ್ಯವಸ್ಥೆ ಅಳವಡಿಸಿಕೊಂಡಿದ್ದೇವೆ. ಯಾರ್ಯಾರು ಮತ ಹಾಕುತ್ತಾರೆ ಎಂದು ಹೇಗೆ ತಿಳಿಯುತ್ತದೆ? ಇಡೀ ರಾಜ್ಯದ ಜನ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ, 136 ಸೀಟು ಕೊಟ್ಟಿದ್ದಾರೆ’ ಎಂದು ತಿಳಿಸಿದರು.

ಇದನ್ನೂ ಓದಿ: Dr Bro in Star Sports: ‘ಬಿಗ್‍ಬಾಸ್’ ಅಲ್ಲ ಕ್ರಿಕೆಟ್ ಕಾಮೆಂಟರಿ ನೀಡಲಿರುವ ಡಾ. ಬ್ರೋ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News